ಲಾಂಚ್‌ ಆಯ್ತು ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌ ಸರಣಿ! ಅತ್ಯಾಕರ್ಷಕ ಕ್ಯಾಮೆರಾ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ವೈವಿಧ್ಯಮಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಒಪ್ಪೋ ರೆನೋ 9 ಪ್ರೊ ಪ್ಲಸ್‌, ಒಪ್ಪೋ ರೆನೋ 9 ಪ್ರೊ ಮತ್ತು ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸರಣಿಯ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಒಂದೇ ಮಾದರಿಯ ಡಿಸ್‌ಪ್ಲೇ ವಿನ್ಯಾಸವನ್ನು ಪಡೆದುಕೊಂಡಿವೆ.

ಹೌದು

ಹೌದು, ಒಪ್ಪೋ ಕಂಪೆನಿ ಒಪ್ಪೋ 9 ಸರಣಿಯನ್ನು ಲಾಂಚ್‌ ಮಾಡಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿವೆ. ಇದರಲ್ಲಿ ಒಪ್ಪೋ ರೆನೋ 9 ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 8100-ಮ್ಯಾಕ್ಸ್ SOC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಒಪ್ಪೋ ರೆನೋ 9 ಪ್ರೊ ಫೋನ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆದರೆ ಒಪ್ಪೋ ರೆನೋ 9 ಪ್ರೊ ಪ್ಲಸ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ವೇಗವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಸರಣಿಯ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 9 ಪ್ರೊ ಪ್ಲಸ್‌ ಫೀಚರ್ಸ್‌ ಹೇಗಿದೆ?

ಒಪ್ಪೋ ರೆನೋ 9 ಪ್ರೊ ಪ್ಲಸ್‌ ಫೀಚರ್ಸ್‌ ಹೇಗಿದೆ?

ಒಪ್ಪೋ ರೆನೋ 9 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್‌ ರೆಟ್‌ ಮತ್ತು 240Hz ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಆಧಾರಿತ ColorOS 13.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 80W SuperVOOC ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ ರೆನೋ 9 ಪ್ರೊ ಫೀಚರ್ಸ್‌

ಒಪ್ಪೋ ರೆನೋ 9 ಪ್ರೊ ಫೀಚರ್ಸ್‌

ಒಪ್ಪೋ ರೆನೋ 9 ಪ್ರೊ ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಮಾಲಿ G610 MC6 GPU ಸಪೋರ್ಟ್‌ ಪಡೆದಿದೆ. ಈ ಫೋನ್‌ ಆಂಡ್ರಾಯ್ಡ್‌ 13 ಆಧಾರಿತ ColorOS 13.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 9 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಮಾರಿಸಿಲಿಕಾನ್ ಎಕ್ಸ್ ಇಮೇಜ್ ಚಿಪ್ ಅನ್ನು ಸಹ ಹೊಂದಿದೆ. ಜೊತೆಗೆ 67W SuperVOOC ವೇಗದ ಚಾರ್ಜಿಂಗ್‌ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್‌ 13 ಆಧಾರಿತ ColorOS 13.0 ಬೆಂಬಲವನ್ನು ಹೊಂದಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಸರಣಿ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಒಪ್ಪೋ ರೆನೋ 9 ಪ್ರೊ + ಸ್ಮಾರ್ಟ್‌ಫೋನ್‌ ಬೆಲೆಯು 16GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 3,999 (ಸುಮಾರು 45,700ರೂ) ನಿಂದ ಪ್ರಾರಂಭವಾಗುತ್ತದೆ. ಇದರ 16GB + 512GB ಸ್ಟೋರೇಜ್ ಮಾಡೆಲ್‌ ಬೆಲೆಯು CNY 4,399 (ಅಂದಾಜು 50,300ರೂ) ಆಗಿದೆ. ಇದು ಬಿಹೈ ಕ್ವಿಂಗ್, ಬ್ರೈಟ್ ಮೂನ್ ಬ್ಲ್ಯಾಕ್ ಮತ್ತು ಟುಮಾರೊ ಗೋಲ್ಡ್ ಶೇಡ್‌ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

ಇನ್ನು ಒಪ್ಪೋ ರೆನೋ 9 ಪ್ರೊ ಬೇಸ್ ಮಾಡೆಲ್‌ 16GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 3,499 (ಸುಮಾರು 40,000ರೂ)ಬೆಲೆ ಪಡೆದಿದೆ. ಇದರ 16GB + 512GB ಸ್ಟೋರೇಜ್ ಮಾದರಿಯ ಆಯ್ಕೆಯು CNY 3,799 (ಸರಿಸುಮಾರು 43,600ರೂ) ಬೆಲೆ ಹೊಂದಿದೆ. ಇದು ಬ್ರೈಟ್ ಮೂನ್ ಬ್ಲ್ಯಾಕ್, ಸ್ವಲ್ಪ ಡ್ರಂಕನ್ ಮತ್ತು ಟುಮಾರೊ ಗೋಲ್ಡ್ ಬಣ್ಣಗಳಲ್ಲಿ ಬರುತ್ತದೆ.

ಈ ಸರಣಿಯ ಒಪ್ಪೋ ರೆನೋ 9 ಸ್ಮಾರ್ಟ್‌ಫೋನ್‌ 8GB + 256GB ಮಾದರಿಯ ಆಯ್ಕೆಯ ಬೆಲೆ CNY 2,499 (ಅಂದಾಜು 28,500ರೂ)ಆಗಿದೆ. ಇದರ 12GB + 256GB ಸ್ಟೋರೇಜ್ ಮಾದರಿಯ ಆಯ್ಕೆಯು CNY 2,699 (ಸರಿಸುಮಾರು 30,800ರೂ)ಬೆಲೆಯಲ್ಲಿ ಬರಲಿದೆ. ಇನ್ನು 12GB + 512GB ಹೊಂದಿರುವ ಟಾಪ್ ರೂಪಾಂತರವು CNY 2,999 (ಸುಮಾರು 34,000ರೂ)ಬೆಲೆಯಲ್ಲಿ ಲಭ್ಯವಾಗಲಿದೆ. ಇದನ್ನು ಆಲ್ ಥಿಂಗ್ಸ್ ರೆಡ್, ಬ್ರೈಟ್ ಮೂನ್ ಬ್ಲ್ಯಾಕ್, ಟುಮಾರೊ ಗೋಲ್ಡ್ ಮತ್ತು ಸ್ವಲ್ಪ ಡ್ರಂಕನ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Here's list of the fastest 5G smartphones in the world

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X