POCO: ಪೊಕೊ C55 ಫೋನ್‌ಗೆ ಸಿಗ್ತಾ ಇದೆ 46% ಡಿಸ್ಕೌಂಟ್! ಇನ್ಯಾಕೆ ತಡ ಕೂಡಲೇ ಖರೀದಿಸಿ!
ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್‌ನಲ್ಲಿ ಪೊಕೊ C55 ಸ್ಮಾರ್ಟ್‌ಫೋನ್ 46% ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನಿನ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯ ಮೇಲೆ ಈ ರಿಯಾಯಿತಿ ಅನ್ವಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ.
ಹೌದು, ಪೊಕೊ C55 ಫೋನ್ ಅಮೆಜಾನ್ ತಾಣದಲ್ಲಿ ಬಿಗ್ ಡಿಸ್ಕೌಂಟ್ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆ ಮೂಲಬೆಲೆಗಿಂತ ಅತಿ ಕಡಿಮೆ ಬೆಲೆಗೆ ಕುಸಿದಿದೆ. ಕೈಗೆಟಕುವ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ ಇದು ಬೆಸ್ಟ್ ಟೈಂ ಆಗಿದೆ. ಹಾಗಾದ್ರೆ ಪೊಕೊ C55 ಫೋನ್ ಡಿಸ್ಕೌಂಟ್ ಬಳಿಕ ಯಾವ ಬೆಲೆಗೆ ಸೇಲ್ ಆಗುತ್ತಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ C55 ಬೆಲೆಯಲ್ಲಿ ಭಾರಿ ಕುಸಿತ
ಪೊಕೊ C55 ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 46% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆ ಇದೀಗ 13,999ರೂ ಬದಲಿಗೆ 7,498ರೂ ಗಳಿಗೆ ಇಳಿಕೆಯಾಗಿದೆ. ಇದು ಸ್ಮಾರ್ಟ್‌ಫೋನ್‌ನ 6GB RAM ಮತ್ತು 128GB ಆಯ್ಕೆಗೆ ಅನ್ವಯವಾಗಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಅನ್ನು ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸುವವರಿಗೆ ಇನ್ನಷ್ಟು ರಿಯಾಯಿತಿ ಕೂಡ ಲಭ್ಯವಾಗಲಿದೆ.
ಪೊಕೊ C55 ಫೀಚರ್ಸ್ ಹೇಗಿದೆ?
ಪೊಕೊ C55 ಮೊಬೈಲ್ 720 x 1650 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.71 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ಟಚ್ ಸ್ಯಾಂಪಲಿಂಗ್ ರೇಟ್ ಬೆಂಬಲಿಸಲಿದ್ದು, ಪಾಂಡಾ ಗ್ಲಾಸ್ ಲೇಯರ್ ಪ್ರೊಟೆಕ್ಷನ್ ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 82.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪೊಕೊ C55 ಪ್ರೊಸೆಸರ್ ಯಾವುದು?
ಪೊಕೊ C55 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್‌ನಲ್ಲಿದೆ. ಈ ಮೊಬೈಲ್‌ನಲ್ಲಿ ನೀವು RAM ಅನ್ನು 11GB ವರೆಗೆ ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಾಗಿದೆ.
ಪೊಕೊ C55 ಕ್ಯಾಮೆರಾ ಸೆಟಪ್
ಪೊಕೊ C55 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ. ಎರಡನೇ ಕ್ಯಾಮೆರಾ 2ಮೆಗಾ ಪಿಕ್ಸಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಪೊಕೊ C55 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಪೊಕೊ C55 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ 5.0, FM ರೇಡಿಯೋ, ರೆಕಾರ್ಡಿಂಗ್, USB microUSB 2.0, OTG ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಕಂಪಾಸ್, ಅನ್ನು ಬೆಂಬಲಿಸಲಿದೆ.
ಇದಲ್ಲದೆ ಪೊಕೊ ಇತ್ತೀಚಿಗೆ ಭಾರತದಲ್ಲಿ ಪೊಕೊ X6 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8300 ಅಲ್ಟ್ರಾ ಪ್ರೊಸೆಸರ್ ವೇಗವನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಪಡೆದಿದ್ದು ಹಾಗೂ ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಪಡೆದಿದೆ.


Click it and Unblock the Notifications








