Just In
Don't Miss
- Automobiles
ವೇಗವಾಗಿ ಮುನ್ನುಗ್ಗುತ್ತಿವೆ ಹೀರೋ, ಹೋಂಡಾ... ಹಿಂದೆಯೇ ಬಂತು ಟಿವಿಎಸ್!
- News
World Cancer Day 2023: ವಿಶ್ವ ಕ್ಯಾನ್ಸರ್ ದಿನ- ನಿಮ್ಮ ಜೀವನಶೈಲಿಯಲ್ಲಿರಲಿ ಈ ಬದಲಾವಣೆಗಳು
- Movies
Lakshana Seria: ಶ್ವೇತಾಗೆ ಎಚ್ಚರಿಕೆ ಕೊಟ್ಟ ಭೂಪತಿ, ನಕ್ಷತ್ರ ಜೊತೆ ಚೆಲ್ಲಾಟ
- Sports
ಭಾರತ vs ಆಸ್ಟ್ರೇಲಿಯಾ: ಸುಂದರ್ ಸೇರಿ ನಾಲ್ವರು ಸ್ಪಿನ್ನರ್ಗಳು ನೆಟ್ ಬೌಲರ್ಗಳಾಗಿ ತಂಡಕ್ಕೆ ಸೇರ್ಪಡೆ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪೊಕೊ C50 ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಕಡಿಮೆ, ಜಬರ್ದಸ್ತ್ ಫೀಚರ್ಸ್!
2023ರ ಪ್ರಾರಂಭದಲ್ಲಿಯೇ ಸ್ಮಾರ್ಟ್‌ಫೋನ್ ಮಾರುಕಟ್ಟೆ ಸಾಕಷ್ಟು ಸೌಂಡ್ ಮಾಡ್ತಿದೆ. ಹಲವು ಜನಪ್ರಿಯ ಬ್ರ್ಯಾಂಡ್‌ಗಳು ತಮ್ಮ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಭಾರಿ ಸಂಚಲನ ಸೃಷ್ಟಿಸಿವೆ. ಇದೇ ಸಾಲಿಗೆ ಇದೀಗ ಪೊಕೊ ಕಂಪೆನಿ ಕೂಡ ಸೇರಿದೆ. ತನ್ನ ಬಹು ನಿರೀಕ್ಷಿತ ಪೊಕೊ C50 ಫೋನ್ ಪರಿಚಯಿಸುವ ಮೂಲಕ ಹೊಸ ಅಲೆಯನ್ನು ಸೃಷ್ಟಿಸುವ ನಿರೀಕ್ಷೆ ಮೂಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಪೊಕೊ ಕಂಪೆನಿ ತನ್ನ ಸಿ ಸರಣಿಯಲ್ಲಿ ಹೊಸ ಪೊಕೊ C50 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್ ಅತ್ಯಾಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸುವುದು ಪ್ರಮುಖ ಹೈಲೈಟ್ ಆಗಿದೆ. ಇನ್ನು ಫೋನ್ ಕೈಗೆಟಕುವ ಬೆಲೆಯನ್ನು ಹೊಂದಿದ್ದು, ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ. ಇನ್ನುಳಿದಂತೆ ಈ ಫೋನ್‌ನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ C50 ಸ್ಮಾರ್ಟ್‌ಫೋನ್ 6.52 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600x700 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬರಲಿದ್ದು, ವಾಟರ್ ಡ್ರಾಪ್ ಶೈಲಿಯ ನಾಚ್ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ ಏನಿದೆ?
ಪೊಕೊ C50 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 512GB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಪೊಕೊ C50 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, AI ಸೆನ್ಸಾರ್ ಬೆಂಬಲಿಸಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಹಿಂದಿನ ಮತ್ತು ಮುಂಭಾಗದ ಎರಡೂ ಕ್ಯಾಮೆರಾಗಳು 1080p ವೀಡಿಯೊಗಳನ್ನು 30fps ನಲ್ಲಿ ಚಿತ್ರೀಕರಿಸುವ ಸಾಮರ್ಥ್ಯವನ್ನು ಹೊಂದಿವೆ.

ಬ್ಯಾಟರಿ ಮತ್ತು ಇತರೆ
ಪೊಕೊ C50 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11/b/g/n, ಬ್ಲೂಟೂತ್ v5, GPS/ A-GPS, ಗ್ಲೋನಾಸ್, Beidou, ಮೈಕ್ರೋ-USB ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್ ಮತ್ತು ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ C50 ಸ್ಮಾರ್ಟ್‌ಫೋನ್ ಭಾರತದಲ್ಲಿ 2GB RAM + 32GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 6,499ರೂ. ಬೆಲೆಯನ್ನು ಹೊಂದಿದೆ. ಇದರ 3GB + 32GB ಆವೃತ್ತಿಯ ಬೆಲೆ 7,299ರೂ. ಆಗಿದೆ. ಇದನ್ನು ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಇದೇ ಜನವರಿ 10 ರಿಂದ ಸೇಲ್ ಆಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470