Poco: ಭಾರತದಲ್ಲಿ ಅಗ್ಗದ ಬೆಲೆಯ ಪೊಕೊ C61 ಸ್ಮಾರ್ಟ್‌ಫೋನ್ ಲಾಂಚ್, ಭರ್ಜರಿ ಫೀಚರ್ಸ್
ಪೊಕೊ (Poco) ಫೋನ್‌ಗಳಿಗೆ ಈಗಂತೂ ಭರ್ಜರಿ ಬೇಡಿಕೆ ಇದೆ. ಸಾಕಷ್ಟು ಗ್ರಾಹಕರು ಈ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗಾಗಿ ಕಾದು ಕುಳಿತಿರುತ್ತಾರೆ. ಅದರಂತೆ ಈಗ ಪೊಕೊದ ನಿರೀಕ್ಷಿತ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ತನ್ನದೇ ಆದ ವಿಶೇಷ ಫೀಚರ್ಸ್ ಅನ್ನು ಪಡೆದುಕೊಂಡಿದೆ. ಅದರಲ್ಲಿ ಎಐ ಸೆನ್ಸರ್ ಗಮನಸೆಳೆದಿದೆ.
ಹೌದು, ಭಾರತದಲ್ಲಿ ಇಂದು ಪೊಕೊ C61 ಸ್ಮಾರ್ಟ್‌ಫೋನ್ (Poco C61 smartphone) ಅನ್ನು ಲಾಂಚ್ ಮಾಡಲಾಗಿದೆ. ಈ ಫೋನ್ 6GB RAM ಆಯ್ಕೆ ಪಡೆದಿದ್ದು, ಮೀಡಿಯಾಟೆಕ್ G36 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಬಜೆಟ್ ಬೆಲೆಯಲ್ಲಿ ಉತ್ತಮ ಫೋನ್ ಎನಿಸಿಕೊಳ್ಳಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಇದರ ಬೆಲೆ ಹಾಗೂ ಲಭ್ಯತೆ ಸೇರಿದಂತೆ ಅನೇಕ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಪೊಕೊ C61 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.71-ಇಂಚಿನ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್‌ಸ್ಯಾಂಪಲಿಂಗ್ ರೇಟ್ ಪಡೆದಿದ್ದು, ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.
ಪೊಕೊ C61 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಮೀಡಿಯಾಟೆಕ್ ಹಿಲಿಯೋ G36 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, IMG ಪವರ್ ವಿಆರ್ GE8320 ಜಿಪಿಯು ಬಲದೊಂದಿಗೆ ಕೆಲಸ ಮಾಡಲಿದೆ. ಹಾಗೆಯೆ ಈ ಫೋನ್ 6GB LPDDR4X RAM ಮತ್ತು 128GB eMMC 5.1 ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, 6GB ವರೆಗಿನ ವರ್ಚುವಲ್ RAM ಸೌಲಭ್ಯವನ್ನೂ ಸಹ ನೀಡಲಾಗಿದೆ. ಅಲ್ಲದೆ ಆಂಡ್ರಾಯ್ಡ್ 14 ಆಧಾರಿತ MIUI ಅನ್ನು ಈ ಫೋನ್ ರನ್ ಮಾಡುತ್ತದೆ.
ಪೊಕೊ C61 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಇದು 8 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದಿದ್ದು, ಎಐ ಲೆನ್ಸ್‌ನೊಂದಿಗೆ ಡ್ಯುಯಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಪೊಕೊ C61 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 10W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದರ ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, 3.5mm ಆಡಿಯೊ ಜಾಕ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಕನೆಕ್ಟಿವಿಟಿ ವಿಚಾರಕ್ಕೆ ಬಂದರೆ 4G LTE, ಬ್ಲೂಟೂತ್ ಆವೃತ್ತಿ 5.4, ವೈ-ಫೈ 5 ಸೇರಿದೆ.
ಪೊಕೊ C61 ಸ್ಮಾರ್ಟ್‌ಫೋನ್ ಬೆಲೆ ಹಾಗೂ ಲಭ್ಯತೆ: ಈ ಸ್ಮಾರ್ಟ್‌ಫೋನ್‌ನ 4GB/64GB ವೇರಿಯಂಟ್‌ಗೆ 7,499 ರೂ.ಗಳ ಬೆಲೆ ನಿಗದಿ ಮಾಡಲಾಗಿದೆ. ಹಾಗೆಯೇ 6GB/128GB ವೇರಿಯಂಟ್‌ಗೆ 8,499 ರೂ.ಗಳ ಬೆಲೆ ಇದ್ದು, ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಈ ಫೋನ್ ಲಭ್ಯ ಇರಲಿದೆ.

ಸಂತಸದ ವಿಚಾರ ಏನೆಂದರೆ ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 500 ರೂ.ಗಳ ರಿಯಾಯಿತಿಯನ್ನು ಪಡೆಯಬಹುದು. ಈ ಫೋನ್ ಅನ್ನು ಭಾರತದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಮಾರ್ಚ್ 28 ಮಧ್ಯಾಹ್ನ 12 ರಿಂದ ಖರೀದಿ ಮಾಡಬಹುದಾಗಿದೆ.


Click it and Unblock the Notifications








