Home
ಸುದ್ದಿಜಾಲ

ಪೊಕೊ C50 ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಅಗ್ಗದ ಬೆಲೆಗೆ ಖರೀದಿಸಬಹುದು!

ಪೊಕೊ ಮೊಬೈಲ್‌ ಸಂಸ್ಥೆಯು ಪೊಕೊ C ಸರಣಿಯ ಮೂಲಕ ಕೆಲವು ಅಗ್ಗದ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಮುಖ್ಯವಾಗಿ ಪೊಕೊ C50 ಸ್ಮಾರ್ಟ್‌ಪೋನ್‌ ಬೆಲೆ ಹಾಗೂ ಫೀಚರ್ಸ್‌ನಿಂದ ಎಂಟ್ರಿ ಲೆವೆಲ್‌ ವಿಭಾಗದಲ್ಲಿ ಗಮನ ಸೆಳೆದಿದೆ. ಈ ಫೋನ್‌ ಇದೀಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಸಖತ್ ಖುಷಿ ನೀಡಿದೆ.

ಹೌದು, ಪ್ರಮುಖ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ C50 ಮೊಬೈಲ್‌ 38% ರಷ್ಟು ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಫೋನ್‌ (2GB RAM + 32GB) 8,999ರೂ. ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದ್ದು, ಈಗ ಡಿಸ್ಕೌಂಟ್‌ನಲ್ಲಿ 5,499ರೂ. ಗಳ ದರದಲ್ಲಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಗ್ರಾಹಕರಿಗೆ ಎಕ್ಸ್‌ಚೇಂಜ್ ಆಫರ್‌ ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಕೊಡುಗೆ ಸಹ ಲಭ್ಯ.

ಪೊಕೊ C50 ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಅಗ್ಗದ ಬೆಲೆಗೆ ಖರೀದಿಸಬಹುದು!

ಪೊಕೊ C50 ಮೊಬೈಲ್‌ ಮೀಡಿಯಾಟೆಕ್‌ ಹಿಲಿಯೋ A22 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಈ ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇನ್ನು ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿ ಇದ್ದು, ಸೆಲ್ಫಿ ಕ್ಯಾಮೆರಾವು 5 ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಪೊಕೊ C50 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ C50 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಪೊಕೊ C50 ಸ್ಮಾರ್ಟ್‌ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1,600 x 700 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 120Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ನೊಂದಿಗೆ ಬರಲಿದ್ದು, ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಪಡೆದಿದೆ.

ಪೊಕೊ C50 ಪ್ರೊಸೆಸರ್‌ ಸಾಮರ್ಥ್ಯ ಹೇಗೆ : ಪೊಕೊ C50 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ A22 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 (Go Edition) ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ 3GB RAM ಮತ್ತು 32GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 512GB ವರೆಗೆ ವಿಸ್ತರಿಸಬಹುದು.

ಪೊಕೊ C50 ಕ್ಯಾಮೆರಾ ರಚನೆ ಏನು : ಪೊಕೊ C50 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒದಗಿಸಲಾಗಿದೆ. ಹಿಂಭಾಗದ ಮತ್ತು ಮುಂಭಾಗದ ಎರಡೂ ಕ್ಯಾಮೆರಾಗಳು 1080p ವೀಡಿಯೊಗಳನ್ನು 30fps ನಲ್ಲಿ ಚಿತ್ರೀಕರಿಸುವ ಸಾಮರ್ಥ್ಯವನ್ನು ಹೊಂದಿವೆ.

ಪೊಕೊ C50 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಪೊಕೊ C50 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11/b/g/n, ಬ್ಲೂಟೂತ್‌ v5, GPS/ A-GPS, ಗ್ಲೋನಾಸ್‌, Beidou, ಮೈಕ್ರೋ-USB ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್ ಮತ್ತು ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಪೊಕೊ C50 ಕಲರ್‌ ಮತ್ತು ಮೆಮೊರಿ : ಪೊಕೊ C50 ಸ್ಮಾರ್ಟ್‌ಫೋನ್‌ ಭಾರತದಲ್ಲಿ 2GB + 32GB ಮತ್ತು 3GB + 32GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್‌ ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಗ್ರಾಹಕರು ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಸಬಹುದಾಗಿದೆ.

Best Mobiles in India

English summary
POCO C50 huge price drop on Flipkart: check offer price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+