ಪೊಕೊ F3 GT ಸ್ಮಾರ್ಟ್‌ಫೋನ್‌ ಲಾಂಚ್!..5,065mAh ಬ್ಯಾಟರಿ ವಿಶೇಷ!

|

ಜನಪ್ರಿಯ ಪೊಕೊ ಮೊಬೈಲ್‌ ಬ್ರಾಂಡ್‌ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ಭಾರತದಲ್ಲಿ ಗೇಮಿಂಗ್‌ ಫೀಚರ್ಸ್‌ ಒಳಗೊಂಡಿರುವ ಪೊಕೊ F3 GT ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಪೊಕೊ F3 GT

ಹೌದು, ಪೊಕೊ ಕಂಪೆನಿ ಭಾರತದಲ್ಲಿ ಪೊಕೊ F3 GT ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು 6.67-ಇಂಚಿನ ಟರ್ಬೊ ಅಮೋಲೆಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 67W ಫಾಸ್ಟ್‌ ಚಾರ್ಜಿಂಗ್‌ ಬೆಂಬಲಿಸುವ 5,065mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ F3 GT ಸ್ಮಾರ್ಟ್‌ಫೋನ್‌ 6.67-ಇಂಚಿನ ಟರ್ಬೊ ಅಮೋಲೆಡ್ 10-ಬಿಟ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೆಚ್‌ಡಿಆರ್ 10+ ಬೆಂಬಲ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 480 ಹೆಚ್ ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. ಡಿಸಿ ಡಿಮ್ಮಿಂಗ್‌ಗೆ ಬೆಂಬಲಿಸಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ F3 GT ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ (119 ಡಿಗ್ರಿ ಫೀಲ್ಡ್-ಆಫ್-ವ್ಯೂ), ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಮುಖ್ಯ ಸೆನ್ಸಾರ್‌ ಅನ್ನು ಇಡಿ (ಹೆಚ್ಚುವರಿ-ಕಡಿಮೆ ಪ್ರಸರಣ) ಗಾಜಿನಿಂದ ತಯಾರಿಸಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಡಿಎಸ್‌ಎಲ್‌ಆರ್ ಮಸೂರಗಳಲ್ಲಿ ಚಿತ್ರಗಳ ಉತ್ತಮ ಸ್ಪಷ್ಟತೆಗಾಗಿ ಬಳಸಲಾಗುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ F3 GT ಸ್ಮಾರ್ಟ್‌ಫೋನ್‌ 5,065mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕೇವಲ 15 ನಿಮಿಷಗಳಲ್ಲಿ ಫೋನ್ ಅರ್ಧದಾರಿಯಲ್ಲೇ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಇದು ಐಪಿ 53 ರೇಟ್ ಆಗಿದೆ ಮತ್ತು ಗೇಮಿಂಗ್ ಮಾಡುವಾಗ ಉತ್ತಮ ಧ್ವನಿ ಗುಣಮಟ್ಟಕ್ಕಾಗಿ ಮೂರು ಮೈಕ್ರೊಫೋನ್ಗಳನ್ನು ಸಂಯೋಜಿಸುತ್ತದೆ. ಇದು ವೈ-ಫೈ ಗೇಮಿಂಗ್ ಆಂಟೆನಾ, ನಿಖರವಾದ ಹ್ಯಾಪ್ಟಿಕ್ ಪ್ರತಿಕ್ರಿಯೆ ಮತ್ತು ಕಂಪನದೊಂದಿಗೆ ಎಕ್ಸ್-ಶಾಕರ್ಸ್, ಜಿಟಿ ಸ್ವಿಚ್ ಮತ್ತು ಮ್ಯಾಗ್ಲೆವ್ ಪ್ರಚೋದಕಗಳನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ F3 GT ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GB ಸ್ಟೋರೇಜ್ ಆಯ್ಕೆಗೆ 26,999 ರೂ, ಹಾಗೂ 8GB RAM+ 128GB ಸ್ಟೋರೇಜ್ ಆಯ್ಕೆಗೆ 28,999,ರೂ ಬೆಲೆಯನ್ನು ಹೊಂದಿದೆ. ಇನ್ನು 8GB RAM + 256GB ಸಂಗ್ರಹದ ಬೆಲೆ 30,999 ರೂ. ಹೊಂದಿದೆ. ಇನ್ನು ಮಾರಾಟದ ಮೊದಲ ವಾರದಲ್ಲಿ, ಈ ಸ್ಮಾರ್ಟ್‌ಫೋನ್ ಕ್ರಮವಾಗಿ 25,999, ರೂ. 27,999, ಮತ್ತು ರೂ. 29,999 ರೂ. ಹಾಗೂ ಮಾರಾಟದ ಎರಡನೇ ವಾರದಲ್ಲಿ 26,499, ರೂ. 28,499, ಮತ್ತು 30,499ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಜುಲೈ 26 ರಂದು ಮಧ್ಯಾಹ್ನ 12 ಗಂಟೆಗೆ ಮಾರಾಟ ಪ್ರಾರಂಭವಾಗಲಿದೆ.

Best Mobiles in India

English summary
Poco F3 GT has an aerospace-grade aluminium alloy build and a slipstream design.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X