ಗೂಗಲ್‌ ಪಿಕ್ಸೆಲ್‌ 6a ಫೋನ್‌ ಖರೀದಿಸಲು ಯಾವ ಆನ್‌ಲೈನ್‌ ತಾಣ ಬೆಸ್ಟ್‌!

|

ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸುವವರಿಗೆ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ಗಳು ವಿಶೇಷ ಆಫರ್‌ ನೀಡುತ್ತಿವೆ. ಆದರೆ ಫ್ಲಿಪ್‌ಕಾರ್ಟ್‌ ನೀಡುತ್ತಿರುವ ಆಫರ್‌ಗೆ ಹೋಲಿಸಿದರೆ ಅಮೆಜಾನ್‌ನಲ್ಲಿನ ಆಫರ್‌ ಹೆಚ್ಚು ಗಮನಸೆಳೆಯುತ್ತಿದೆ. ಏಕೆಂದರೆ ಫ್ಲಿಪ್‌ಕಾರ್ಟ್‌ಗಿಂತ ಕಡಿಮೆ ಬೆಲೆಯಲ್ಲಿ ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಗೂಗಲ್‌ ಪಿಕ್ಸೆಲ್‌ 6a ಫೋನ್‌ ಅನ್ನು ಖರೀದಿಸಬಹುದು. ಅಮೆಜಾನ್‌ನಲ್ಲಿ ನೀವು 6,500ರೂ. ರಿಯಾಯಿತಿ ಪಡೆದುಕೊಳ್ಳಬಹುದು, ಆದರೆ ಇದು ದುಬಾರಿ ಕ್ಯಾಚ್‌ನೊಂದಿಗೆ ಬರುತ್ತದೆ.

ಗೂಗಲ್

ಹೌದು, ಗೂಗಲ್ ಭಾರತದಲ್ಲಿ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದಾಗ ಫ್ಲಿಪ್‌ಕಾರ್ಟ್ ಅನ್ನು ತನ್ನ ವಿತರಣಾ ಪಾಲುದಾರನನ್ನಾಗಿ ಆಯ್ಕೆ ಮಾಡಿಕೊಂಡಿತ್ತು. ಆದರಿಂದ ಅಮೆಜಾನ್‌ನಲ್ಲಿ ಪಿಕ್ಸೆಲ್‌ 6a ಅನ್ನು ಆಮದು ಮಾಡಿಕೊಳ್ಳಬಹುದು. ಆದರೆ ಆಮದು ಮಾಡಿದ ಘಟಕಗಳು ಭಾರತದಲ್ಲಿ ವಾರಂಟಿ ಅಡಿಯಲ್ಲಿ ಬರುವುದಿಲ್ಲ ಅನ್ನೊದನ್ನ ಗಮನಿಸಬೇಕು. ಹಾಗಾದ್ರೆ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಅನ್ನು ಅಮೆಜಾನ್‌ನಲ್ಲಿ ಖರೀದಿಸಬೇಕಾ? ಇಲ್ಲ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬೇಕಾ? ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೂಗಲ್‌ ಪಿಕ್ಸೆಲ್‌ 6a ಫೋನ್‌ ಅನ್ನು ಅಮೆಜಾನ್‌ನಲ್ಲಿ ಖರೀದಿಸಬೇಕಾ?

ಗೂಗಲ್‌ ಪಿಕ್ಸೆಲ್‌ 6a ಫೋನ್‌ ಅನ್ನು ಅಮೆಜಾನ್‌ನಲ್ಲಿ ಖರೀದಿಸಬೇಕಾ?

ಭಾರತದಲ್ಲಿ ಗೂಗಲ್‌ ಪಿಕ್ಸೆಲ್ 6a ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಸುಮಾರು 37,800 ರೂ.ಗಳಿಗೆ ಮಾರಾಟವಾಗುತ್ತಿದೆ. ಆದರೆ ಇದು ಒಂದು ವರ್ಷದ ಬ್ರ್ಯಾಂಡ್‌ ವಾರಂಟಿಯೊಂದಿಗೆ ಬರುವುದಿಲ್ಲ. ಇದರಿಂದ ಒಂದು ವೇಳೆ ನಿಮ್ಮ ಫೋನ್‌ ಸರಿಯಿಲ್ಲದಿದ್ದರೆ ನಿಮಗೆ ಯಾವುದೇ ರೀತಿಯ ವಾರೆಂಟಿ ಸಿಗುವುದಿಲ್ಲ. ಇನ್ನು ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮೂಲಕ 43,999ರೂ. ಬೆಲೆಗೆ ಖರೀದಿಸಬಹುದು. ಇದರಲ್ಲಿ ನಿಮಗೆ ಒಂದು ವರ್ಷದ ಬ್ರ್ಯಾಂಡ್‌ ವಾರೆಂಟಿ ಪಡೆದುಕೊಳ್ಳಬಹುದು.

ಗೂಗಲ್‌

ಅಂದರೆ ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಅನ್ನು ವಿತರಣಾ ಪಾಲುದಾರನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಇದರಿಂದ ನೀವು ಫ್ಲಿಪ್‌ಕಾರ್ಟ್‌ನಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಖರೀದಿಸುವುದ ಉತ್ತಮ. ಅಮೆಜಾನ್‌ನಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಖರೀದಿಸಿದರೆ ನಿಮಗೆ ಬ್ರ್ಯಾಂಡ್‌ ಯಾವುದೇ ವಾರೆಂಟಿ ನೀಡುವುದಿಲ್ಲ ಎನ್ನುವುದನ್ನು ನೀವು ಗಮನಿಸಬೇಕು. ಇದನ್ನು ಗಮನಿಸಿದರೆ ನೀವು ಗೂಗಲ್‌ ಪಿಕ್ಸೆಲ್‌ 6a ಫೋನ್‌ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸುವುದು ಉತ್ತಮವಾಗಿದೆ.

ಗೂಗಲ್‌ ಪಿಕ್ಸೆಲ್‌ 6a ಫೀಚರ್ಸ್‌ ಹೇಗಿದೆ?

ಗೂಗಲ್‌ ಪಿಕ್ಸೆಲ್‌ 6a ಫೀಚರ್ಸ್‌ ಹೇಗಿದೆ?

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಮತ್ತು 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕನಿಷ್ಠ ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್ಸ್‌ಗಳನ್ನು ಪಡೆಯಲಿದೆ.

ಪಿಕ್ಸೆಲ್‌

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್‌ನ ರಿಯರ್‌ ಕ್ಯಾಮೆರಾ 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಆದರೆ ಸೆಲ್ಫಿ ಕ್ಯಾಮೆರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ನೀಡುತ್ತದೆ.

ಬ್ಯಾಟರಿಯನ್ನು ಹೊಂದಿದೆ

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 4,410mAh ಬ್ಯಾಟರಿಯನ್ನು ಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್‌ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Google Pixel 6a is available at a much more affordable price on Amazon compared to what Flipkart is offering.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X