Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಪೊಕೊ C31 ಸ್ಮಾರ್ಟ್‌ಫೋನ್!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಪೊಕೊ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಪೊಕೊ C31 ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಿದೆ. ಇದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದ್ದು, ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಪಾಲಿಕಾರ್ಬೊನೇಟ್ ಬ್ಯಾಕ್ ಕೇಸಿಂಗ್ ಅನ್ನು ಹೊಂದಿದ್ದು, ಎರಡು-ಟೋನ್ ಪ್ಯಾನಲ್ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಇದು P2i ನ್ಯಾನೋ ಲೇಪನವನ್ನು ಒಳಗೊಂಡಿದೆ.

ಪೊಕೊ C31

ಹೌದು, ಪೊಕೊ ಕಂಪೆನಿ ಭಾರತದಲ್ಲಿ ಹೊಸ ಪೊಕೊ C31 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 2 ದಿನಗಳವರೆಗೆ ಬಾಳಿಕೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಪೊಕೊ C31 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, ವಾಟರ್‌ಡ್ರಾಪ್-ನಾಚ್‌ ಶೈಲಿಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಟಿಯುವಿ ರೈನ್‌ಲ್ಯಾಂಡ್ ಕಡಿಮೆ ನೀಲಿ ಬೆಳಕಿನ ಪ್ರಮಾಣೀಕರಣವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಮೀಡಿಯಾ ಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ C31 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫಿಚರ್ಸ್‌ಗಳಲ್ಲಿ ಆಟೋಫೋಕಸ್, HDR, AI ಭಾವಚಿತ್ರ ಮೋಡ್, ಮುಖ ಗುರುತಿಸುವಿಕೆ, ai ದೃಶ್ಯ ಪತ್ತೆ ಮತ್ತು ನೈಟ್‌ ಮೋಡ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ C31 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 540 ಗಂಟೆಗಳ ಸ್ಟ್ಯಾಂಡ್‌ಬೈ, 30 ಗಂಟೆಗಳ ಇ-ಲರ್ನಿಂಗ್, 34 ಗಂಟೆಗಳ VoLTE ಕರೆ, 10 ಗಂಟೆಗಳ ಗೇಮಿಂಗ್ ಮತ್ತು 91 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ನೀಡಲಿದೆ. ಇದು ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್‌ಲಾಕ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ VoLTE ಮತ್ತು VoWiFi, 3.5mm ಆಡಿಯೋ ಜಾಕ್, ಬ್ಲೂಟೂತ್ v5, ಮತ್ತು ಮೈಕ್ರೋ USB ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಪಾಲಿಕಾರ್ಬೊನೇಟ್ ಬ್ಯಾಕ್ ಕೇಸಿಂಗ್ ಅನ್ನು ಹೊಂದಿದ್ದು, ಎರಡು-ಟೋನ್ ಪ್ಯಾನಲ್ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಇದು P2i ನ್ಯಾನೋ ಲೇಪನವನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಹೊಸ ಪೊಕೊ C31 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ಆಯ್ಕೆಗೆ 8,499ರೂ ಮತ್ತು 4GB RAM + 64GB ಸ್ಟೋರೇಜ್ ಆಯ್ಕೆಗೆ 9,499.ರೂ ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಶಾಡೋ ಗ್ರೇ ಮತ್ತು ರಾಯಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇದು ಇದೇ ಅಕ್ಟೋಬರ್ 3 ರಿಂದ ಆರಂಭವಾಗುವ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಮಾರಾಟದ 2021 ರ ಆವೃತ್ತಿಯಲ್ಲಿ ಮಾರಾಟವಾಗಲಿದೆ. ಇನ್ನು ಲಾಂಚ್‌ ಆಫರ್‌ನಲ್ಲಿ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 500ರೂ.ಗಳ ರಿಯಾಯಿತಿ ಸಿಗಲಿದೆ.

Best Mobiles in India

English summary
Poco C31 will be up for grabs starting Rs. 7,999 during the Flipkart Big Billion Days sale.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+