Just In
- 53 min ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 1 hr ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 2 hrs ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ: ಯೋಗಿ ಆದಿತ್ಯನಾಥ್ ಮತ್ತೆ ವಿವಾದ
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಪೆಬ್ಬಲ್ ಕಾಸ್ಮೋಸ್ ಎಂಗೇಜ್ ವಾಚ್ ಬಿಡುಗಡೆ! ಬೆಲೆ ಎಷ್ಟು?
ಸ್ಮಾರ್ಟ್‌ವಾಚ್ ಮಾರುಕಟ್ಟೆಯಲ್ಲಿ ಪೆಬ್ಬಲ್ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಪಡೆದುಕೊಂಡಿದೆ. ತನ್ನದೇ ಆದ ವಿಭಿನ್ನ ಮಾದರಿಯ ಸ್ಮಾರ್ಟ್‌ವಾಚ್‌ಗಳ ಮೂಲಕ ಗುರುತಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಪೆಬ್ಬಲ್ ಕಾಸ್ಮೊಸ್ ಎಂಗೇಜ್ ವಾಚ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್ ಆಪಲ್ ವಾಚ್ ಅಲ್ಟ್ರಾ ಮಾದರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ವಾಚ್ ಸಲಾಮಾಂಡರ್ ಆರೆಂಜ್, ಸ್ಟಾರ್ಲೈಟ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಸೆಲೆಸ್ಟಿಯಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ಬರಲಿದೆ.

ಹೌದು, ಪೆಬ್ಬಲ್ ಕಂಪೆನಿ ತನ್ನ ಹೊಸ ಪೆಬ್ಬಲ್ ಕಾಸ್ಮೊಸ್ ಎಂಗೇಜ್ ವಾಚ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ವಾಚ್ AI ಧ್ವನಿ ನೆರವು, ಬ್ಲೂಟೂತ್ ಕರೆ, ವಾಯರ್‌ಲೆಸ್ ಚಾರ್ಜಿಂಗ್, ಸ್ಲಿಪ್ ಟ್ರ್ಯಾಕಿಂಗ್ ಮತ್ತು ಆಲ್ ಇನ್ ಒನ್ ಹೆಲ್ತ್ ಸೂಟ್ ಫೀಚರ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್ ವಾಟರ್ ಮತ್ತು ಡಸ್ಟ್ ರೆಸಿಸ್ಟೆನ್ಸಿಗಾಗಿ IP67 ರೇಟಿಂಗ್ ಅನ್ನು ಪಡದಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ವಾಚ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೆಬ್ಬಲ್ ಕಾಸ್ಮೋಸ್ ಎಂಗೇಜ್ ವಾಚ್ 320x385 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 1.95 ಇಂಚಿನ ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದ್ದು, ಆಲ್‌ವೇಸ್ ಆನ್ ಆಯತಾಕಾರದ ಡಿಸ್‌ಪ್ಲೇ ಇದಾಗಿದೆ. ಇನ್ನು ಡಿಸ್‌ಪ್ಲೇ ವಾಟರ್ ಮತ್ತು ಡಸ್ಟ್ ರೆಸಿಸ್ಟೆನ್ಸಿ ಹೊಂದಿದೆ. ಇದಕ್ಕಾಗಿ IP67 ರೇಟಿಂಗ್ ಅನ್ನು ಪಡೆದಿದೆ ಎಂದು ಪೆಬ್ಬಲ್ ಕಂಪೆನಿ ಹೇಳಿಕೊಂಡಿದೆ. ಇನ್ನು ಸ್ಮಾರ್ಟ್‌ವಾಚ್ ಆಪಲ್ ವಾಚ್ ಅಲ್ಟ್ರಾ ಮಾದರಿಯಲ್ಲಿದ್ದು, ಗ್ರಾಹಕರನ್ನು ಸೆಳೆಯುವ ಡಿಸೈನ್ ಅನ್ನು ಹೊಂದಿದೆ.

ಪೆಬ್ಬಲ್ ಕಾಸ್ಮೋಸ್ ಎಂಗೇಜ್ ವಾಚ್ ಝಿಂಕ್ ಮಿಶ್ರಲೋಹದಿಂದ ಮಾಡಿದ ಆಘಾತ-ನಿರೋಧಕ ಕವಚವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ವಾಚ್ ಬಲಭಾಗದಲ್ಲಿ ದೊಡ್ಡ ಕಿರೀಟವನ್ನು ಮತ್ತು ಕವಚದ ಎಡಭಾಗದಲ್ಲಿ ಫಂಕ್ಷನ್ ಬಟನ್ ಅನ್ನು ಹೊಂದಿದೆ. ಇದರೊಂದಿಗೆ AI ಧ್ವನಿ ನೆರವು, ಬ್ಲೂಟೂತ್ ಕರೆ, ವೈರ್‌ಲೆಸ್ ಚಾರ್ಜಿಂಗ್, ನಿದ್ರೆ ಟ್ರ್ಯಾಕಿಂಗ್ ಮತ್ತು ಆಲ್ ಇನ್ ಒನ್ ಹೆಲ್ತ್ ಸೂಟ್‌ನಂತಹ ಫೀಚರ್ಸ್ ಒಳಗೊಂಡಿದೆ. ಈ ಸ್ಮಾರ್ಟ್‌ವಾಚ್‌ನಲ್ಲಿ ಕೂಡ ಹೆಲ್ತ್ ಟ್ರ್ಯಾಕಿಂಗ್ ಫೀಚರ್ಸ್‌ಗಳನ್ನು ನೀಡಲಾಗಿದೆ.

ಈ ಸ್ಮಾರ್ಟ್‌ವಾಚ್ ಬ್ಲಡ್ ಆಕ್ಸಿಜನ್ ಲೆವೆಲ್, ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ಅಳೆಯುವ ಸೆನ್ಸಾರ್‌ಗಳನ್ನು ಒಳಗೊಂಡಿದೆ. ಇದರಿಂದ ಬಳಕೆದಾರರು ತಮ್ಮ ಆರೋಗ್ಯದ ಮಟ್ಟವನ್ನು ತಿಳಿದುಕೊಳ್ಳುವುದಕ್ಕೆ ಸಹಾಯ ಮಾಡಲಿದೆ. ಇದಲ್ಲದೆ ಆಕ್ಟಿವಿಟಿ ಟ್ರ್ಯಾಕಿಂಗ್ ಮತ್ತು ಸಿಲಿಕೋನ್ ಪಟ್ಟಿಗಳಿಗಾಗಿ ಮಲ್ಟಿ ಸ್ಪೋರ್ಟ್ಸ್ ಮೋಡ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0 ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ವಾಚ್ ನಾಲ್ಕರಿಂದ ಐದು ದಿನಗಳ ಬ್ಯಾಟರಿ ಅವಧಿಯನ್ನು ಹೊಂದಿದೆ. ಅದರಲ್ಲೂ ಈ ಸ್ಮಾರ್ಟ್‌ವಾಚ್ ವಾಯರ್‌ಲೆಸ್ ಚಾರ್ಜ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಪೆಬ್ಬಲ್ ಕಾಸ್ಮೋಸ್ ಎಂಗೇಜ್ ಸ್ಮಾರ್ಟ್‌ವಾಚ್ ಬಜೆಟ್ ಸ್ಮಾರ್ಟ್ ವಾಚ್ ಆಗಿದ್ದು, ಇದರ ಬೆಲೆ 7,499ರೂ ಆಗಿದೆ. ಆದರೆ ಈ ಸ್ಮಾರ್ಟ್‌ವಾಚ್ ಲಾಂಚ್ ಆಫರ್‌ನಲ್ಲಿ 3,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್ ಭಾರತದಲ್ಲಿ ಒಂದು ವರ್ಷದ ಬದಲಿ ಗ್ಯಾರಂಟಿಯನ್ನು ಸಹ ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್ ಸಲಾಮಾಂಡರ್ ಆರೆಂಜ್, ಸ್ಟಾರ್ಲೈಟ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಸೆಲೆಸ್ಟಿಯಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470