256 GB ಆಯ್ಕೆಯ ಈ ಮಿಡ್‌ರೇಂಜ್ ಫೋನ್ ಬೆಲೆ ಇಳಿಕೆ! 64MP ಮುಖ್ಯ ಕ್ಯಾಮೆರಾ..
ಸ್ಮಾರ್ಟ್‌ಫೋನ್‌ಗಳಲ್ಲಿ ಪೊಕೊ ಫೋನ್‌ಗಳು (Poco phone) ಸಹ ಹೆಚ್ಚಿನ ಫೀಚರ್ಸ್‌ನೊಂದಿಗೆ ಇತರೆ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಉತ್ತಮ ರೀತಿಯಲ್ಲಿ ಸ್ಪರ್ಧೆ ನೀಡುತ್ತಿವೆ. ಅದರಲ್ಲೂ ಪೊಕೊದ ಮಿಡ್‌ರೇಂಜ್ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದ್ದು, ಈ ವಿಭಾಗದಲ್ಲಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿರುವ ಫೋನ್‌ಗೆ ಆಫರ್ ನೀಡಲಾಗಿದೆ.
ಹೌದು, ಪೊಕೊ F5 5G ಸ್ಮಾರ್ಟ್‌ಫೋನ್‌ಗೆ (Poco F5 5G smartphone) ಬೆಲೆಯಲ್ಲಿ ಇಳಿಕೆ ಆಗಿದೆ. ಈ ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ ಜನ್ 2 (4nm) ಪ್ರೊಸೆಸರ್ ಬಲದೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಪೊಕೊ F5 5G ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಫೋನ್ 34,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 29,999 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಈ ಫೋನ್‌ಗೆ 14% ರಿಯಾಯಿತಿ ನೀಡಲಾಗಿದ್ದು, ಈ ಮೂಲಕ 5000 ರೂ.ವರೆಗೆ ಹಣ ಉಳಿತಾಯ ಮಾಡಬಹುದಾಗಿದೆ.
ಅದಾಗ್ಯೂ ನೀವು ಬ್ಯಾಂಕ್ ಆಫರ್ ಮೂಲಕ ಇನ್ನೂ ಕಡಿಮೆ ಬೆಲೆಯಲ್ಲಿ ಈ ಫೋನ್ ಖರೀದಿ ಮಾಡಬಹುದಾಗಿದೆ. ಅಂದರೆ ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಐಡಿಎಫ್‌ಸಿ ಮೊದಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, 12,500 ರೂ. ಮತ್ತು ಅದಕ್ಕಿಂತ ಹೆಚ್ಚಿನ ಆರ್ಡರ್‌ಗಳ ಮೇಲೆ ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ 750 ರೂ.ಗಳ ರಿಯಾಯಿತಿ ಪಡೆಯಬಹುದಾಗಿದೆ.

ಪೊಕೊ F5 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಉತ್ತಮ ವೀಕ್ಷಣೆ ಅನುಭವ ನೀಡಲಿದೆ. ಇದರೊಂದಿಗೆ 120 Hz ರಿಫ್ರೆಶ್ ರೇಟ್ ಆಯ್ಕೆ, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ, ಹೆಚ್‌ಡಿಆರ್ 10+, 68 ಬಿಲಿಯನ್+ ಬಣ್ಣದ ಬೆಂಬಲ ಈ ಡಿಸ್‌ಪ್ಲೇನಲ್ಲಿದೆ.
ಪೊಕೊ F5 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ ಜನ್ 2 (4nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದೆ. ಇದರೊಂದಿಗೆ 256 GB ಇಂಟರ್ ಸ್ಟೋರೇಜ್ ಹಾಗೂ 8 GB RAM ಹೊಂದುವ ಮೂಲಕ ಯಾವುದೇ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಅನುಕೂಲ ಆಗಿದೆ. ಇದರೊಂದಿಗೆ ಹೈಬ್ರಿಡ್ ಸ್ಲಾಟ್ ಆಯ್ಕೆ ಸಹ ಇದೆ.

ಪೊಕೊ F5 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್ ಹಾಗೂ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಆಯ್ಕೆ ಪಡೆದುಕೊಂಡಿದೆ. ಈ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಬೆಂಬಲಿಸಲಿವೆ. ಅಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.
ಪೊಕೊ F5 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 67W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಜೊತೆಗೆ ವೈ-ಫೈ 802.11 a/b/g/n/ac/6, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.3, A2DP, LE, ಯುಎಸ್‌ಬಿ ಟೈಪ್-ಸಿ 2.0, OTG ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಉಳಿದಂತೆ ಈ ಫೋನ್ ಫಿಂಗರ್‌ಪ್ರಿಂಟ್ (ಸೈಡ್-ಮೌಂಟೆಡ್), ಅಕ್ಸೆಲೆರೊಮೀಟರ್, ಗೈರೊ ಸೌಲಭ್ಯ ಪಡೆದಿದೆ.


Click it and Unblock the Notifications








