ಹೊಸ 5G ಮೊಬೈಲ್‌ ಖರೀದಿಸಬೇಕೆ?..ಖರೀದಿಸುವ ಮೊದಲು ಈ ಲಿಸ್ಟ್‌ ನೋಡಿ!

|

ಪ್ರಿಯ ಗ್ರಾಹಕರೇ, ನೀವು ಹೊಸದಾಗಿ 5G ಸ್ಮಾರ್ಟ್‌ಫೋನ್‌ ಖರೀದಿಸುವ ಪ್ಲ್ಯಾನ್ ಮಾಡಿದ್ದಿರಾ? ಹಾಗಿದ್ರೆ, ಅವಸರ ಬೇಡಾ. ಏಕೆಂದರೇ, ಸದ್ಯ ಮಾರುಕಟ್ಟೆಯಲ್ಲಿ ಭಿನ್ನ ಪ್ರೈಸ್‌ ಟ್ಯಾಗ್‌ನಲ್ಲಿ 5G ಮೊಬೈಲ್‌ಗಳು ಲಭ್ಯ ಇವೆ. ಬಜೆಟ್‌ ದರದಿಂದ ದುಬಾರಿ ಬೆಲೆಯಲ್ಲಿಯೂ ನಿಮಗೆ ಅತ್ಯುತ್ತಮ 5G ಫೋನ್‌ ಸಿಗುತ್ತವೆ.

ಮೊಬೈಲ್‌

ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಇದೀಗ 5G ಫೋನ್‌ಗಳು ಹೆಚ್ಚು ಆಕರ್ಷಕ ಸ್ಥಾನ ಪಡೆಯುತ್ತಿವೆ. ಪ್ರಮುಖ ಮೊಬೈಲ್‌ ತಯಾರಿಕಾ ಸಂಸ್ಥೆಗಳು ಈಗಾಗಲೇ 5G ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿವೆ. ಅವುಗಳಲ್ಲಿ ಮುಖ್ಯವಾಗಿ ಸ್ಯಾಮ್‌ಸಂಗ್, ಒನ್‌ಪ್ಲಸ್‌ ಶಿಯೋಮಿ, ಪೊಕೊ, ರಿಯಲ್‌ಮಿ, ವಿವೋ ಮತ್ತು ಒಪ್ಪೋ ಸಹ ಸೇರಿವೆ. ಇವುಗಳಲ್ಲಿ ಬಹುತೇಕ ಸಂಸ್ಥೆಗಳು ಬಜೆಟ್‌ ದರದಲ್ಲಿ ಅತ್ಯುತ್ತಮ ಫೀಚರ್ಸ್‌ಗಳಿರುವ 5G ಫೋನ್‌ ಅನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿವೆ. ಹಾಗಾದರೇ ಬಜೆಟ್‌ ಬೆಲೆಯಲ್ಲಿ ಲಭ್ಯವಿರುವ ಬೆಸ್ಟ್‌ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್‌ ಬೆಂಬಲಿಸಲಿದ್ದು, 5G ಸಪೋರ್ಟ್‌ ಪಡೆದಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB, 8GB RAM ಮತ್ತು 128 GB ಹಾಗೂ 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್‌

ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್‌

ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. 144Hz ರಿಫ್ರೆಶ್ ದರ ಮತ್ತು 576Hz ಟಚ್ ಲೇಟೆನ್ಸಿ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000 mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2,ಬೆಂಬಲಿಸಲಿದೆ.

ಐಕ್ಯೂ Z5 ಸ್ಮಾರ್ಟ್‌ಫೋನ್‌

ಐಕ್ಯೂ Z5 ಸ್ಮಾರ್ಟ್‌ಫೋನ್‌

ಐಕ್ಯೂ Z5 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ರಿಯಲ್‌ಮಿ GT ಮಾಸ್ಟರ್ ಎಡಿಶನ್‌

ರಿಯಲ್‌ಮಿ GT ಮಾಸ್ಟರ್ ಎಡಿಶನ್‌

ರಿಯಲ್‌ಮಿ GT ಮಾಸ್ಟರ್ ಎಡಿಶನ್‌ 6.43 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಒಳಗೊಂಡಿದ್ದು, ಆಂಡ್ರಾಯ್ಡ್‌ 11ರ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, NFC, ಮತ್ತು USB Type-C ಪೋರ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Planning to Buy 5G Phone? Check This List before buying.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X