ಸದ್ಯದಲ್ಲೇ ಬಿಡುಗಡೆ ಆಗಲಿದೆ ಪೊಕೊ F3 GT 5G ಫೋನ್: ವೇಗದ ಪ್ರೊಸೆಸರ್!

|

ಜನಪ್ರಿಯ ಪೊಕೊ ಕಂಪನಿಯು ಈಗಾಗಲೇ ಬಿಡುಗಡೆ ಮಾಡಿದ ಹಲವು ಸ್ಮಾರ್ಟ್‌ಫೋನ್ ಸರಣಿ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯು F ಸರಣಿಯಲ್ಲಿ ಬಿಡುಗಡೆ ಮಾಡಿರುವ ಕೆಲವು ಮಾಡೆಲ್‌ಗಳು ಹೆಚ್ಚು ಸದ್ದು ಮಾಡಿವೆ. ಇದೀಗ ಕಂಪನಿಯು ಅದರ ಮುಂದುವರಿದ ಭಾಗವಾಗಿ ಪೊಕೊ F3 GT 5G ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣ ಮಾಡಲು ತಯಾರಿ ನಡೆಸಿದೆ.

ಪೊಕೊ

ಹೌದು, ಪೊಕೊ ಸಂಸ್ಥೆಯು ಹೊಸದಾಗಿ ಪೊಕೊ F3 GT 5G ಸ್ಮಾರ್ಟ್‌ಫೋನ್ ಪರಿಚಯಿಸಲು ಸಜ್ಜಾಗಿದೆ. ಸಂಸ್ಥೆಯು ಅತೀ ಶೀಘ್ರದಲ್ಲೇ ಪೊಕೊ F3 GT 5G ಫೋನ್‌ ಅನ್ನು ಅಧಿಕೃತವಾಗಿ ಲಾಂಚ್ ಮಾಡಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲೀಕ್ ಫೀಚರ್ಸ್‌ಗಳು ಫೋನ್ ಬಗ್ಗೆ ಗ್ರಾಹಕರಲ್ಲಿ ಕುತೂಹನ ಮೂಡಿಸಿವೆ. ಲೀಕ್ ಮಾಹಿತಿಯಂತೆ ಪೊಕೊ F3 GT 5G ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಹಾಗೂ ಬೆಲೆ ಎಷ್ಟು ಎಂಬ ಮಾಹಿತಿಗಳನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ

ಡಿಸ್‌ಪ್ಲೇ ಮತ್ತು ರಚನೆ

ಪೊಕೊ F3 GT 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯು 120Hz ರೀಫ್ರೇಶ್‌ ರೇಟ್ ಹೊಂದಿರಲಿದೆ. HDR10+ ಸಪೋರ್ಟ್ ಪಡೆದಿರಲಿದೆ.

ಪ್ರೊಸೆಸರ್ ಸಾಮರ್ಥ್ಯವೆನು

ಪ್ರೊಸೆಸರ್ ಸಾಮರ್ಥ್ಯವೆನು

ಪೊಕೊ F3 GT 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್‌ 11 ಓಎಸ್‌, MIUI 12 ಬೆಂಬಲ ಪಡೆದುಕೊಂಡಿರಲಿದೆ. ಹಾಗೆಯೇ ಇದರಲ್ಲಿ ಅಡ್ರೆನೊ ಗ್ರಾಫಿಕ್ಸ್‌ ಪಡೆದಿದೆ. ಇದರೊಂದಿಗೆ 12GB RAM ಮತ್ತು 256GB ವೇರಿಯಂಟ್ ಆಯ್ಕೆ ಪಡೆದಿರುವ ನಿರೀಕ್ಷೆಗಳಿವೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸುವ ಅವಕಾಶ ನೀಡುವ ಸಾಧ್ಯತೆಗಳಿವೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಪೊಕೊ F3 GT 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಕ್ಯಾಮೆರಾ ಆಗಿರಲಿದೆ. ಸೆಕೆಂಡರಿ ಕ್ಯಾಮೆರಾವು ಅಲ್ಟ್ರಾ ವೈಲ್ಡ್‌ ಆಂಗಲ್‌ನ 8ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದ್ದು. ಹಾಗೆಯೇ ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿವೆ. ಇನ್ನು ಮುಂಬದಿ ಸೆಲ್ಫಿ ಕ್ಯಾಮೆರಾ 16 ಎಂಪಿ ಸೆನ್ಸಾರ್ ಹೊಂದಿರಲಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ಪೊಕೊ F3 GT 5G ಸ್ಮಾರ್ಟ್‌ಫೋನ್ 5,065mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರಲಿದೆ. ಇದರೊಂದಿಗೆ 67W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿರುವ ಸಾಧ್ಯತೆಗಳಿವೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಎನ್‌ಎಫ್‌ಸಿ, ಜಿಪಿಎಸ್‌, ಯುಎಸ್‌ಬಿ, ಬ್ಲೂಟೂತ್, ಆಯ್ಕೆಗಳು ಇರಲಿವೆ.

Most Read Articles
Best Mobiles in India

English summary
Poco F3 GT could be a rebranded Redmi K40 Gaming Edition. Here's what you need to know.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X