ನಾಳೆ ಸ್ಟೈಲಿಶ್ ರಿಂಗ್ ಡಿಸೈನ್ ಇರುವ ಈ ಫೋನ್ ಖರೀದಿಗೆ ಲಭ್ಯ!..ಬೆಲೆ 6,999ರೂ.!
ಪೊಕೊ ಮೊಬೈಲ್ ಬ್ರ್ಯಾಂಡ್ ಹೊಸದಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ ಪೊಕೊ C61 ಸ್ಮಾರ್ಟ್‌ಫೋನ್ ಮೊದಲ ಮಾರಾಟ ನಾಳೆ (ಮಾರ್ಚ್ 28 ರಂದು) ಪ್ರಾರಂಭವಾಗಲಿದೆ. ಇನ್ನು ಆಸಕ್ತ ಖರೀದಿದಾರರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿ ಮಾಡಬಹುದಾಗಿದೆ.
ಹೌದು, ಪೊಕೊ ಸಂಸ್ಥೆಯ ಪೊಕೊ C61 ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ನಾಳೆ ಮಧ್ಯಾಹ್ನ 12 ರಂದು ಸೇಲ್ ಶುರು ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G36 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ 8 ಮೆಗಾ ಪಿಕ್ಸಲ್ AI ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಒಳಗೊಂಡಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 6,999ರೂ. ಗಳು ಆಗಿದ್ದು, ಕೆಲವು ಆಫರ್‌ಗಳು ಸಹ ಸಿಗಲಿವೆ.

ಇನ್ನು ಈ ಎಂಟ್ರಿ ಲೆವೆಲ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಪೊಕೊ C61 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಡಿಸ್‌ಪ್ಲೇ ರಚನೆ
ಪೊಕೊ C61 ಮೊಬೈಲ್ 6.71 ಇಂಚಿನ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಅನ್ನು ಪಡೆದುಕೊಂಡಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಒಳಗೊಂಡಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್‌ಸ್ಯಾಂಪಲಿಂಗ್ ರೇಟ್ ಪಡೆದಿದೆ.

ಪ್ರೊಸೆಸರ್ ಯಾವುದು
ಪೊಕೊ C61 ಫೋನ್ ಮೀಡಿಯಾ ಟೆಕ್ ಹಿಲಿಯೋ G36 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ವಿಆರ್ GE8320 ಜಿಪಿಯು ಸಪೋರ್ಟ್‌ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್ ಬೆಂಬಲ ಒಳಗೊಂಡಿದೆ. ಅಲ್ಲದೇ ಈ ಫೋನ್ 6GB RAM ಮತ್ತು 128GB eMMC 5.1 ಆಂತರೀಕ ಸ್ಟೋರೇಜ್ ಒಳಗೊಂಡಿದ್ದು, 6GB ವರೆಗಿನ ವರ್ಚುವಲ್ RAM ಆಯ್ಕೆ ಸಹ ಪಡೆದುಕೊಂಡಿದೆ.
ಡ್ಯುಯಲ್ ಕ್ಯಾಮೆರಾ ಆಯ್ಕೆ
ಪೊಕೊ C61 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾ ಬೇಸಿಕ್ ಲೆನ್ಸ್ ಸಪೋರ್ಟ್ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ಬಿಗ್ ಬ್ಯಾಟರಿ ಹಾಗೂ ಇತರೆ ಸೌಲಭ್ಯ
ಪೊಕೊ C61 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಜೊತೆಗೆ 10W ವೈರ್ಡ್ ಚಾರ್ಜಿಂಗ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, 3.5mm ಆಡಿಯೊ ಜಾಕ್ ಆಯ್ಕೆ ಸಹ ಪಡೆದುಕೊಂಡಿದೆ. ಇದರೊಂದಿಗೆ 4G LTE, ಬ್ಲೂಟೂತ್ ಆವೃತ್ತಿ 5.4, ವೈ-ಫೈ 5 ಆಯ್ಕೆಗಳು ಸಹ ಇವೆ.
ಬೆಲೆ ಹಾಗೂ ಲಭ್ಯತೆ
ಪೊಕೊ C61 ಮೊಬೈಲ್‌ನ ಆರಂಭಿಕ ವೇರಿಯಂಟ್ ಅನ್ನು ಗ್ರಾಹಕರು 6,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಈ ಫೋನ್ ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ ಇದ್ದು, ಖರೀದಿದಾರರು ಫ್ಲಿಪ್‌ಕಾರ್ಟ್ ತಾಣದ ಮೂಲಕ ಖರೀದಿಸಬಹುದು.


Click it and Unblock the Notifications








