ಬರ್ತಿದೆ POCO C75 5G ಫೋನ್; 50MP ಕ್ಯಾಮೆರಾ.. 5160mAh ಬ್ಯಾಟರಿ.. ಅಗ್ಗದ ಬೆಲೆ!
ಪೊಕೊ ಹೊಸ ಫೋನ್ ಬಿಡುಗಡೆಗೆ ತಯಾರಿ ನಡೆಸುತ್ತಿದೆ. ಇದು ಪೊಕೋ C75 5G (POCO C75 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಹೌದು, ಕಂಪನಿಯು ಈಗಾಗಲೇ, POCO C75 4G ಫೋನನ್ನು ಕಳೆದ ತಿಂಗಳು ಬಿಡುಗಡೆ ಮಾಡಿದೆ. ಇದೀಗ, ಪೊಕೋ C75 5G ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದು Redmi A4 5G ಫೋನಿನ ರೀಬ್ರಾಂಡೆಡ್ ಆಗಿರಲಿದೆ. ಈ ಮೊಬೈಲ್ ಕಡಿಮೆ ಬೆಲೆಯನ್ನು ಹೊಂದಿರಲಿದೆ. ಬನ್ನಿ, ಮುಂಬರುವ ಈ ಫೋನಿನ ಮತ್ತಷ್ಟು ವಿವರಗಳನ್ನು ತಿಳಿಯೋಣ.
ಕಂಪನಿಯು ತನ್ನ 'C' ಸರಣಿಯಲ್ಲಿ ಪೊಕೋ C75 5G ಮೊಬೈಲ್ ಬಿಡುಗಡೆ ಮಾಡಲಿದೆ. ಈಗಾಗಲೇ, ಮುಂಬರುವ ಫೋನನ್ನು ಹಲವು ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಇದು ಮಾಡೆಲ್ ಸಂಖ್ಯೆ 24116PCC1I ನೊಂದಿಗೆ ಕಾಣಿಸಿಕೊಂಡಿದೆ. ಇತ್ತೀಚೆಗೆ Redmi A4 5G ಫೋನ್ ಭಾರತದಲ್ಲಿ 8,499 ರೂ.ಗೆ ಬಿಡುಗಡೆಯಾಗಿದೆ. ಮುಂಬರುವ ಪೊಕೊ C75 5G ಸಹ ಅಗ್ಗದ ಬೆಲೆಯನ್ನು ಹೊಂದಿರುತ್ತದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ, 6.88 ಇಂಚಿನ ಡಿಸ್ಪ್ಲೇ, 5160mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ಪೊಕೊ C75 ಫೋನಿನ ಬೆಲೆ ಎಷ್ಟು?
ಕಂಪನಿಯು ಪೊಕೋ C75 ಫೋನನ್ನು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಫೋನಿನ 6GB + 128GB ಸ್ಟೋರೇಜ್ ಬೆಲೆ 9,160 ರೂ. ಆಗಿದೆ. 8GB + 256GB ಸ್ಟೋರೇಜ್ ರೂಪಾಂತರದ ಬೆಲೆ 10,845 ಇದೆ. ಈ ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಕಪ್ಪು, ಗೋಲ್ಡ್ (ಚಿನ್ನ) ಮತ್ತು ಹಸಿರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಕಂಪನಿಯು ಪೊಕೋ C75 5G ಮೊಬೈಲ್ ಅನ್ನು ಇದಕ್ಕಿಂತ ಕಡಿಮೆ ಬೆಲೆಗೆ ಭಾರತದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಪೊಕೋ C75 5G ಫೋನಿನ ವೈಶಿಷ್ಟ್ಯಗಳು (ನಿರೀಕ್ಷಿತ)
ಡಿಸ್ಪ್ಲೇ ವಿವರ
ಪೊಕೋ C75 5G ಭಾರತದಲ್ಲಿ Redmi A4 5G ಮೊಬೈಲ್‌ನ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಮುಂಬರುವ ಈ ಮೊಬೈಲ್ 6.88 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿರಲಿದೆ. ಇದು 1640 X 720 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲ ಹೊಂದಿರಲಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಪೊಕೋ C75 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್ಡ್ರಾಗನ್ 4S ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಮೊಬೈಲ್ ಆಂಡ್ರಾಯ್ಡ್ ಆಧಾರಿತ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡಲಿದೆ.
ಸ್ಟೋರೇಜ್ ಆಯ್ಕೆ
ಪೊಕೋ C75 5G ಸ್ಮಾರ್ಟ್‌ಫೋನ್ 4GB RAM ಹೊಂದಿರಲಿದೆ. ಫೋನಿನಲ್ಲಿ 64GB ಮತ್ತು 128GB ಸ್ಟೋರೇಜ್ ಲಭ್ಯವಿರುತ್ತದೆ. ನೀವು, 4GB ವರ್ಚುವಲ್ RAM ಮತ್ತು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಕ್ಯಾಮೆರಾ ಸೆಟಪ್
ಮುಂಬರುವ ಪೊಕೋ C75 5G ಫೋನ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿರಲಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಪೊಕೋ C75 5G ಮೊಬೈಲ್ ಅನ್ನು 5160mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.


Click it and Unblock the Notifications








