ಒಪ್ಪೋ ರೆನೋ 12 5G ಖರೀದಿಸಲು ಇಷ್ಟವಿಲ್ಲವೇ? ಹಾಗಿದ್ರೆ, ಈ ಫೋನ್ ನೋಡಿ!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿರುವ ಒಪ್ಪೋ (Oppo) ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಒಪ್ಪೋ ರೆನೋ 12 5G (Oppo Reno 12 5G) ಫೋನ್ ಅನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯಲ್ಲಿ ಸಖತ್ ಗಮನ ಸೆಳೆದಿದೆ. ಸಂಸ್ಥೆಯು ಹೊಸ ಒಪ್ಪೋ ರೆನೋ 12 5G (Oppo Reno 12 5G) ಮೀಡ್‌ರೇಂಜ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರನ್ನು ಸೆಳೆದಿದೆ. ಅದಾಗ್ಯೂ, ನಿಮಗೆ ಒಪ್ಪೋ ರೆನೋ 12 5G (Oppo Reno 12 5G) ಫೋನಿಗೆ ಸಮಾನವಾದ ಪರ್ಯಾಯ ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ.
ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಮೀಡ್‌ರೇಂಜ್ ಬೆಲೆಯ ಫೋನ್‌ಗಳಿಗೂ ಸಹ ಹೆಚ್ಚಿನ ಡಿಮ್ಯಾಂಡ್ ಇದೆ. ಈ ನಿಟ್ಟಿನಲ್ಲಿ ಕಂಪನಿಗಳು ಕೂಡಾ ಈ ವಿಭಾಗದಲ್ಲಿ ಅತ್ಯುತ್ತಮ ಫೋನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಈ ಸಾಲಿಗೆ ಒಪ್ಪೋದ ಹೊಸ ಒಪ್ಪೋ ರೆನೋ 12 5G (Oppo Reno 12 5G) ಕೂಡಾ ಸೇರ್ಪಡೆ ಆಗಿದೆ. ಆದರೆ ಮಾರುಕಟ್ಟೆಯಲ್ಲಿ ಇದಕ್ಕೆ ಪೈಪೋಟಿ ನೀಡುವ ಇತರೆ ಪರ್ಯಾಯ ಫೋನ್‌ಗಳು ಆಯ್ಕೆ ಸಹ ಗ್ರಾಹಕರಿಗೆ ಲಭ್ಯ ಇವೆ. ಹಾಗಾದರೇ ಒಪ್ಪೋ ರೆನೋ 12 5G ಫೋನ್ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್
ಒನ್‌ಪ್ಲಸ್ ಸಂಸ್ಥೆಯ ಈ ಸ್ಟೈಲಿಶ್ ಫೋನ್ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,264x2,780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ OxygenOS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ.
ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದ ರಚನೆ ಅನ್ನು ಪಡೆದುಕೊಂಡಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದಲ್ಲದೇ ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ.
ರಿಯಲ್‌ಮಿ GT 6T ಸ್ಮಾರ್ಟ್‌ಫೋನ್
ರಿಯಲ್‌ಮಿ GT 6T ಮೊಬೈಲ್ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಸ್ನ್ಯಾಪ್‌ಡ್ರಾಗನ್ 7+ ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ.
ಇದರ ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್
ಐಕ್ಯೂ ನಿಯೋ 9 ಪ್ರೊ ಮೊಬೈಲ್ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ.
ಅಲ್ಲದೇ ಈ ಫೋನ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಆಗಿದೆ. ಇದರ ಜೊತೆಗೆ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W FlashCharge ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಹೊಂದಿದೆ.


Click it and Unblock the Notifications








