ಪೊಕೊ ಸಂಸ್ಥೆಯ ಈ ಅಗ್ಗದ ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್!
ಇ ಕಾಮರ್ಸ್ ತಾಣಗಳು ಖರೀದಿದಾರರನ್ನು ಸೆಳೆಯಲು ಒಂದಿಲ್ಲೊಂದು ಆಫರ್ ನೀಡುತ್ತ ಇರುತ್ತವೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಹಬ್ಬದ ಸೇಲ್ ಮೇಳವನ್ನು ಆಯೋಜಿಸಿದ್ದು, ಈ ಮಾರಾಟದಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ರಿಯಾಯಿತಿ ಘೋಷಿಸಿದೆ. ಅವುಗಳಲ್ಲಿ ಅಗ್ಗದ ಬೆಲೆಯ ಪೊಕೊ C50 (Poco C50)ಫೋನ್ ಕೂಡಾ ಭಾರೀ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ತಾಣವು ಹಬ್ಬದ ವಿಶೇಷ ಮಾರಾಟದಲ್ಲಿ ಪೊಕೊ C50 ಫೋನ್ ಶೇ. 38% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. 2 GB RAM + 32 GB ಸ್ಟೋರೇಜ್‌ಮ ಎಂಟ್ರಿ ಲೆವೆಲ್ ಮಾದರಿಯ ಫೋನ್ ಅನ್ನು ಗ್ರಾಹಕರು 5,499ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳ ಕೊಡುಗೆ ಸಹ ದೊರೆಯುತ್ತದೆ. ಅಲ್ಲದೇ ಕ್ಯಾಶ್‌ಬ್ಯಾಕ್ ಆಫರ್ ಸಹ ಸಿಗಲಿದೆ.

ಪೊಕೊ C50 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮೊದಲ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಕೂಡಾ ಪಡೆದುಕೊಂಡಿದೆ. ಇದು ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಪೊಕೊ C50 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸದ ಮಾಹಿತಿ
ಪೊಕೊ C50 ಮೊಬೈಲ್ 6.52 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600x700 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬರಲಿದ್ದು, ವಾಟರ್ ಡ್ರಾಪ್ ಶೈಲಿಯ ನಾಚ್ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ ಎಷ್ಟಿದೆ
ಪೊಕೊ C50 ಫೋನ್ ಮೀಡಿಯಾ ಟೆಕ್ ಹಿಲಿಯೋ A22 SoC ಪ್ರೊಸೆಸರ್ ಪವರ್ ಹೊಂದಿದ್ದು, ಇದು ಆಂಡ್ರಾಯ್ಡ್ 12 (Go Edition) ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 512GB ವರೆಗೆ ವಿಸ್ತರಿಸಬಹುದು.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಪೊಕೊ ಸಂಸ್ಥೆಯ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ AI ಸೆನ್ಸಾರ್ ಬೆಂಬಲಿಸಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದುಕೊಂಡಿದೆ. ಹಿಂದಿನ ಮತ್ತು ಮುಂಭಾಗದ ಎರಡೂ ಕ್ಯಾಮೆರಾಗಳು 1080p ವೀಡಿಯೊಗಳನ್ನು 30fps ನಲ್ಲಿ ಚಿತ್ರೀಕರಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಪೊಕೊ C50 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 10W ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G LTE, Wi-Fi 802.11/b/g/n, ಬ್ಲೂಟೂತ್ v5, GPS/ A-GPS, ಗ್ಲೋನಾಸ್, Beidou, ಮೈಕ್ರೋ-USB ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಪಡೆದಿದೆ. ಇದಲ್ಲದೆ ಅಕ್ಸಿಲೆರೊಮೀಟರ್ ಮತ್ತು ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಪಡೆದುಕೊಂಡಿದೆ.
ಮೆಮೊರಿ, ಕಲರ್ ಮತ್ತು ಲಭ್ಯತೆ
ಈ ಫೋನ್ ಭಾರತದಲ್ಲಿ 2GB RAM + 32GB ಸ್ಟೋರೇಜ್ ಹಾಗೂ 3GB + 32GB ಸ್ಟೋರೇಜ್ ಆವೃತ್ತಿಯಲ್ಲಿ ಲಭ್ಯ ಇದೆ. ಈ ಫೋನ್ ಅನ್ನು ಗ್ರಾಹಕರು ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದಾಗಿದ್ದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಖರೀದಿಗೆ ಸಿಗುತ್ತದೆ.


Click it and Unblock the Notifications








