ಅಗ್ಗದ ಬೆಲೆಯ ಈ ಬಿಗ್ ಸ್ಕ್ರೀನ್ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತನ್ನ ಪ್ಲಾಟ್‌ಫಾರ್ಮ್ ನಲ್ಲಿ ಇದೀಗ ಮೊಬೈಲ್ ಫೋನ್ಸ್ ಬೊನಾಂಜಾ ಸೇಲ್ ಪ್ರಾರಂಭಿಸಿದೆ. ಈ ಮೇಳದಲ್ಲಿ ಗ್ರಾಹಕರಿಗೆ ಡಿಸ್ಕೌಂಟ್‌ನಲ್ಲಿ ಹೊಸ ಗ್ಯಾಜೆಟ್ಸ್‌ಗಳನ್ನು ಖರೀದಿಸುವುದಕ್ಕೆ ಅವಕಾಶ ನೀಡಿದೆ. ಫ್ಲಿಪ್‌ಕಾರ್ಟ್ ಫನ್ಸ್ ಬೊನಾಂಜಾ ಸೇಲ್ ಮಾರಾಟದಲ್ಲಿ ಅಗ್ಗದ ಪೊಕೊ C51 ಮೊಬೈಲ್ ಬಿಗ್ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಮೊಬೈಲ್ ಫೋನ್ಸ್ ಬೊನಾಂಜಾ ಸೇಲ್ ಶುರು ಮಾಡಿದ್ದು, ಈ ಸೇಲ್ ಮೇಳವು ಇದೇ ಡಿಸೆಂಬರ್ 6 ರ ವರೆಗೂ ಲೈವ್ ಇರಲಿದೆ. ಈ ಸೇಲ್ ನಲ್ಲಿ ವಿವೋ ಸಂಸ್ಥೆಯ ಪೊಕೊ C51 ಮೊಬೈಲ್ ಮೇಲೆ ಶೇ. 37% ರಷ್ಟು ಆಫರ್ ಲಭ್ಯ ಮಾಡಿದ್ದು, ಗ್ರಾಹಕರು 6,249ರೂ. ಗಳಿಗೆ ಖರೀದಿಸಬಹುದು. ಇತರೆ ಆಫರ್ ಸೇರಿ ಈ ಫೋನ್ ಅನ್ನು 5,499ರೂ. ಗಳಿಗೂ ಖರೀದಿಸಲು ಅವಕಾಶ ಇದೆ.

ಅಂದಹಾಗೆ ಪೊಕೊ C51 ಮೊಬೈಲ್ 4 GB ಸಾಮರ್ಥ್ಯದ ಆಂತರೀಕ RAM ಪಡೆದಿದ್ದುರೂ, ಸುಮಾರು 7 GB ವರೆಗೆ ವರ್ಚುವಲ್ RAM ಸಪೋರ್ಟ್ ಲಭ್ಯ. ಇನ್ನು ಈ ಮೊಬೈಲ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೇ ಪೊಕೊ C51 ಫೋನ್ ಯಾವೆಲ್ಲಾ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆ
ಪೊಕೊ C51 ಮೊಬೈಲ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 6.52 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಇದರ ಜೊತೆಗೆ ವಾಟರ್ ಸ್ಟೈಲ್ ನಾಚ್ ರಚನೆಯ ಈ ಡಿಸ್‌ಪ್ಲೇಯು 269 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.
ಪ್ರೊಸೆಸರ್ ಕಾರ್ಯದ ವೇಗ
ಪೊಕೊ C51 ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಬೆಂಬಲದೊಂದಿಗೆ ಕೆಲಸ ನಿರ್ವಹಿಸುತ್ತದೆ. ಹಾಗೇಯೇ 4GB + 64 GB ಸ್ಟೋರೇಜ್ ಸಾಮರ್ಥ್ಯವನ್ನು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.
ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಪೊಕೊ C51 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಮೊದಲ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ QVGA ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಬ್ಯಾಟರಿ ಮತ್ತು ಇತರೆ ಆಯ್ಕೆಗಳು
ಪೊಕೊ C51 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಟಾಪ್ ಅನ್ನು ಹೊಂದಿದ್ದು, ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v.5, ಹಾಟ್‌ಸ್ಪಾಟ್, ವೈಫೈ, ಅನ್ನು ಸಪೋರ್ಟ್ ಮಾಡುತ್ತದೆ.
ಮೆಮೊರಿ ಆಯ್ಕೆ ಹಾಗೂ ಕಲರ್ ಮಾಹಿತಿ
ಪೊಕೊ C51 ಸ್ಮಾರ್ಟ್‌ಫೋನ್ 4GB RAM + 64 GB ವೇರಿಯಂಟ್ ಆಯ್ಕೆಯಲ್ಲಿ ಲಭ್ಯ. ಇನ್ನು ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆ ಯಲ್ಲಿ ಖರೀದಿಗೆ ಲಭ್ಯ ಇದೆ. ಆಸಕ್ತ ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








