Home
ಸುದ್ದಿಜಾಲ

ಇಂದು ಪೊಕೊ F6 5G ಫೋನ್‌ ಫಸ್ಟ್‌ ಸೇಲ್‌; ಭರ್ಜರಿ ಆಫರ್‌ ಲಭ್ಯ!

ಪೊಕೊ ಮೊಬೈಲ್‌ ಬ್ರ್ಯಾಂಡ್‌ ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಲಾಂಚ್ ಮಾಡಿರುವ ಪೊಕೊ F6 ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇಂದು (ಮೇ 29 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಮಾರಾಟ ಶುರು ಮಾಡಿದೆ.

ಹೌದು, ಪೊಕೊ ಕಂಪನಿಯ ಪೊಕೊ F6 ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಇಂದು ಮಧ್ಯಾಹ್ನ ಸೇಲ್‌ ಪ್ರಾರಂಭ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 8s ಜನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಹೊಂದಿದ್ದು, ಇದರೊಂದಿಗೆ 50 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ.

ಇಂದು ಪೊಕೊ F6 5G ಫೋನ್‌ ಫಸ್ಟ್‌ ಸೇಲ್‌; ಭರ್ಜರಿ ಆಫರ್‌ ಲಭ್ಯ!

ಇನ್ನು ಇದು 8GB + 256GB, 8GB + 256GB ಹಾಗೂ 12GB + 512GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ. ಇನ್ನುಳಿದಂತೆ ಪೊಕೊ F6 ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಪೊಕೊ F6 ಫೀಚರ್ಸ್‌ ಹೀಗಿವೆ

ಪೊಕೊ F6 ಫೋನ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 2400 nits ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿದ್ದು, ಇದರ ಜೊತೆಗೆ 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಸಹ ಇದೆ. ಅಲ್ಲದೇ HRD+, ಡಾಲ್ಬಿ ವಿಷನ್‌ ಆಯ್ಕೆಗಳು ಇವೆ.

ಪೊಕೊ F6 ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 OS ಸಪೋರ್ಟ್‌ ಸಹ ಇದೆ. ಇನ್ನು ಈ ಮೊಬೈಲ್‌ ಮೂರು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB + 256 GB, 8GB + 256 GB ಮತ್ತು 12GB + 512 GB ಸ್ಟೋರೇಜ್‌ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಯಲ್ಲಿ ಇವೆ.

ಪೊಕೊ F6 ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. ಇನ್ನು ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಅಲ್ಟ್ರಾವೈಡ್ ಸೆನ್ಸರ್‌ ಅನ್ನು ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 20 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಪೊಕೊ F6 ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 90W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ನೀಡಲಿದೆ. ಅಲ್ಲದೇ 120W ಫಾಸ್ಟ್‌ ಚಾರ್ಜಿಂಗ್ ಅಡಾಪ್ಟರ್ ಸೌಲಭ್ಯ ಇದ್ದು, 35 ನಿಮಿಷಗಳಲ್ಲಿ ಬ್ಯಾಟರಿ ಪೂರ್ಣ 100% ಚಾರ್ಜ್ ಮಾಡಲಿದೆ ಎನ್ನಲಾಗಿದೆ.

ಪೊಕೊ F6 ಫೋನ್‌ 8GB + 256GB ವೇರಿಯಂಟ್‌, 8GB + 256GB ವೇರಿಯಂಟ್‌ ಹಾಗೂ 12GB + 512GB ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಅಲ್ಲದೇ ಟೈಟಾನಿಮ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಈ ಫೋನಿನ ಫಸ್ಟ್‌ ಸೇಲ್‌ ಇದೇ ಮೇ 29 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಪ್ರಾರಂಭ ಆಗಿದೆ.

Best Mobiles in India

English summary
Poco F6 5G first sale Today via Flipkart website. Check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+