ಒಪ್ಪೋ ರೆನೋ ಏಸ್ 2 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ತನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳಿಂದಲೇ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಒಪ್ಪೋ ಕಂಪೆನಿ ಸ್ಮಾರ್ಟ್‌ಫೋನ್‌ಗಳಿಗೆ ಸಹಜವಾಗಿಯೇ ನಿರೀಕ್ಷೆ ಇರುತ್ತೆ. ಪ್ರತಿಭಾರಿಯು ಹೊಸತನ್ನೇ ಪರಿಚಯಿಸುವ ಒಪ್ಪೋ ಮಾರುಕಟ್ಟೆಯಲ್ಲಿ ಸಂಚಲನ ಮುಡಿಸುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದ್ದು,ಈ ಭಾರಿ ಇನ್ನಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು

ಹೌದು, ಚೀನಾ ಮೂಲದ ಒಪ್ಪೋ ತನ್ನ ಹೊಸ ಒಪ್ಪೋ ರೆನೋ ಏಸ್‌2 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್‌ 13ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕುರಿತು ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಸದ್ಯ ಬಿಡುಗಡೆಗೆ ಸಿದ್ದವಿರುವ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಇನ್ನು ಲೀಕ್ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 90Hz ಹಾಗೂ 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಉತ್ತಮ ವೀಡಿಯೋ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ 2.8GHz ಹೊಂದಿರುವ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 865 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು,ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೆಜ್‌ ಸಾಮರ್ಥ್ಯ ಹೊಂದಿರುವ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಶೂಟರ್‌, ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು 65W ಸೂಪರ್ VOOC ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಲಬ್ಯ ಮಾಹಿತಿ ಪ್ರಕಾರ ಇದು ಅತಿ ವೇಗದ ಚಾರ್ಜಿಂಗ್ ವೇಗವನ್ನು ಹೊಂದಿರುವ ಫೋನ್ ಆಗಿರಬಹುದು. ಇನ್ನು ಈ ಡಿವೈಸ್‌ ವೈರ್‌ಲೆಸ್ ರಿವರ್ಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಇದು ಕಪ್ಪು, ನೀಲಿ ಮತ್ತು ನೇರಳೆ ಬಣ್ಣಗಳ ಆಯ್ಕೆಯಲ್ಲಿ ಲಬ್ಯವಾಗುವ ಸಾದ್ಯತೆ ಇದೆ.

Best Mobiles in India

English summary
Oppo has revealed that its Reno Ace 2 smartphone will have a 90Hz display with 180Hz touch sampling rate. .to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X