ಭಾರತದಲ್ಲಿ ಪೊಕೊ C3 ಸ್ಮಾರ್ಟ್‌ಫೋನ್ ದಾಖಲೆಯ ಮಾರಾಟ; ಬೆಲೆ ಎಷ್ಟು ಗೊತ್ತೆ?
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾದ ಪೊಕೊ ಮೊಬೈಲ್ ಕಂಪನಿಯು ಹಲವು ಅಗ್ಗದ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಮುಖ್ಯವಾಗಿ C ಸರಣಿಯಲ್ಲಿ ಕಂಪನಿಯ ಅಗ್ಗದ ಫೋನ್‌ಗಳು ಹೆಚ್ಚು ಜನಪ್ರಿಯ ಗಳಿಸಿವೆ. ಆ ಪೈಕಿ ಪೊಕೊ C3 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿದ್ದು, ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಪ್ರಿಯರನ್ನು ತನ್ನತ್ತ ಸೆಳೆದಿದೆ. ಈ ಫೋನ್ ಭಾರತದಲ್ಲಿ ದಾಖಲೆಯ ಮಾರಾಟ ಕಂಡಿದೆ ಎಂದು ಕಂಪನಿ ಹೇಳಿದೆ.

ಹೌದು, ಇತ್ತೀಚಿಗೆ ಪೊಕೊ ಕಂಪನಿಯು ಅಗ್ಗದ ಬೆಲೆಯಲ್ಲಿ ಪೊಕೊ C3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೊಂದು ಎಂಟ್ರಿ ಲೆವೆಲ್ ಸ್ಮಾರ್ಟ್ ಫೋನ್ ಆಗಿದ್ದರೂ ಗ್ರಾಹಕರನ್ನು ಆಕರ್ಷಿಸಿದೆ. ಪೊಕೊ C3 ಭಾರತದಲ್ಲಿ ಎರಡು ಮಿಲಿಯನ್ ಮಾರಾಟದ ಗಡಿ ದಾಟಿದೆ ಎಂದು ಕಂಪನಿ ತನ್ನ ಆಂತರಿಕ ಡೇಟಾವನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ. ಕಂಪನಿಯು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈ ಫೋನ್ ಅನ್ನು ಭಾರತದಲ್ಲಿ ಪರಿಚಯಿಸಿತ್ತು. ಕಂಪನಿಯ ಪ್ರಕಾರ, ಈ ಫೊನ್ ಲಾಂಚ್ ಆದ ಒಂಬತ್ತು ತಿಂಗಳಲ್ಲಿ ಎರಡು ಮಿಲಿಯನ್ ಮಾರಾಟದ ಮೈಲಿಗಲ್ಲನ್ನು ದಾಟಿದೆ. ಹಾಗೆಯೇ ಬಿಡುಗಡೆ ಆದ ಮೂರು ತಿಂಗಳಲ್ಲಿ ಒಂದು ಮಿಲಿಯನ್ ಮಾರಾಟದ ಗಡಿಯನ್ನು ದಾಟಿತ್ತು ಎಂದು ಕಂಪನಿಯು ಹೇಳಿದೆ. ಹಾಗಾದರೇ ಪೊಕೊ C3 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಪೊಕೊ C3 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ವಾಟರ್ ಸ್ಟೈಲ್ ನಾಚ್ ರಚನೆಯ ಈ ಡಿಸ್‌ಪ್ಲೇಯು 269 ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ
ಪೊಕೊ C3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 3GB + 32GB ಹಾಗೂ 4GB + 64GB ಸ್ಟೋರೇಜ್ ಸಾಮರ್ಥ್ಯವನ್ನು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.

ಕ್ಯಾಮೆರಾ ಸೆನ್ಸಾರ್
ಪೊಕೊ C3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್ಲಾಕ್ ಬೆಂಬಲಿಸುವ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ C3 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v.5, ಹಾಟ್‌ಸ್ಪಾಟ್, ವೈಫೈ, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ C3 ಸ್ಮಾರ್ಟ್‌ಫೋನ್ 3GB + 32GB ಸ್ಟೋರೇಜ್ ವೇರಿಯಂಟ್ ದರವು 7,499 ರೂ. ಆಗಿದೆ ಹಾಗೂ 4GB + 64GB ವೇರಿಯಂಟ್ ಬೆಲೆಯು 8,499 ರೂ. ಪ್ರೈಸ್‌ಟ್ಯಾಗ್ ಹೊಂದಿದೆ. ಆರ್ಟಿಕಲ್ ಬ್ಲೂ, ಲಿಮ್ ಗ್ರೀನ್, ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications



