Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ಪೊಕೊ F5 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿದೆ? ಬೆಲೆ ಎಷ್ಟು?

ಪೊಕೊ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ ಪೊಕೊ F5 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ ಅನ್ನು ಹೊಂದಿದೆ.

ಹೌದು, ಪೊಕೊ F5 5G ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ 120Hz ಅಟಾಪ್ಟಿವ್‌ ರಿಫ್ರೆಶ್‌ ರೇಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು 67W ಟರ್ಬೋಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಎಂಟ್ರಿ ಕೊಟ್ಟ ಪೊಕೊ F5 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿದೆ?

ಪೊಕೊ F5 5G ಡಿಸ್‌ಪ್ಲೇ ರಚನೆ ಹೇಗಿದೆ?

ಪೊಕೊ F5 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 120Hz ವರೆಗೆ ಅಡಾಪ್ಟಿವ್ ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪೊಕೊ F5 5G ಪ್ರೊಸೆಸರ್‌ ಹೇಗಿದೆ?

ಪೊಕೊ F5 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಬಳಕೆಯಾಗದ 7GB ಸ್ಟೋರೇಜ್‌ನೊಂದಿಗೆ ಆನ್‌ಬೋರ್ಡ್ ಮೆಮೊರಿಯನ್ನು 19GB ವರೆಗೆ ವಿಸ್ತರಿಸಬಹುದು.

ಭಾರತಕ್ಕೆ ಎಂಟ್ರಿ ಕೊಟ್ಟ ಪೊಕೊ F5 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿದೆ?

ಪೊಕೊ F5 5G ಕ್ಯಾಮೆರಾ ಸೆಟ್‌ಅಪ್‌

ಪೊಕೊ F5 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಪೊಕೊ F5 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಪೊಕೊ F5 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಟರ್ಬೋಚಾರ್ಜಿಂಗ್‌ ಅನ್ನು ಬೆಂಬಲಿಸಲಿದ್ದು, ಕೇವಲ 45 ನಿಮಿಷಗಳಲ್ಲಿ ಬ್ಯಾಟರಿಯನ್ನು 0 ದಿಂದ 100% ಚಾರ್ಜ್‌ ಮಾಡಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3, ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಒಳಗೊಂಡಿದೆ.

ಭಾರತಕ್ಕೆ ಎಂಟ್ರಿ ಕೊಟ್ಟ ಪೊಕೊ F5 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿದೆ?

ಭಾರತದಲ್ಲಿ ಪೊಕೊ F5 5G ಬೆಲೆ ಮತ್ತು ಲಭ್ಯತೆ

ಪೊಕೊ F5 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 256GB ಸ್ಟೋರೇಜ್ ಆಯ್ಕೆಗೆ 29,999ರೂ. ಬೆಲೆಯನ್ನು ಒಳಗೊಂಡಿದೆ. ಇನ್ನು 12GB RAM + 256GB ಸ್ಟೋರೇಜ್ ಹೊಂದಿರುವ ಮಾದರಿಯ ಬೆಲೆ 33,999ರೂ. ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕಾರ್ಬನ್ ಬ್ಲಾಕ್, ಎಲೆಕ್ಟ್ರಿಕ್ ಬ್ಲೂ ಮತ್ತು ಸ್ನೋಸ್ಟಾರ್ಮ್ ವೈಟ್ ಶ್ಯಾಡೋ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದೇ ಮೇ 16 ರಂದು ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ.

Best Mobiles in India

English summary
Poco F5 5G With 67W Turbocharging Launched in India: Price and Specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+