ಜಾಗತಿಕ ಮಾರುಕಟ್ಟೆಯಲ್ಲಿ ಪೊಕೊ F4 GT ಸ್ಮಾರ್ಟ್‌ಫೋನ್ ಬಿಡುಗಡೆ!
ಪೊಕೊ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಪೊಕೊ F4 GT ಸ್ಮಾರ್ಟ್‌ಫೋನ್ ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಪೊಕೊ ಕಂಪೆನಿ ಹೊಸ ಪೊಕೊ F4 GT ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64-ಮೆಗಾಪಿಕ್ಸೆಲ್ Sony IMX686 ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ F4 GT ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ. ಈ ಡಿಸ್‌ಪ್ಲೇ 480Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಪೊಕೊ F4 GT ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಸಾಮರ್ಥ್ಯದ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ
ಪೊಕೊ F4 GT ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ F4 GT ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/A-GPS, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಬ್ಯಾರೋಮೀಟರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ F4 GT ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಯ ಬೆಲೆ EUR 599 (ಸುಮಾರು 49,000ರೂ)ಗೆ ನಿಗದಿಪಡಿಸಲಾಗಿದೆ. ಇನ್ನು 12GB + 256GB ರೂಪಾಂತರದ ಬೆಲೆ EUR 699 (ಸುಮಾರು 57,100ರೂ) ಹೊಂದಿದೆ. ಈ ಸ್ಮಾರ್ಟ್‌ಫೋನ್ ಸೈಬರ್ ಹಳದಿ, ನೈಟ್ ಸಿಲ್ವರ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಫೋನ್ ಏಪ್ರಿಲ್ 28ರಿಂದ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








