ಪೊಕೊದಿಂದ ಬರಲಿದೆ ಮತ್ತೆ ಹೊಸ ಫೋನ್‌!..ಇದು ಯಾವ ಫೋನ್‌ ತರಹ ಇದೆ ಗೊತ್ತಾ?

|

ಪೊಕೊ ಮೊಬೈಲ್ ಸಂಸ್ಥೆಯು ಕೆಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿ ಮೊಬೈಲ್‌ ಪ್ರಿಯರ ಮನ ಗೆದ್ದಿದೆ. ಇತ್ತೀಚಿಗಷ್ಟೆ ಪೊಕೊ ಸಂಸ್ಥೆಯು ಭಾರತದಲ್ಲಿ ಪೊಕೊ C50 ಹೆಸರಿನ ಎಂಟ್ರಿ ಲೆವೆಲ್‌ ಫೋನ್‌ ಅನ್ನು ಪರಿಚಯಿಸಿ ಸದ್ದು ಮಾಡಿದ್ದು, ಮೊದಲ ಸೇಲ್‌ ಸಹ ಆರಂಭ ಮಾಡಿದೆ. ಅದರ ಬೆನ್ನಲ್ಲೇ ಸಂಸ್ಥೆಯು ಈಗ C ಸರಣಿಯಲ್ಲಿ ಮತ್ತೊಂದು ಫೋನ್‌ ಅನ್ನು ಅನಾವರಣ ಮಾಡುವ ಸೂಚನೆ ನೀಡಿದ್ದು, ಅದುವೇ ಪೊಕೊ C55 ಫೋನ್ ಆಗಿದೆ.

ಮಾರುಕಟ್ಟೆಯಲ್ಲಿ

ಹೌದು, ಪೊಕೊ ಮೊಬೈಲ್‌ ಸಂಸ್ಥೆಯು ನೂತನವಾಗಿ ಪೊಕೊ C55 (POCO C55) ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ರೆಡಿಯಾಗುತ್ತಿದೆ. ಈ ಫೋನ್‌ ರೆಡ್ಮಿ 12C ಫೋನಿನ ರೀಬ್ರ್ಯಾಂಡೆಡ್‌ ಆವೃತ್ತಿಯಂತೆ ಕಂಡುಬರುತ್ತದೆ ಎಂದು ಹೇಳಲಾಗಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಬಿಡುಗಡೆ ಆಗಲಿದ್ದು, 4GB + 64GB, 4GB + 128GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ನಿರೀಕ್ಷಿಸಲಾಗಿದೆ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ 12C ಫೋನ್‌ 1650 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.71 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 20.6:9 ಅನುಪಾತ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಟಿನ್ನಿ ಡಿವ್ ಡ್ರಾಪ್‌ ನಾಚ್‌ ರಚನೆ ಹೊಂದಿದ್ದು, ಜೊತೆಗೆ 500 nits ಬ್ರೈಟ್ನೆಸ್‌ ಹೊಂದಿದೆ.

ಪ್ರೊಸೆಸರ್‌ ಪವರ್

ಪ್ರೊಸೆಸರ್‌ ಪವರ್

ರೆಡ್ಮಿ 12C ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 12 ಓಎಸ್‌ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB ಮತ್ತು 6GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ರೆಡ್ಮಿ 12C ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಎರಡನೇ ಕ್ಯಾಮೆರಾ ಸೆನ್ಸಾರ್‌ ಬಗ್ಗೆ ಮಾಹಿತಿ ತಿಳಿಸಿಲ್ಲ. ಹಾಗೆಯೇ ಈ ಫೋನ್ ತನ್ನ ವರ್ಗದಲ್ಲೇ ಉತ್ತಮ ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್ಮಿ 12C ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣೆ ವಿಸ್ತರಣೆಗೆ ಬೆಂಬಲವಿದೆ. ಸಾಧನವು ಹೈಬ್ರಿಡ್ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಪೊಕೊ C50 ಸ್ಮಾರ್ಟ್‌ಫೋನ್ ಫೀಚರ್ಸ್‌

ಪೊಕೊ C50 ಸ್ಮಾರ್ಟ್‌ಫೋನ್ ಫೀಚರ್ಸ್‌

ಈ ಫೋನ್ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600x700 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಮೀಡಿಯಾಟೆಕ್‌ ಹಿಲಿಯೋ A22 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

ಡ್ಯುಯಲ್

ಇದಲ್ಲದೆ, ಇದು ಡ್ಯುಯಲ್ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, AI ಸೆನ್ಸಾರ್‌ ಬೆಂಬಲಿಸಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಪೊಕೊ C50 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
POCO C55 with a 5000mAh Battery Could be the Rebranded Redmi 12C.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X