Just In
- 10 hrs ago
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- 15 hrs ago
ಈ ಯೋಜನೆಗಳನ್ನು ರೀಚಾರ್ಜ್ ಮಾಡಿದ್ರೆ, ನಿಮಗೆ ವ್ಯಾಲಿಡಿಟಿ ಬಗ್ಗೆ ಟೆನ್ಷನ್ ಇರಲ್ಲ!
- 19 hrs ago
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಬೇರೆಯವರ ಲಾಸ್ಟ್ ಸೀನ್ ನೋಡುವುದು ಹೇಗೆ?
Don't Miss
- Sports
ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
- Movies
ರಾಘವೇಂದ್ರ ರಾಜ್ಕುಮಾರ್ ನಿರ್ಮಾಣದಲ್ಲಿ 'ವಿಜಯದಶಮಿ' ಧಾರಾವಾಹಿ: ಯಾವ ಸಿನಿಮಾಗೂ ಕಮ್ಮಿಯಿಲ್ಲ!
- News
Breaking; ಕರ್ನಾಟಕದಲ್ಲಿ ಆತ್ಮ ನಿರ್ಭರ ಗೋಶಾಲೆ ಅಭಿವೃದ್ಧಿ
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಭಾರತದಲ್ಲಿ ಪೊಕೊ F4 5G ಸ್ಮಾರ್ಟ್ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿನ ಜನಪ್ರಿಯ ಬ್ರ್ಯಾಂಡ್ಗಳಲ್ಲಿ ಪೊಕೊ ಕಂಪೆನಿ ಕೂಡ ಸೇರಿದೆ. ಪೊಕೊ ಕಂಪೆನಿ ತನ್ನ ಆಕರ್ಷಕ ಹಾಗೂ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಸ್ಮಾರ್ಟ್ಫೋನ್ಗಳನ್ನು ಭಾರತದಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಪೊಕೊ F4 5G ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ಮಿಡ್ ರೇಂಜ್ ಪ್ರೈಸ್ಟ್ಯಾಗ್ ಅನ್ನು ಹೊಂದಿದೆ.

ಹೌದು, ಪೊಕೊ ಕಂಪೆನಿ ಹೊಸ ಪೊಕೊ F4 5G ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ 6.67 ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ HDR10 ಪ್ಲಸ್ ಹಾಗೂ ನೆಟ್ಫ್ಲಿಕ್ಸ್ನಲ್ಲಿ ಡಾಲ್ಬಿ ವಿಷನ್ ಅನ್ನು ಬೆಂಬಲಿಸಲಿದೆ. ಅಲ್ಲದೆ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ಡಾಲ್ಬಿ ಅಟ್ಮೋಸ್ ಮತ್ತು ಡಾಲ್ಬಿ ವಿಷನ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಪೊಕೊ F4 5G ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು 6GB RAM + 128GB ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ F4 5G ಸ್ಮಾರ್ಟ್ಫೋನ್ 6.67 ಇಂಚಿನ ಫುಲ್ HD+ E4 ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಡಿಸ್ಪ್ಲೇ DCI-P3 ಬಣ್ಣದ ಹರವು ಸಹ ಒಳಗೊಂಡಿದ್ದು, 120Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಅಮೇಜಾನ್ ಪ್ರೈಮ್ ವೀಡಿಯೊದಲ್ಲಿ HDR10+ , ನೆಟ್ಫ್ಲಿಕ್ಸ್ ನಲ್ಲಿ ಡಾಲ್ಬಿ ವಿಷನ್ ಬೆಂಬಲವನ್ನು ಹೊಂದಿದೆ. ಹೆಚ್ಚುವರಿಯಾಗಿ, ಈ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಪೊಕೊ F4 5G ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಮಾಲಿ-G610 MC6 GPU ಸಪೋರ್ಟ್ ಅನ್ನು ಪಡೆದಿದೆ. ಅಲ್ಲದೆ ಫೋರ್ ಕಾರ್ಟೆಕ್ಸ್-A78 ಕೋರ್ಗಳನ್ನು ಒಳಗೊಂಡಿದೆ. ಹಾಗೆಯೇ 6GB RAM + 128GB ಮತ್ತು 8GB + 128GB ಹಾಗೂ 12GB + 256GB ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ.

ಕ್ಯಾಮೆರಾ ಹೇಗಿದೆ?
ಪೊಕೊ F4 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ f/1.8 ಲೆನ್ಸ್ನೊಂದಿಗೆ ಬರುತ್ತದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ನಲ್ಲಿರುವ ಕ್ಯಾಮೆರಾಗಳು ನೈಟ್ ಮೋಡ್, AI ಸ್ಕೈಸ್ಕೇಪಿಂಗ್ 4.0 ಮತ್ತು AI ಎರೇಸ್ 2.0 ನಂತಹ ಫೀಚರ್ಸ್ಗಳನ್ನು ಒಳಗೊಂಡಿವೆ. ಜೊತೆಗೆ ಎಲ್ಇಡಿ ಫ್ಲ್ಯಾಷ್, ಹೆಚ್ಡಿಆರ್, ಪನೋರಮಾ ಫೀಚರ್ಸ್ ಕೂಡ ಸೇರಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ F4 5G ಸ್ಮಾರ್ಟ್ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಕೇವಲ 38 ನಿಮಿಷಗಳಲ್ಲಿ 0% to 100% ಚಾರ್ಜ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್ ಸೆನ್ಸಾರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಅನ್ನು ಒಳಗೊಂಡಿವೆ. ಜೊತೆಗೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಅನ್ನು ಕೂಡ ಹೊಂದಿದೆ. ಇನ್ನು ಈ ಫೋನ್ ಸ್ಟಿರಿಯೊ ಸ್ಪೀಕರ್ಗಳೊಂದಿಗೆ ಬರುತ್ತದೆ. ಇದು ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೊ ಬೆಂಬಲವನ್ನು ಹೊಂದಿದೆ. ಸೌಂಡ್ ಕ್ಯಾನ್ಸಲೇಶನ್ಗಾಗಿ ಎರಡು ಮೈಕ್ರೊಫೋನ್ಗಳನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪೊಕೊ F4 5G ಸ್ಮಾರ್ಟ್ಫೋನ್ ಬೇಸ್ ಮಾಡೆಲ್ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 27,999ರೂ. ಆಗಿದೆ. ಇನ್ನು 8GB + 128GB ಮಾದರಿಯ ಆಯ್ಕೆಯ ಬೆಲೆ 29,999ರೂ. ಹೊಂದಿದೆ. ಇದಲ್ಲದೆ ಇದರ ಟಾಪ್-ಆಫ್-ಲೈನ್ 12GB + 256GB ಆಯ್ಕೆಯ ಬೆಲೆ 33,999ರೂ.ಆಗಿದೆ. ಈ ಸ್ಮಾರ್ಟ್ಫೋನ್ ನೆಬ್ಯುಲಾ ಗ್ರೀನ್ ಮತ್ತು ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್ಫೋನ್ ಇದೇ ಜೂನ್ 27 ರಿಂದ ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ.

ಲಾಂಚ್ ಆಫರ್ ಏನಿದೆ?
ಈ ಸ್ಮಾರ್ಟ್ಫೋನಿನ ಲಾಂಚ್ ಆಫರ್ನಲ್ಲಿ ನೀವು 1,000ರೂ.ವರೆಗಿನ ರಿಯಾಯಿತಿ ಪಡೆದುಕೊಳ್ಳಬಹುದು. ಅಲ್ಲದೆ ಹೆಚ್ಚುವರಿಯಾಗಿ ಎಸ್ಬಿಐ ಬ್ಯಾಂಕ್ ಕಾರ್ಡ್ ಹೊಂದಿರುವ ಗ್ರಾಹಕರು 3,000ರೂ.ಗಳ ವರೆಗಿನ ರಿಯಾಯಿತಿಯನ್ನು ಪಡದುಕೊಳ್ಳಬಹುದಾಗಿದೆ. ಇದಲ್ಲದೆ ಪೊಕೊ ಕಂಪೆನಿ ಭಾರತದಲ್ಲಿ ಪೊಕೊ F4 5G ಸ್ಮಾರ್ಟ್ಫೋನಿನ ಮೇಲೆ ಎರಡು ವರ್ಷಗಳ ವಾರಂಟಿ ನೀಡುವ ಭರವಸೆ ನೀಡಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999