Home
ಸುದ್ದಿಜಾಲ

ಇಂದಿನಿಂದ ಪೊಕೊ F5 5G ಖರೀದಿಗೆ ಲಭ್ಯ!..ಏನಿದೆ ಆಫರ್‌!

ಪೊಕೊ ಮೊಬೈಲ್‌ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಪೊಕೊ F5 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ ಪಡೆದಿದೆ. ಈ ಫೋನ್‌ ಇಂದಿನಿಂದ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಮಾರಾಟ ಪ್ರಾರಂಭಿಸಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ.

ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ F5 5G ಸ್ಮಾರ್ಟ್‌ಫೋನ್‌ ಸೇಲ್‌ ಆರಂಭಿಸಿದ್ದು, ಖರೀದಿಗೆ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್‌ 120Hz ಅಟಾಪ್ಟಿವ್‌ ರಿಫ್ರೆಶ್‌ ರೇಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು 67W ಟರ್ಬೋಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಇಂದಿನಿಂದ ಪೊಕೊ F5 5G ಖರೀದಿಗೆ ಲಭ್ಯ!..ಏನಿದೆ ಆಫರ್‌!

ಪೊಕೊ F5 5G ಡಿಸ್‌ಪ್ಲೇ ರಚನೆ : ಪೊಕೊ F5 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 120Hz ವರೆಗೆ ಅಡಾಪ್ಟಿವ್ ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪೊಕೊ F5 5G ಪ್ರೊಸೆಸರ್‌ : ಪೊಕೊ F5 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಬಳಕೆಯಾಗದ 7GB ಸ್ಟೋರೇಜ್‌ನೊಂದಿಗೆ ಆನ್‌ಬೋರ್ಡ್ ಮೆಮೊರಿಯನ್ನು 19GB ವರೆಗೆ ವಿಸ್ತರಿಸಬಹುದು.

ಪೊಕೊ F5 5G ಕ್ಯಾಮೆರಾ ರಚನೆ : ಪೊಕೊ F5 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಪೊಕೊ F5 5G ಬ್ಯಾಟರಿ ಮತ್ತು ಇತರೆ : ಪೊಕೊ F5 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಟರ್ಬೋಚಾರ್ಜಿಂಗ್‌ ಅನ್ನು ಬೆಂಬಲಿಸಲಿದ್ದು, ಕೇವಲ 45 ನಿಮಿಷಗಳಲ್ಲಿ ಬ್ಯಾಟರಿಯನ್ನು 0 ದಿಂದ 100% ಚಾರ್ಜ್‌ ಮಾಡಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3, ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಒಳಗೊಂಡಿದೆ.

ಭಾರತದಲ್ಲಿ ಪೊಕೊ F5 5G ಮೆಮೊರಿ : ಪೊಕೊ F5 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 256GB ಸ್ಟೋರೇಜ್ ಹಾಗೂ 12GB RAM + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಸ್ಮಾರ್ಟ್‌ಫೋನ್‌ ಕಾರ್ಬನ್ ಬ್ಲಾಕ್, ಎಲೆಕ್ಟ್ರಿಕ್ ಬ್ಲೂ ಮತ್ತು ಸ್ನೋಸ್ಟಾರ್ಮ್ ವೈಟ್ ಶ್ಯಾಡೋ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
POCO F5 Sale in India Today: check price, specifications and offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+