ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ! ಅತ್ಯಾಕರ್ಷಕ ಫೀಚರ್ಸ್!
ಚೀನಾದ ಜನಪ್ರಿಯ ಶಿಯೋಮಿ ಕಂಪನಿಯಿಂದ ಇತ್ತೀಚಿಗೆ ಸ್ವತಂತ್ರವಾಗಿ ಗುರುತಿಸಿಕೊಂಡಿರುವ ಪೊಕೊ ಹೊಸದಾಗಿ ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಇನ್ನು ಪೊಕೊ F2 ಪ್ರೊ ಅನ್ನು ಹೊಸ ಫ್ಲ್ಯಾಗ್‌ಶಿಪ್ ಆಗಿ ಅಧಿಕೃತವಾಗಿ ಅನಾವರಣಗೊಳಿಸಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಕಳೆದ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಿದ್ದ ರೆಡ್ಮಿ K30 ಪ್ರೊ ನ ರಿ ಬ್ರಾಂಡೆಡ್ ಆವೃತ್ತಿಯಾಗಿದೆ. ಸದ್ಯ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡದುಕೊಂಡಿರುವ ಪೊಕೊ ಪೊಕೊF2 ಪ್ರೊ ಮೂಲಕ ಸಂಚಲನ ಸೃಷ್ಟಿಸುವ ನಿರೀಕ್ಷೆ ಇದೆ.

ಹೌದು, ಚೀನಾದ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಲ್ಲಿ ಒಂದಾಗಿರುವ ಪೊಕೊ ತನ್ನ f2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಾಪ್-ಅಪ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ ಮತ್ತು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಅಲ್ಲದೆ ಪೊಕೊ F2 ಪ್ರೊ ಟಾಪ್-ಆಫ್-ಲೈನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ನಲ್ಲಿ ಗ್ರೇಡಿಯಂಟ್ ಬ್ಯಾಕ್ ಪ್ಯಾನಲ್ ಮತ್ತು ಲಿಕ್ವಿಡ್ ಕೂಲಿಂಗ್ ಟೆಕ್ನಾಲಜಿಯನ್ನ ಸಹ ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಇನ್ನು ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.67 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಡಿಸ್‌ಪ್ಲೇ ಆಗಿದ್ದು,HDR10 ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು 1,200 ನೀಟ್ಸ್ ಗರಿಷ್ಠ ಬ್ರೈಟ್‌ನೆಶ್ ಅನ್ನು ನೀಡಲಿದ್ದು, 20:9 ರಚನೆಯ ಅನುಪಾತವನ್ನ ಒಳಗೊಂಡಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೊರೇಜ್‌ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ.

ಕ್ಯಾಮೆರಾ ಮಾದರಿ
ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 686 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಟೆಲಿಮ್ಯಾಕ್ರೋ ಸೆನ್ಸಾರ್, ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸ್ನ್ಯಾಪರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಫೋನ್‌ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಮೋಡ್ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.1, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ F2 ಪ್ರೊ ಸ್ಮಾರ್ಟ್‌ಫೋನ್ 6GB RAM +128GB ಶೇಖರಣಾ ರೂಪಾಂತರ ಆಯ್ಕೆಯ ಸ್ಮಾರ್ಟ್‌ಫೋನ್ ಬೆಲೆ ಯುರೋ 499 (ಸರಿಸುಮಾರು ರೂ. 41,500) ಎಂದು ನಿಗದಿಪಡಿಸಲಾಗಿದೆ, ಹಾಗೂ 8GB RAM + 256GB ಶೇಖರಣಾ ಆಯ್ಕೆಯು ಯುರೋ 599 (ಸರಿಸುಮಾರು 50,000 ರೂ.) ಬೆಲೆಯನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಬರ್ ಗ್ರೇ, ಎಲೆಕ್ಟ್ರಿಕ್ ಪರ್ಪಲ್, ನಿಯಾನ್ ಬ್ಲೂ, ಫ್ಯಾಂಟಮ್ ವೈಟ್. ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications