ಪೊಕೊ F2 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಲೀಕ್!

|

ಕೊರೊನಾ ವೈರಸ್‌ ಹಾವಳಿಯಿಂದಾಗಿ ಮೊಬೈಲ್ ವಹಿವಾಟುಗಳ ಚಟುವಟಿಕೆಗಳನ್ನು ನಿಲ್ಲಿಸಲಾಗಿತ್ತು. ಆದ್ರೆ ಇದೀಗ ಮೊಬೈಲ್ ಸಂಸ್ಥೆಗಳು ತಮ್ಮ ಮುಂಬರುವ ಹೊಸ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಆ ಪೈಕಿ ಜನಪ್ರಿಯ ಶಿಯೋಮಿ ಕಂಪನಿಯಿಂದ ಇತ್ತೀಚಿಗೆ ಸ್ವತಂತ್ರವಾಗಿ ಗುರುತಿಸಿಕೊಂಡಿರುವ ಪೊಕೊ ಹೊಸದಾಗಿ ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಸೂಚನೆ ಇದೀಗ ಬಹಿರಂಗವಾಗಿದೆ.

ಪೊಕೊ F2 ಪ್ರೊ

ಹೌದು, ಪೊಕೊ ಸಂಸ್ಥೆಯು ಹೊಸದಾಗಿ ಪೊಕೊ F2 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಿದ್ದು, ಇದೇ ಮೇ 12 ಸ್ಪೇನ್‌ನಲ್ಲಿ ಈ ಫೋನ್ ಲಾಂಚ್ ಆಗಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದುಬಂದಿದೆ. ಹಾಗೆಯೇ ಈ ಫೋನ್ ಪೊಕೊ ಸಂಸ್ಥೆಯ ಅತ್ಯಂತ ದುಬಾರಿ ಸ್ಮಾರ್ಟ್‌ಫೋನ್ ಆಗಿ ಗುರುತಿಸಿಕೊಳ್ಳಲಿದೆ ಎನ್ನಲಾಗಿದ್ದು, ಪೊಕೊ F2 ಪ್ರೊ ಫೋನಿನ ಫೀಚರ್ಸ್‌ಗಳು ಸಹ ಲೀಕ್ ಆಗಿದೆ. ಲೀಕ್ ಮಾಹಿತಿ ಪ್ರಕಾರ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿರಲಿದ್ದು, ಸ್ಕ್ರೀನ್‌ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 395ppi ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಡಿಸ್‌ಪ್ಲೇಯು 120Hz ರೀಫ್ರೇಶಿಂಗ್ ರೇಟ್ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆಗಳಿವೆ ಹಾಗೆಯೇ ಗೊರಿಲ್ಲಾ ಗ್ಲಾಸ್ 5 ಸಹ ಪಡೆದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್‌ 10 ಓಎಸ್‌ ಬೆಂಬಲ ಪಡೆದುಕೊಂಡಿರಲಿದೆ. ಇದರೊಂದಿಗೆ 6GB + 128GB ಮತ್ತು 8GB RAM + 256GB ಸಾಮರ್ಥ್ಯ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡುವ ಸಾಧ್ಯತೆಗಳು ಇವೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಪಡೆದಿರುವ ನೀರಿಕ್ಷೆಗಳಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿರಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದ್ದು, ತೃತೀಯ ಕ್ಯಾಮೆರಾ 5ಎಂಪಿ ಸೆನ್ಸಾರ್ ಹೊಂದಿರಲಿದೆ. ಮತ್ತು ನಾಲ್ಕನೇ ಕ್ಯಾಮೆರಾವು 2ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದೆ. ಇನ್ನು ಮುಂಬದಿ 20ಎಂಪಿ ಸೆಲ್ಫಿ ಕ್ಯಾಮೆರಾ ನೀಡುವ ಸಾಧ್ಯತೆಗಳಿವೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ 4700 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒದಗಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒದಗಿಸುವ ಸಾಧ್ಯತೆಗಳಿ ಇವೆ. ಹಾಗೆಯೆ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಎನ್‌ಎಫ್‌ಸಿ, ಜಿಪಿಎಸ್‌, ಯುಎಸ್‌ಬಿ, ಬ್ಲೂಟೂತ್, ಆಯ್ಕೆಗಳು ಇರಲಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ 6GB + 128GB ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 6GB + 128GB ವೇರಿಯಂಟ್ ಬೆಲೆಯು €649 (ಭಾರತದಲ್ಲಿ 53,300ರೂ) ಮತ್ತು 8GB RAM + 256GB ವೇರಿಯಂಟ್ ಬೆಲೆಯು €749 (ಭಾರತದಲ್ಲಿ 61,530ರೂ). ಆಗಿರಲಿದೆ.

Most Read Articles
Best Mobiles in India

English summary
Poco F2 Pro will be priced at €649 (around Rs 53,300) for the 6GB + 128GB model.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X