ಅಗ್ಗದ ಬೆಲೆಯ ಈ ಫೋನ್ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ; 128GB ಸ್ಟೋರೇಜ್!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ದೀಪಾವಳಿ ಹಬ್ಬದ ಅಂಗವಾಗಿ ಆಯ್ದ ಮೊಬೈಲ್‌ಗಳಿಗೆ ಬೊಂಬಾಟ್ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಪೊಕೊ ಸಂಸ್ಥೆಯು ಪೊಕೊ C65 (POCO C65) ಫೋನ್ ಗಮನಾರ್ಹ ಡಿಸ್ಕೌಂಟ್ ಬೆಲೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 4GB RAM + 128 GB ಸ್ಟೋರೇಜ್ ಆಯ್ಕೆ ಹಾಗೂ 6GB RAM + 128 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಆಯೋಜಿಸಿರುವ ದೀಪಾವಳಿ ಸೇಲ್‌ನಲ್ಲಿ ಪೊಕೊ C65 (POCO C65) ಫೋನ್ ಶೇ. 36% ರಷ್ಟು ನೇರ ಡಿಸ್ಕೌಂಟ್ ದರಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 6,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಅಂದಹಾಗೆ ಪೊಕೊ C65 (POCO C65) ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗಾದರೇ ಪೊಕೊ C65 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ C65 ಫೋನ್ - ಫೀಚರ್ಸ್
ಪೊಕೊ C65 ಸ್ಮಾರ್ಟ್‌ಫೋನ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 90 Hz ರಿಫ್ರೆಶ್ ರೇಟ್, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸೇರಿದಂತೆ ಡಿಸ್‌ಪ್ಲೇ ಸಂಬಂಧ ವಿವಿಧ ಅಪ್‌ಡೇಟ್ ಫೀಚರ್ಸ್ ಅನ್ನು ಈ ಫೋನ್ ಪಡೆದಿದೆ.
ಪೊಕೊ C65 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಮೂಲಕ ವಿಡಿಯೋ ಸ್ಕ್ರೀಮಿಂಗ್ ಮಾಡುವುದಾಗಲೀ ಅಥವಾ ಗೇಮಿಂಗ್ ಆಡುವಾಗ ಆಗಲಿ ಅತ್ಯುತ್ತಮ ಅನುಭವವನ್ನು ಒದಗಿಸಲಿದೆ. ಇದರೊಂದಿಗೆ ಮಾಲಿ G52 MC2 GPU ಗ್ರಾಫಿಕ್ಸ್ ಕಾರ್ಡ್ ಆಯ್ಕೆ ನೀಡಲಾಗಿದೆ. ಹಾಗೆಯೇ ಈ ಫೋನ್ MIUI 14 ಆಧಾರಿತ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್ ಅನ್ನು ಹೊಂದಿದೆ.
ಪೊಕೊ C65 ಸ್ಮಾರ್ಟ್‌ಫೋನ್ 4GB RAM + 128 GB ಆಂತರೀಕ ಸ್ಟೋರೇಜ್ ಆಯ್ಕೆ ಹಾಗೂ 6GB RAM + 128 GB ಆಂತರೀಕ ಸ್ಟೋರೇಜ್ ಆಯ್ಕೆ ಮೆಮೊರಿ ಹಾಗೂ 8GB RAM + 256GB ಆಂತರೀಕ ಸ್ಟೋರೇಜ್ ಆಯ್ಕೆಯ ಮೂರು ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ.
ಪೊಕೊ C65 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಮುಖ್ಯ ಸೆನ್ಸರ್ ಆಗಿದ್ದು, ಉಳಿದಂತೆ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ + ಎಐ ಲೆನ್ಸ್‌ನೊಂದಿಗೆ ಆಯ್ಕೆ ಪಡೆದಿದೆ. ಇನ್ನು ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ.
ಪೊಕೊ C65 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದ್ದು, 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ 4G LTE, ಡ್ಯುಯಲ್-ಬ್ಯಾಂಡ್ ವೈ ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್- ಸಿ ಪೋರ್ಟ್ ಸೇರಿದಂತೆ ವಿವಿಧ ಕನೆಕ್ಟಿವಿಟಿ ಸಪೋರ್ಟ್ ಒಳಗೊಂಡಿದೆ. ಇನ್ನು ಈ ಫೋನ್ ಕಪ್ಪು ಮತ್ತು ನೀಲಿ ಬಣ್ಣಗಳಲ್ಲಿ ಖರೀದಿಗೆ ಲಭ್ಯ ಇವೆ.


Click it and Unblock the Notifications








