Home
ಸುದ್ದಿಜಾಲ

ಹೊಸದಾಗಿ ಬಿಡುಗಡೆ ಆಗಿರುವ ಈ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಪ್ರಮುಖ ಇ ಕಾಮರ್ಸ್‌ ತಾಣ ಆಗಿರುವ ಫ್ಲಿಪ್‌ಕಾರ್ಟ್‌ ಇದೀಗ ಸೂಪರ್‌ ವ್ಯಾಲ್ಯೂ ಡೇಸ್‌ ಮಾರಾಟ ಮೇಳ ಆಯೋಜಿಸಿದ್ದು, ಮೊಬೈಲ್‌ ಪ್ರಿಯರನ್ನು ಸೆಳೆದಿದೆ. ಈ ಮಾರಾಟ ಮೇಳದಲ್ಲಿ ಇತ್ತೀಚಿಗಿನ ಕೆಲವು ಸ್ಮಾರ್ಟ್‌ಫೊನ್‌ಗಳಿಗೆ ವಿಶೇ‍ಷ ರಿಯಾಯಿತಿ ತಿಳಿಸಿದ್ದು, ಆ ಪೈಕಿ ಒಪ್ಪೋ ಸಂಸ್ಥೆಯ ಒಪ್ಪೋ ರೆನೋ 11 ಪ್ರೊ 5G ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ ರೆನೋ 11 ಪ್ರೊ 5G ಸ್ಮಾರ್ಟ್‌ಫೋನ್‌ ಶೇ. 11% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 39,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಲಭ್ಯವಿರುವ ಇತರೆ ಕೊಡುಗೆ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್‌ ದರದಲ್ಲಿ ಖರೀದಿಸಬಹುದು.

ಹೊಸದಾಗಿ ಬಿಡುಗಡೆ ಆಗಿರುವ ಈ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಈ ಮೊಬೈಲ್‌ 4600mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಮೀಡಿಯಾಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 12 GB RAM + 256 GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನುಳಿದಂತೆ ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒಪ್ಪೋ ರೆನೋ 11 ಪ್ರೊ 5G - ಫೀಚರ್ಸ್‌

ಒಪ್ಪೋ ರೆನೋ 11 ಪ್ರೊ ಮೊಬೈಲ್‌ 6.74 ಇಂಚಿನ 1.5K OLED ಕರ್ವ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1,240 x 2,772 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 1,600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಮಾತ್ರವಲ್ಲ ಈ ಡಿಸ್‌ಪ್ಲೇ 40Hz ವರೆಗೆ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ತಲುಪಿಸಲು ಸ್ಕ್ರೀನ್‌ ಅನ್ನು ರೇಟ್ ಮಾಡಲಾಗಿದೆ.

ಹೊಸದಾಗಿ ಬಿಡುಗಡೆ ಆಗಿರುವ ಈ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಒಪ್ಪೋ ರೆನೋ 11 ಪ್ರೊ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 14 ಆಧಾರಿತ ಕಲರ್OS 14 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 24GB ವರೆಗೆ ವಿಸ್ತರಿಸಬಹುದು.

ಒಪ್ಪೋ ರೆನೋ 11 ಪ್ರೊ ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೋನಿ IMX890 24mm ಫೋಕಲ್ ಲೆಂತ್ ಅನ್ನು ಹೊಂದಿದೆ.

ಇದರ ದ್ವಿತೀಯ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒಪ್ಪೋ ರೆನೋ 11 ಪ್ರೊ ಮೊಬೈಲ್‌ 4600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

Best Mobiles in India

English summary
OPPO Reno11 Pro 5G available at huge discount on Flipkart Super Value Days Sale in India. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+