ಒಪ್ಪೋ ರೆನೋ 8T ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಸಖತ್ ಉಳಿತಾಯ!
ಜನಪ್ರಿಯ ಒಪ್ಪೋ ಮೊಬೈಲ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ರೆನೋ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ ಪ್ರೀಮಿಯಂ ಪ್ರೈಸ್ ಟ್ಯಾಗ್‌ನಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆದ್ರೆ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಆಗಿದ್ದು, ಗ್ರಾಹಕರು ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ.
ಹೌದು, ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಫೋನ್ ಇದೀಗ 29,999ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೆಲವು ಆಫರ್ ಸಹ ಲಭ್ಯವಾಗಲಿವೆ ಜೊತೆಗೆ ಎಕ್ಸ್‌ಚೇಂಜ್ ಕೊಡುಗೆ ಸಹ ದೊರೆಯುತ್ತದೆ.

ಅಂದಹಾಗೆ ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 4,800mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 67W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ ಡಿವೈಸ್ ಸಹ ಗ್ರಾಹಕರ ಕಣ್ಮನ ಸೆಳೆಯುವಂತಿದ್ದು, ಇದರೊಂದಿಗೆ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಹೊಂದಿದೆ. ಹಾಗಾದರೇ ಒಪ್ಪೋ ರೆನೋ 8T 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ.
ಒಪ್ಪೋ ರೆನೋ 8T 5G ಡಿಸ್‌ಪ್ಲೇ ರಚನೆ : ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಮೈಕ್ರೋ-ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ ಡ್ರ್ಯಾಗನ್‌ಟ್ರೈಲ್-ಸ್ಟಾರ್2 ಪ್ರೊಟೆಕ್ಷನ್ ಅನ್ನು ಹೊಂದಿದ್ದು, ವೈಡ್‌ವೈನ್ L1 ಪ್ರಮಾಣೀಕರಣವನ್ನು ಪಡೆದಿದೆ.
ಒಪ್ಪೋ ರೆನೋ 8T 5G ಪ್ರೊಸೆಸರ್ : ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ColorOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟತ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಿದೆ. ಇದು 8GB ವರೆಗೆ ಹೆಚ್ಚುವರಿ ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಿದೆ.

ಒಪ್ಪೋ ರೆನೋ 8T 5G ಕ್ಯಾಮೆರಾ : ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾವು HDR, ಬೊಕೆ ಫ್ಲೇರ್ ಪೋರ್ಟ್ರೇಟ್ ಮತ್ತು ಡ್ಯುಯಲ್-ವ್ಯೂ ವಿಡಿಯೋದಂತಹ ಫೀಚರ್ಸ್‌ಗಳನ್ನು ಹೊಂದಿದೆ.
ಒಪ್ಪೋ ರೆನೋ 8T 5G ಬ್ಯಾಟರಿ : ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಈ ಫೋನ್ ಅನ್ನು ನೀವು ಕೇವಲ 45 ನಿಮಿಷಗಳಲ್ಲಿ 0 ರಿಂದ 100% ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ 5.1 ವಾಯರ್‌ಲೆಸ್ ಸಂಪರ್ಕವನ್ನು ಬೆಂಬಲಿಸಲಿದೆ.


Click it and Unblock the Notifications








