ಪೊಕೊ C50 ಸ್ಮಾರ್ಟ್‌ಫೋನ್‌ಗೆ ಬೊಂಬಾಟ್ ಡಿಸ್ಕೌಂಟ್: 5,749ರೂ.ಗಳಲ್ಲಿ ಲಭ್ಯ!
ಪೊಕೊ ಫೋನ್‌ಗಳಿಗೆ ಭರ್ಜರಿ ಬೇಡಿಕೆ ಇದ್ದು, ಈ ವರ್ಷದ ಅಂದರೆ 2023ರ ಪ್ರಾರಂಭದಿಂದಲೇ ಮಾರುಕಟ್ಟೆಯಲ್ಲಿ ಪೊಕೊ ಸದ್ದು ಮಾಡಿಕೊಂಡು ಬರುತ್ತಿದೆ. ಅದರಂತೆ ಈ ವರ್ಷದ ಆರಂಭದಲ್ಲಿ ಬಜೆಟ್ ಬೆಲೆಯೊಂದಿಗೆ ಲಾಂಚ್ ಆಗಿದ್ದ ಸ್ಮಾರ್ಟ್‌ಫೋನ್ ಇದೀಗ ಭಾರೀ ಡಿಸ್ಕೌಂಟ್ ಪಡೆದುಕೊಂಡಿದ್ದು, ನೀವು ನಿರೀಕ್ಷೆ ಮಾಡಿರದ ಬೆಲೆಯಲ್ಲಿ ಲಭ್ಯವಾಗಲಿದೆ.
ಹೌದು, ಪೊಕೊ ಈಗಾಗಲೇ ಹಲವು ಜನಪ್ರಿಯ ಫೋನ್‌ಗಳನ್ನು ಪರಿಚಯಿಸುವ ಮೂಲಕ ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಪೊಕೊ C50 (POCO C50) ಸ್ಮಾರ್ಟ್‌ಫೋನ್ ಗೆ ಡಿಸ್ಕೌಂಟ್ ಘೋಷಣೆ ಮಾಡಲಾಗಿದ್ದು, ಈ ಫೋನ್ ಮೀಡಿಯಾಟೆಕ್ ಹಿಲಿಯೋ A22SoC ಪ್ರೊಸೆಸರ್ ಬಲ ಪಡೆದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, 10Wಚಾರ್ಜಿಂಗ್ ಬೆಂಬಲ ಹೊಂದಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಇದರ ಆಫರ್ ಬೆಲೆ ವಿವರವನ್ನು ತಿಳಿಯಿರಿ.

ಪೊಕೊ C50 ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ ಅನ್ನು ನೀವು ಅಗ್ಗದ ಬೆಲೆಗೂ ಖರೀದಿ ಮಾಡುವ ಮುನ್ನ ಇದರ ಪ್ರಮುಖ ಫೀಚರ್ಸ್ ಕಡೆ ಕಣ್ಣಾಯಿಸುವುದು ಒಳಿತು. ಅದರಂತೆ ಈ ಫೋನ್ 6.52 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, 1,600x700 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ ಇದು 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಕಾಣಿಸಿಕೊಂಡಿದೆ.
ಪೊಕೊ C50 ಡಿಸ್‌ಪ್ಲೇ ಪ್ರೊಸೆಸರ್: ಈ ಪೊಕೊ C50 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್ ಬಲ ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 (Go Edition) ನಲ್ಲಿ ಇದರಲ್ಲಿ ರನ್ ಆಗಲಿದೆ. ಇನ್ನು 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಈ ಫೋನ್ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು ನೀವು ಬರೋಬ್ಬರಿ 512GB ವರೆಗೆ ವಿಸ್ತರಣೆ ಮಾಡಿಕೊಳ್ಳಬಹುದು.
ಪೊಕೊ C50 ಕ್ಯಾಮೆರಾ ರಚನೆ: ಈ ವಿಶೇಷ ಪೋನ್ ಡ್ಯುಯಲ್ ರಿಯರ್ ಕ್ಯಾಮೆರಾವನ್ನು ರಚನೆ ಹೊಂದಿದ್ದು, ಅದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ನೊಂದಿಗೆ AI ಸೆನ್ಸಾರ್ ಬೆಂಬಲಿಸಲಿದೆ. ಹಾಗೆಯೇ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಇದು ಒಳಗೊಂಡಿದೆ. ಈ ಎರಡೂ ಕ್ಯಾಮೆರಾ ಸೆನ್ಸರ್‌ಗಳ ಮೂಲಕ 1080p ವಿಡಿಯೋಗಳನ್ನು 30fps ಸಾಮರ್ಥ್ಯದಲ್ಲಿ ಸೆರೆ ಹಿಡಿಯಬಹುದಾಗಿದೆ.

ಪೊಕೊ C50 ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಕನೆಕ್ಟಿವಿಟಿ ವಿಚಾರಕ್ಕೆ ಬಂದರೆ 4G LTE, Wi-Fi 802.11/b/g/n, ಬ್ಲೂಟೂತ್ ಆವೃತ್ತಿ v5, GPS/ A-GPS, ಗ್ಲೋನಾಸ್, Beidou, ಮೈಕ್ರೋ ಯುಎಸ್‌ಬಿ ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಹೊಂದಿದೆ.
ಪೊಕೊ C50 ಆಫರ್ ಬೆಲೆ ವಿವರ: ಈ ಪೊಕೊ C50 ಫೋನ್ ಬೆಲೆ 8,999ರೂ. ಗಳಾಗಿದ್ದು, ನೀವಿದನ್ನು 5,749ರೂ. ಗಳಿಗೆ ಖರೀದಿ ಮಾಡಬಹುದು. ಅಂದರೆ ಈ ಫೋನ್‌ಗೆ 36% ಡಿಸ್ಕೌಂಟ್ ಘೋಷಣೆ ಮಾಡಲಾಗಿದೆ. ಇದಿಷ್ಟೇ ಅಲ್ಲದೆ ಕೆಲವು ಬ್ಯಾಂಕ್ ಹಾಗೂ ವಿನಿಮಯ ಸೌಲಭ್ಯ ಸಗ ಲಭ್ಯ ಇದ್ದು, ಈ ಮೂಲಕ ಖರೀದಿ ಮಾಡಲು ಮುಂದಾದರೆ ನೀವು ಇನ್ನೂ ಹೆಚ್ಚಿನ ಹಣ ಉಳಿತಾಯ ಮಾಡಬಹುದಾಗಿದೆ.

ಪೊಕೊ C50 ಸ್ಮಾರ್ಟ್‌ಫೋನ್ ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಬಣ್ಣದ ಆಯ್ಕೆಯಲ್ಲಿ ಕಾಣಿಸಿಕೊಂಡಿದ್ದು, ಇದನ್ನು ಪ್ರಮುಖ ಇ ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಇನ್ಯಾಕೆ ತಡ ಇಷ್ಟೊಂದು ಅಗ್ಗದ ದರದಲ್ಲಿ ಲಭ್ಯವಾಗುತ್ತಿರುವ ಈ ಫೋನ್ ಅನ್ನು ಆಫರ್ ಮುಗಿಯೋದರ ಒಳಗೆ ಖರೀದಿ ಮಾಡಿ.


Click it and Unblock the Notifications








