ಭಾರತದ ಮಾರುಕಟ್ಟೆಗೆ ಸದ್ಯದಲ್ಲೇ ಎಂಟ್ರಿ ನೀಡಲಿದೆ ಪೊಕೊ C3 ಸ್ಮಾರ್ಟ್‌ಫೋನ್!
ಪೊಕೊ ಕಂಪೆನಿ ಶಿಯೋಮಿ ಸಂಸ್ಥೆಯಿಂದ ಸ್ವತಂತ್ರಗೊಂಡ ನಂತರ ಮಾರುಕಟ್ಟೆಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸುತ್ತಿದೆ. ಈಗಾಗಲೇ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನ ಭದ್ರ ಪಡಿಸಿಕೊಂಡಿದೆ. ಇದೀಗ ತನ್ನ ಪೊಕೊ C3 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಅಕ್ಟೋಬರ್ 6 ರಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಅನಾವರಣಗೊಳಿಸಲು ಪೊಕೊ ಸಜ್ಜಾಗಿದೆ.

ಹೌದು, ಪೊಕೊ ಸಂಸ್ಥೆ ತನ್ನ ಹೊಸ ಪೊಕೊ C3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಪೊಕೊ C3 ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ಮಾಹಿತಿ ಪ್ರಕಾರ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಪೊಕೊ C3 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ. ಜೊತೆಗೆ 269 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್ಲಾಕ್ ಬೆಂಬಲಿಸುವ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ C3 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v.5, ಹಾಟ್‌ಸ್ಪಾಟ್, ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದ್ದು, ಇದರ ಬೆಲೆ 8,499 ರೂ ಆಗಿರಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications




