Home
ಸುದ್ದಿಜಾಲ

ಪೊಕೊ F5 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಏನೆಲ್ಲಾ ನಿರೀಕ್ಷೆ?

ಪೊಕೊ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಪ್ರಸಿದ್ಧಿ ಪಡೆದುಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ತನ್ನದೇ ಆದ ಗ್ರಾಹಕ ವರ್ಗವನ್ನು ಹೊಂದಿದೆ. ಇದೀಗ ತನ್ನ ಹೊಸ ಪೊಕೊ F5 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮೇ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಣೆ ಮಾಡಿದೆ.

ಹೌದು, ಪೊಕೊ F5 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಬಿಡುಗಡೆಯಾಗಿದ್ದ ಪೊಕೊ F4 ನ ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಘೋಷಣೆಯಾಗ್ತಿದ್ದ ಹಾಗೇ ಇದರ ಫೀಚರ್ಸ್‌ ವಿವರ ಕೂಡ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಹೊಂದಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ F5 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಏನೆಲ್ಲಾ ನಿರೀಕ್ಷೆ?

ಪೊಕೊ F5 ಲಾಂಚ್‌ ಯಾವಾಗ?

ಪೊಕೊ F5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಮೇ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ. ತನ್ನ ಟ್ವಿಟರ್‌ ಪೇಜ್‌ನಲ್ಲಿ ಪೊಕೊ ಕಂಪೆನಿ ಈ ವಿಚಾರವನ್ನು ಅಧಿಕೃತಗೊಳಿಸದೆ. ಇನ್ನು ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಪೊಕೊ F5 ಫೀಚರ್ಸ್‌ ನಿರೀಕ್ಷೆ ಏನು?

ಪೊಕೊ F5 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಪ್ರೊಟೆಕ್ಷನ್‌ ಪಡೆದಿರಲಿದೆ ಎಂದು ವರದಿಯಾಗಿದೆ.

ಪೊಕೊ F5 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಏನೆಲ್ಲಾ ನಿರೀಕ್ಷೆ?

ಪೊಕೊ F5 ಪ್ರೊಸೆಸರ್‌ ಯಾವುದು?

ಪೊಕೊ F5 ಸ್ನಾಪ್‌ಡ್ರಾಗನ್ 7 Gen 2 SoC ಪ್ರೊಸೆಸರ್‌ ಹೊಂದಿರುವ ದೇಶದ ಮೊದಲ ಫೋನ್‌ ಎನಿಸಿಕೊಂಡಿದೆ. ಇದು ಆಂಡ್ರಾಯ್ಡ್ 13-ಆಧಾರಿತ MIUI 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಗಳಲ್ಲಿ ಬರಲಿದೆ.

ಪೊಕೊ F5 ಕ್ಯಾಮೆರಾ ಸೆಟ್‌ಅಪ್‌

ಪೊಕೊ F5 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ F5 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಏನೆಲ್ಲಾ ನಿರೀಕ್ಷೆ?

ಪೊಕೊ F5 ಬ್ಯಾಟರಿ ಯಾವುದು?

ಪೊಕೊ F5 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದು 67W ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗುವ ಸಾದ್ಯತೆಯಿದೆ.

ಇನ್ನು ಪೊಕೊ ಕಂಪೆನಿ ಇತ್ತೀಚಿಗೆ ತನ್ನ ಸಿ ಸರಣಿಯಲ್ಲಿ ಹೊಸ ಪೊಕೊ C50 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸುವುದು ಪ್ರಮುಖ ಹೈಲೈಟ್‌ ಆಗಿದೆ. ಇನ್ನು ಫೋನ್‌ ಕೈಗೆಟಕುವ ಬೆಲೆಯನ್ನು ಹೊಂದಿದ್ದು, ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ.

Best Mobiles in India

English summary
POCO F5 Launch Date Announced in india: expected specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+