Home
ಸುದ್ದಿಜಾಲ

ಪೊಕೊ C65 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ! ಕಾರ್ಯವೈಖರಿ ಹೇಗಿರಲಿದೆ?

ಪೊಕೊ ಕಂಪೆನಿಯ ಫೋನ್‌ಗಳಿಗೆ ಟೆಕ್‌ ವಲಯದಲ್ಲಿ ವಿಶೇಷ ಸ್ಥಾನವಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಪೊಕೊ ಸೈ ಎನಿಸಿಕೊಂಡಿದೆ. ಅದರಂತೆ ಇದೀಗ ಪೊಕೊ C65 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆದಿದೆ. ಇದು 800 ನೀಟ್ಸ್‌ ಬ್ರೈಟ್‌ನೆಸ್‌ ಬೆಂಬಲಿಸುವ ಡಿಸ್‌ಪ್ಲೇಯೊಂದಿದೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5ನೇ ನವೆಂಬರ್ 2023 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ಹೌದು, ಪೊಕೊ C65 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಫೀಚರ್ಸ್‌ ಕೂಡ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದೆ. ಜೊತೆಗೆ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗದೊಂದಿಗೆ ಬರಲಿದೆ ಎಂದು ಪೋಸ್ಟರ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ನಿರೀಕ್ಷಿಸಬಹುದಾದ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ C65 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ! ಕಾರ್ಯವೈಖರಿ ಹೇಗಿರಲಿದೆ?

ಪೊಕೊ C65 ಡಿಸ್‌ಪ್ಲೇ ರಚನೆ ಹೇಗಿದೆ?
ಪೊಕೊ C65 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 1920 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 330 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿರಲಿದೆ. ಇದು 800 ನೀಟ್ಸ್‌ ಬ್ರೈಟ್‌ನೆಸ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಡಿಸ್‌ಪ್ಲೇ 2000:1 ಕಾಂಟ್ರಾಸ್ಟ್ ಅನುಪಾತವನ್ನು ಪಡೆದಿದೆ.

ಪೊಕೊ C65 ಪ್ರೊಸೆಸರ್‌ ಯಾವುದು?
ಪೊಕೊ C65 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ ಎಂದು ಅಂದಾಜಿಸಲಾಗಿದೆ.

ಪೊಕೊ C65 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ! ಕಾರ್ಯವೈಖರಿ ಹೇಗಿರಲಿದೆ?

ಪೊಕೊ C65 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಪೊಕೊ C65 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಆಯ್ಕೆಯನ್ನು ಹೊಂದಿರಲಿದೆ. ಇದರ ಎರಡು ಮತ್ತು ಮೂರನೇ ಕ್ಯಾಮೆರಾ ವಿವರಗಳು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೊನ್‌ ಸೆಲ್ಫಿ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ C65 ಬ್ಯಾಟರಿ ಮತ್ತು ಇತರೆ ಸೌಲಭ್ಯ ನಿರೀಕ್ಷೆ?
ಪೊಕೊ C65 ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ C65 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ! ಕಾರ್ಯವೈಖರಿ ಹೇಗಿರಲಿದೆ?

ಪೊಕೊ C65 ಬೆಲೆ ಮತ್ತು ಲಭ್ಯತೆ
ಪೊಕೊ C65 ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೆಜ್‌ ವೇರಿಯೆಂಟ್‌ ಆಯ್ಕೆಗೆ 109 US ಡಾಲರ್‌ಗಳ ಪರಿಚಯಾತ್ಮಕ ಬೆಲೆಯನ್ನು ಹೊಂದಿರುತ್ತದೆ ಎನ್ನಲಾಗಿದೆ. ಇದರ 8GB + 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯು 129 US ಡಾಲರ್‌ ಬೆಲೆಯನ್ನು ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ನವೆಂಬರ್‌ 5 ರಂದು ಬಿಡುಗಡೆ ಆಗಲಿದೆ ಎಂದು ಅಧಿಕೃತವಾಗಿ ಘೋಷಣೆ ಆಗಿದೆ. ಇದು ಯಾವೆಲ್ಲ ಕಲರ್‌ ಆಯ್ಕೆಗಳಲ್ಲಿ ಬರಬಹುದು ಎನ್ನುವುದು ಕೂಡ ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
POCO C65 global Market launch date revealed: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+