ಒಪ್ಪೋ ರೆನೋ 10 ಸರಣಿ ಫೋನ್‌ಗಳ ಸೇಲ್ ಪ್ರಾರಂಭ!..ಆಫರ್ ಏನಿದೆ?..ಫೀಚರ್ಸ್ ಏನು?
ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಒಪ್ಪೋ ರೆನೋ 10 ಸರಣಿಯ ಫೋನ್‌ಗಳು ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸರಣಿಯು ಒಪ್ಪೋ ರೆನೋ 10 ಪ್ರೊ 5G ಮತ್ತು ಒಪ್ಪೋ ರೆನೋ 10 ಪ್ರೊ+ 5G ಮಾಡೆಲ್‌ಗಳನ್ನು ಒಳಗೊಂಡಿದೆ. ಈ ಎರಡು ಫೋನ್‌ಗಳ ಸೇಲ್ ಇಂದು ಪ್ರಾರಂಭವಾಗಿದೆ.
ಹೌದು, ಒಪ್ಪೋ ರೆನೋ 10 ಪ್ರೊ 5G ಮತ್ತು ಒಪ್ಪೋ ರೆನೋ 10 ಪ್ರೊ+ 5G ಈಗ ಖರೀದಿಗೆ ಲಭ್ಯ ಇವೆ. ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್, ಒಪ್ಪೋ ಸ್ಟೋರ್ ಮೂಲಕ ಗ್ರಾಹಕರು ಈ ಫೋನ್‌ಗಳನ್ನು ಖರೀದಿ ಮಾಡಬಹುದಾಗಿದೆ. ಒಪ್ಪೋ ರೆನೋ 10 ಪ್ರೊ 5G ಆರಂಭಿಕ ಬೆಲೆ 39,999ರೂ. ಆಗಿದೆ. ಒಪ್ಪೋ ರೆನೋ 10 ಪ್ರೊ+ 5G ಆರಂಭಿಕ ಬೆಲೆ 54,999ರೂ. ಆಗಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ ರೆನೋ 10 ಪ್ರೊ+ 5G ಫೀಚರ್ಸ್ :
ಒಪ್ಪೋ ರೆನೋ 10 ಪ್ರೊ+ 5G ಫೋನ್ 6.74 ಇಂಚಿನ ಅಮೋಲೆಡ್ 3D ಕರ್ವ್ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು 1,240x 2,722 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಕಲರ್ ಒಎಸ್ 13.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿದೆ. ಈ ಮೊಬೈಲ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಒಪ್ಪೋ ರೆನೋ 10 ಪ್ರೊ 5G ಫೀಚರ್ಸ್ :
ಒಪ್ಪೋ ರೆನೋ 10 ಪ್ರೊ 5G ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಪಡೆದಿದ್ದು, ಇದು 1,080X 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ನೀಡಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದಾಗಿದೆ.
ಇನ್ನು ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು ಪಡೆದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,600mAh ಬ್ಯಾಟರಿಯನ್ನು ಹೊಂದಿದ್ದು, 80W SuperVOOC ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ : ಒಪ್ಪೋ ರೆನೋ 10 ಪ್ರೊ+ 5G ಮೊಬೈಲ್ 12GB RAM +256GB ಸ್ಟೋರೇಜ್ ಆಯ್ಕೆಗೆ 54,999ರೂ. ಬೆಲೆಯನ್ನು ಹೊಂದಿದೆ. ಇನ್ನು ಒಪ್ಪೋ ರೆನೋ 10 ಪ್ರೊ 5G ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಆಯ್ಕೆಗೆ 39,999ರೂ. ಆಗಿದೆ. ಗ್ರಾಹಕರು ಫ್ಲಿಪ್‌ಕಾರ್ಟ್, ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್ ಸ್ಟೊರ್‌ಗಳ ಮೂಲಕ ಖರೀದಿಸಬಹುದಾಗಿದೆ.


Click it and Unblock the Notifications








