ಭಾರತದಲ್ಲಿ ಅಗ್ಗದ ಬೆಲೆಯಲ್ಲಿ ಪೊಕೊ C3 ಸ್ಮಾರ್ಟ್‌ಫೋನ್ ಲಾಂಚ್!
ಕಡಿಮೆ ಅವಧಿಯಲ್ಲಿ ಮೊಬೈಲ್ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ಪೊಕೊ ಬ್ರ್ಯಾಂಡ್ ಈಗಾಗಲೇ ಕೆಲವು ಮಾಡೆಲ್ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇತ್ತೀಚಿಗಷ್ಟೆ ಪೊಕೊ M2 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿ ಭಾರಿ ಸದ್ದು ಮಾಡಿರುವ ಸಂಸ್ಥೆಯು ಈಗ ದೇಶಿಯ ಮಾರುಕಟ್ಟೆಗೆ ಹೊಸದಾಗಿ ಪೊಕೊ C3 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ.

ಹೌದು, ಪೊಕೊ ಕಂಪೆನಿ ತನ್ನ ಬಹುನಿರೀಕ್ಷಿತ ಪೊಕೊ C3 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 3GB + 32GB ಹಾಗೂ 4GB + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಪೊಕೊ C3 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ವಾಟರ್ ಸ್ಟೈಲ್ ನಾಚ್ ರಚನೆಯ ಈ ಡಿಸ್‌ಪ್ಲೇಯು 269 ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ
ಪೊಕೊ C3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 3GB + 32GB ಹಾಗೂ 4GB + 64GB ಸ್ಟೋರೇಜ್ ಸಾಮರ್ಥ್ಯವನ್ನು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.

ಕ್ಯಾಮೆರಾ ಸೆನ್ಸಾರ್
ಪೊಕೊ C3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್ಲಾಕ್ ಬೆಂಬಲಿಸುವ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ C3 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v.5, ಹಾಟ್‌ಸ್ಪಾಟ್, ವೈಫೈ, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ C3 ಸ್ಮಾರ್ಟ್‌ಫೋನ್ 3GB + 32GB ಸ್ಟೋರೇಜ್ ವೇರಿಯಂಟ್ ದರವು 7,499 ರೂ ಆಗಿದೆ ಹಾಗೂ 4GB + 64GB ವೇರಿಯಂಟ್ ಬೆಲೆಯು 8,999ರೂ. ಪ್ರೈಸ್‌ಟ್ಯಾಗ್ ಹೊಂದಿದೆ. ಆರ್ಟಿಕಲ್ ಬ್ಲೂ, ಲಿಮ್ ಗ್ರೀನ್, ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications