Home
ಸುದ್ದಿಜಾಲ

ಪೊಕೊ C51 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ! ಯಾಕಿಷ್ಟು ನಿರೀಕ್ಷೆ?

ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಪೊಕೊ ಕೂಡ ಒಂದಾಗಿದೆ. ಪೊಕೊ ಕಂಪೆನಿ ತನ್ನ ಬಜೆಟ್‌ ಹಾಗೂ ಮಿಡ್‌ರೇಂಜ್‌ ಸ್ಮಾರ್ಟ್‌ಫೋನ್‌ಗಳ ಸದ್ದು ಮಾಡುತ್ತಲೇ ಬಂದಿದೆ. ಇದೀಗ ಹೊಸ ಪೊಕೊ C51 ಮೂಲಕ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆ ಹುಟ್ಟಹಾಕಿದೆ. ಈ ಫೋನ್‌ ಬಜೆಟ್‌ ಸ್ನೇಹಿ ಆಗಿದ್ದು ಅತ್ಯಾಕರ್ಷಕ ಫೀಚರ್ಸ್‌ ಹೊಂದಿರಲಿದೆ ಎನ್ನಲಾಗಿದೆ.

ಹೌದು, ಪೊಕೊ C51 ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 7 ರಂದು ಬಿಡುಗಡೆ ಮಾಡಲಿದೆ. ಸದ್ಯ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G36 12nm ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ C51 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ! ಯಾಕಿಷ್ಟು ನಿರೀಕ್ಷೆ?

ಪೊಕೊ C51 ಡಿಸ್‌ಪ್ಲೇ ಹೇಗಿರಲಿದೆ?

ಪೊಕೊ C51 ಸ್ಮಾರ್ಟ್‌ಫೋನ್‌ 6.52-ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಜೊತೆಗೆ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ C51 ಪ್ರೊಸೆಸರ್‌ ಯಾವುದು?

ಪೊಕೊ C51 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G36 12nm ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 (Go Edition) ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 4GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರಬಹುದು. ಇದಲ್ಲದೆ 3GB ವರೆಗೆ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಪೊಕೊ C51 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ! ಯಾಕಿಷ್ಟು ನಿರೀಕ್ಷೆ?

ಪೊಕೊ C51 ಕ್ಯಾಮೆರಾ ಸೆಟ್‌ಅಪ್‌

ಪೊಕೊ C51 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಪೊಕೊ C51 ಬ್ಯಾಟರಿ ಮತ್ತು ಇತರೆ

ಪೊಕೊ C51 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಆಡಿಯೋ ಜ್ಯಾಕ್, FM ರೇಡಿಯೋ, ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್‌ 5.0, GPS + GLONASS ಮತ್ತು ಮೈಕ್ರೋ USB ಪೋರ್ಟ್ ಅನ್ನು ಬೆಂಬಲಿಸಲಿದೆ.

ಪೊಕೊ C51 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ! ಯಾಕಿಷ್ಟು ನಿರೀಕ್ಷೆ?

ಪೊಕೊ C51 ಬೆಲೆ ಮತ್ತು ಲಭ್ಯತೆ

ಪೊಕೊ C51 ಸ್ಮಾರ್ಟ್‌ಫೋನ್‌ ಏಪ್ರಿಲ್ 7 ಕ್ಕೆ ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಇದು ಬಜೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ ಎನ್ನಲಾಗಿದ್ದು, ಇದರ ನಿಖರ ಬೆಲೆಯನ್ನು ಇನ್ನು ಕೂಡ ಬಹಿರಂಗಪಡಿಸಲಾಗಿಲ್ಲ. ಆದರೆ ಸದ್ಯದಲ್ಲೇ ಇದರ ಬೆಲೆ ವಿವರಗಳು ಬಹಿರಂಗವಾಗುವ ಸಾಧ್ಯತೆಯಿದೆ.

ಇದಲ್ಲದೆ ಪೊಕೊ ಕಂಪೆನಿ ಇತ್ತೀಚಿಗೆ ತನ್ನ ಸಿ ಸರಣಿಯಲ್ಲಿ ಹೊಸ ಪೊಕೊ C50 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸುವುದು ಪ್ರಮುಖ ಹೈಲೈಟ್‌ ಆಗಿದೆ.

Best Mobiles in India

English summary
POCO has confirmed that the phone will feature 4GB of RAM, expandable to an additional 3GB.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+