Home
ಸುದ್ದಿಜಾಲ

ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ದೈತ್ಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಸದ್ಯ ಬಿಗ್‌ ಬಿಲಿಯನ್‌ ಡೇಸ್‌ 2024 (Flipkart Big Billion Days Sale 2024) ಸೇಲ್‌ ಆಯೋಜಿಸಿದ್ದು, ಈ ಸೇಲ್‌ನಲ್ಲಿ ಮೊಬೈಲ್‌ಗಳು ಅತ್ಯುತ್ತಮ ಕೊಡುಗೆಗಳನ್ನು ಘೋಷಿಸಿದೆ. ಇನ್ನು ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್‌ ಕೊಡುಗೆಗಳನ್ನು ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ F6 5G ಮೊಬೈಲ್‌ (POCO F6 5G) ಮೊಬೈಲ್ ಅನ್ನು ಗ್ರಾಹಕರು ಬಿಗ್‌ ಡಿಸ್ಕೌಂಟ್‌ ದರದಲ್ಲಿ ಖರೀದಿ ಮಾಡಬಹುದು.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಪೊಕೊ F6 5G ಮೊಬೈಲ್‌ (POCO F6 5G) ಮೊಬೈಲ್ ಶೇ. 29% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 23,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್‌ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಪೊಕೊ F6 5G ಮೊಬೈಲ್‌ 8GB + 256GB, 8GB + 256GB ಹಾಗೂ 12GB + 512GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿದೆ. ಹಾಗಾದರೇ ಪೊಕೊ F6 5G ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಪೊಕೊ F6 5G ಫೀಚರ್ಸ್‌ ಹೀಗಿವೆ

ಪೊಕೊ F6 5G ಮೊಬೈಲ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 2400 nits ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿದ್ದು, ಇದರ ಜೊತೆಗೆ 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಸಹ ಇದೆ. ಅಲ್ಲದೇ HRD+, ಡಾಲ್ಬಿ ವಿಷನ್‌ ಆಯ್ಕೆಗಳು ಇವೆ.

ಪೊಕೊ F6 5G ಮೊಬೈಲ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 OS ಸಪೋರ್ಟ್‌ ಸಹ ಇದೆ. ಇನ್ನು ಈ ಮೊಬೈಲ್‌ ಮೂರು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB + 256 GB, 8GB + 256 GB ಮತ್ತು 12GB + 512 GB ಸ್ಟೋರೇಜ್‌ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಯಲ್ಲಿ ಇವೆ.

ಪೊಕೊ F6 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. ಇನ್ನು ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಅಲ್ಟ್ರಾವೈಡ್ ಸೆನ್ಸರ್‌ ಅನ್ನು ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 20 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಪೊಕೊ F6 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 90W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ನೀಡಲಿದೆ. ಅಲ್ಲದೇ 120W ಫಾಸ್ಟ್‌ ಚಾರ್ಜಿಂಗ್ ಅಡಾಪ್ಟರ್ ಸೌಲಭ್ಯ ಇದ್ದು, 35 ನಿಮಿಷಗಳಲ್ಲಿ ಬ್ಯಾಟರಿ ಪೂರ್ಣ 100% ಚಾರ್ಜ್ ಮಾಡಲಿದೆ ಎನ್ನಲಾಗಿದೆ.

ಪೊಕೊ F6 5G ಮೊಬೈಲ್‌ 8GB + 256GB ವೇರಿಯಂಟ್‌, 8GB + 256GB ವೇರಿಯಂಟ್‌ ಹಾಗೂ 12GB + 512GB ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಅಲ್ಲದೇ ಟೈಟಾನಿಮ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
POCO F6 5G available at Attractive Price Drop on Flipkart India. check full details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+