Home
ಸುದ್ದಿಜಾಲ

ಭಾರತದಲ್ಲಿ ಪೊಕೊ C65 ಬಿಡುಗಡೆಗೆ ದಿನಗಣನೆ!ಅದ್ದೂರಿ ಫೀಚರ್ಸ್‌ ನಿರೀಕ್ಷೆ?

ಪೊಕೊ ಕಂಪೆನಿ ಭಾರತದಲ್ಲಿ ತನ್ನ ವಿಭಿನ್ನ ಮೊಬೈಲ್‌ಗಳ ಸೈ ಎನಿಸಿಕೊಂಡಿದೆ. ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಪೊಕೊ C65 ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೆ ತಿಂಗಳು (ಡಿ 15) ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಪೊಕೊ C65 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಪಡೆದುಕೊಂಡಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಪೊಕೊ C65 ಬಿಡುಗಡೆಗೆ ದಿನಗಣನೆ!ಅದ್ದೂರಿ ಫೀಚರ್ಸ್‌ ನಿರೀಕ್ಷೆ?

ಪೊಕೊ C65 ಡಿಸ್‌ಪ್ಲೇ ರಚನೆ ಸಾಧ್ಯತೆ
ಪೊಕೊ C65 ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಪಡೆದಿರಲಿದೆ.

ಪೊಕೊ C65 ಪ್ರೊಸೆಸರ್‌ ಯಾವುದು?
ಪೊಕೊ C65 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಜೊತೆಗೆ ARM Mali-G52 2EEMC2 GPU ಸಪೊರ್ಟ್‌ ಪಡೆದುಕೊಂಡಿದೆ. ಹಾಗೆಯೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ವಿಸ್ತರಿಸಬಹುದಾಗಿದೆ.

ಭಾರತದಲ್ಲಿ ಪೊಕೊ C65 ಬಿಡುಗಡೆಗೆ ದಿನಗಣನೆ!ಅದ್ದೂರಿ ಫೀಚರ್ಸ್‌ ನಿರೀಕ್ಷೆ?

ಪೊಕೊ C65 ಕ್ಯಾಮೆರಾ ಸೆಟಪ್‌ ಏನಿದೆ?
ಪೊಕೊ C65 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರಲಿದೆ ಎನ್ನಲಾಗಿದೆ.

ಪೊಕೊ C65 ಬ್ಯಾಟರಿ ಮತ್ತು ಇತರೆ
ಪೊಕೊ C65 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈಫೈ, ಬ್ಲೂಟೂತ್ 5.1, GPS + GLONASS, USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ನೊಂದಿಗೆ ಬರುವ ಸಾಧ್ಯತೆಯಿದೆ.

ಭಾರತದಲ್ಲಿ ಪೊಕೊ C65 ಬಿಡುಗಡೆಗೆ ದಿನಗಣನೆ!ಅದ್ದೂರಿ ಫೀಚರ್ಸ್‌ ನಿರೀಕ್ಷೆ?

ಪೊಕೊ C65 ಬೆಲೆ ಮತ್ತು ಲಭ್ಯತೆ
ಪೊಕೊ C65 ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಬೆಲೆ ವಿವರಗಳು ಬಹಿರಂಗವಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ನೀಲಿ ಮತ್ತು ಮ್ಯಾಟ್ ಬ್ಲ್ಯಾಕ್‌ ಬಣ್ಣದ ಆಯ್ಕೆಯಲ್ಲಿ ಬರಲಿದೆ. ಇತರ POCO ಫೋನ್‌ಗಳಂತೆಯೇ ಫೋನ್ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಮಾಡಲಾಗುತ್ತದೆ.

ಇನ್ನು ಪೊಕೊ ಕಂಪೆನಿಯ ಇತ್ತೀಚಿನ ಸುದ್ದಿಗಳನ್ನು ಗಮನಿಸುವುದಾದರೆ ಅಮೆಜಾನ್‌ ತಾಣದಲ್ಲಿ ಪೊಕೊ F1 ಸ್ಮಾರ್ಟ್‌ಫೋನ್‌ ರಿಯಾಯಿತಿ ದರದಲ್ಲಿ ದೊರೆಯುತ್ತಿದೆ. ಈ ಫೋನ್‌ಗೆ ಅಮೆಜಾನ್‌ (Amazon) 56% ರಿಯಾಯಿತಿ ಘೋಷಣೆ ಮಾಡಿದೆ. ಇಷ್ಟೇ ಅಲ್ಲದೆ ವಿನಿಮಯ ಆಫರ್ ಹಾಗೂ ಬ್ಯಾಂಕ್‌ ಆಫರ್ ಮೂಲಕ ಖರೀದಿ ಮಾಡಿದ್ರೆ ಇನ್ನೂ ಕಡಿಮೆ ಬೆಲೆಯಲ್ಲಿ ಈ ಫೋನ್‌ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಅಂದರೆ 24,999 ರೂ.ಗಳ ಸಾಮಾನ್ಯ ಬೆಲೆಯ ಈ ಫೋನ್‌ ಇದೀಗ 10,999 ರೂ.ಬೆಲೆಯಲ್ಲಿ ದೊರೆಯುತ್ತಿದೆ.

Best Mobiles in India

English summary
POCO C65 Smartphone with 256GB storage launching in India on December 15
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+