ಜಸ್ಟ್ 5,999 ರೂ.! 5200mAh ಬ್ಯಾಟರಿ.. 6.88 ಇಂಚಿನ ಡಿಸ್ಪ್ಲೇ.. ಯಾವ ಫೋನ್? ಸೇಲ್ ಯಾವಾಗ?
ಪೊಕೊ ಇತ್ತೀಚೆಗೆ ಭಾರತದಲ್ಲಿ ಹೊಸ ಅಗ್ಗದ ಫೋನ್ ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಇದನ್ನು ಪೊಕೊ C61 (POCO C61) ಫೋನಿನ ಉತ್ತರಾಧಿಕಾರಿಯಾಗಿ ಪರಿಚಯಿಸಲಾಗಿದೆ. ಹೌದು, ಈ ಸ್ಮಾರ್ಟ್‌ಫೋನ್ ಪೊಕೊ C71 (POCO C71) ಹೆಸರಿನೊಂದಿಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದು ಡ್ಯುಯಲ್ ಟೋನ್ ಫಿನಿಶ್‌ನೊಂದಿಗೆ ಆಕರ್ಷಕ ಲುಕ್ ಹೊಂದಿದೆ. ಅಂದಹಾಗೆ, ಈ ಮೊಬೈಲ್ ನಾಳೆ (ಏಪ್ರಿಲ್ 8) ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನ್ ಖರೀದಿಸುವ ಗ್ರಾಹಕರಿಗೆ ಏರ್‌ಟೆಲ್ ಕೆಲವು ಆಫರ್ ಘೋಷಿಸಿದೆ. ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ.
ಪೊಕೊ C71 ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಯುನಿಸಾಕ್ T7250 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಈ ಫೋನ್ 6.88 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಹಾಗೆಯೇ 5,200mAh ಬ್ಯಾಟರಿ, 15W ವೇಗದ ಚಾರ್ಜಿಂಗ್, IP52 ರೇಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದರ ಬೆಲೆ 10,000 ರೂ.ಗಿಂತ ಕಡಿಮೆ ಇದೆ. ಈ ಮೊಬೈಲ್ ಮೂರು ಬಣ್ಣಗಳಲ್ಲಿ ಬರುತ್ತದೆ. ನೀವು ಡೆಸರ್ಟ್ ಗೋಲ್ಡ್, ಕೂಲ್ ಬ್ಲೂ ಮತ್ತು ಪವರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದು.

ಪೊಕೊ C71 ವೈಶಿಷ್ಟ್ಯಗಳು
ಪೊಕೊ C71 ಮೊಬೈಲ್ 6.88 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 1,640 × 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರ, ವಾಟರ್‌ಡ್ರಾಪ್ ನಾಚ್, 240Hz ಟಚ್ ಸ್ಯಾಂಪ್ಲಿಂಗ್ ದರ, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು ವೆಟ್ ಹ್ಯಾಂಡ್ ಟಚ್ ಬೆಂಬಲದೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್ ಯುನಿಸಾಕ್ T7250 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಶಕ್ತಿಯುತ ಕಾರ್ಯಕ್ಷಮತೆಯನ್ನು ಒದಗಿಸುತ್ತದೆ. ಈ ಪೊಕೊ ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದು ಎರಡು ವರ್ಷಗಳ ಆಂಡ್ರಾಯ್ಡ್ ಅಪ್‌ಗ್ರೇಡ್‌ಗಳು ಮತ್ತು ನಾಲ್ಕು ವರ್ಷಗಳ ಓಎಸ್ ನವೀಕರಣಗಳನ್ನು ಪಡೆಯುತ್ತದೆ .
ಪೊಕೊ C71 ಫೋನಿನಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಅಳವಡಿಸಲಾಗಿದೆ. ಈ ಮೊಬೈಲ್ 32 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾ ಸಹ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಪೊಕೊ ಫೋನ್ 4GB RAM ಮತ್ತು 6GB RAM ಹೊಂದಿದೆ. ಇದು 64GB ಮತ್ತು 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಇದಲ್ಲದೆ, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಪೊಕೊ C71 ಸ್ಮಾರ್ಟ್‌ಫೋನ್ 5,200mAh ಸಾಮರ್ಥ್ಯ ಬ್ಯಾಟರಿ ಹೊಂದಿದೆ. ಅಗ್ಗದ ಬಜೆಟ್ ವಿಭಾಗದಲ್ಲಿನ ಈವರೆಗಿನ ದೊಡ್ಡ ಬ್ಯಾಟರಿ ಇದಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಈ ಪೊಕೊ ಮೊಬೈಲ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಹಾಗೆಯೇ 3.5 ಎಂಎಂ ಆಡಿಯೊ ಜ್ಯಾಕ್, ಡ್ಯುಯಲ್ ಬ್ಯಾಂಡ್ ವೈ-ಫೈ ಸೇರಿದಂತೆ ಹಲವು ಕನೆಕ್ಟಿವಿಟಿ ಸೌಲಭ್ಯಗಳನ್ನು ಒಳಗೊಂಡಿದೆ.

ಪೊಕೊ ಬೆಲೆ ಮತ್ತು ಲಭ್ಯತೆ
ಪೊಕೊ C71 ಫೋನಿನ ಮೂಲ ರೂಪಾಂತರವು 4GB RAM + 64GB ಸ್ಟೋರೇಜ್ ಹೊಂದಿದೆ. ಇದರ ಬೆಲೆ 6,499 ರೂ. ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ 7,499 ರೂ.ಗೆ ಬಿಡುಗಡೆಯಾಗಿದೆ. ಈ ಹೊಸ ಪೊಕೊ ಮೊಬೈಲ್ ಏಪ್ರಿಲ್ 8 ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಶುರು ಮಾಡಲಿದೆ.
ಪೊಕೊ ಕಂಪನಿಯು ಹೊಸ ಆಫರ್ ವಿವರಗಳನ್ನು ಬಹಿರಂಗಪಡಿಸಿದೆ. ಏರ್‌ಟೆಲ್ ಪ್ರಿಪೇಯ್ಡ್ ಬಳಕೆದಾರರ ಪೊಕೊ C71 ಹ್ಯಾಂಡ್‌ಸೆಟ್ ಅನ್ನು 5,999 ರೂ.ಗೆ ಖರೀದಿಸಬಹುದು. ಈ ಕುರಿತು ಏರ್‌ಟೆಲ್ ಕಂಪನಿ ಪ್ರಕಟಣೆ ಹೊರಡಿಸಿದೆ. ಏರ್‌ಟೆಲ್ ಬಳಕೆದಾರರಿಗಾಗಿ ಈ ವಿಶೇಷ ಮಾರಾಟವು ಏಪ್ರಿಲ್ 10 ರಂದು ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗಲಿದೆ. ಏರ್‌ಟೆಲ್ ಮಾರಾಟದ ಭಾಗವಾಗಿ, 50GB ಡೇಟಾವನ್ನು ಸಹ ಪಡೆಯಬಹುದು.


Click it and Unblock the Notifications








