256GB ಸ್ಟೋರೇಜ್ ಇರುವ ಈ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
ದೈತ್ಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ 2024 (flipkart big saving days) ಇದೇ ಡಿಸೆಂಬರ್ 20 ರಿಂದ ಅದ್ಧೂರಿಯಾಗಿ ಶುರುವಾಗಲಿದೆ. ಈ ವಿಶೇಷ ಮಾರಾಟದಲ್ಲಿ ಕೆಲವು ಆಯ್ದ ಮೊಬೈಲ್‌ಗಳು ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಆಗಲಿವೆ. ಆ ಪೈಕಿ ಪೊಕೊ F6 5G ಮೊಬೈಲ್ (POCO F6 5G) ಮೊಬೈಲ್ ಸಹ ಒಂದಾಗಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಪೊಕೊ F6 5G (POCO F6 5G) ಸ್ಮಾರ್ಟ್‌ಫೋನ್ ಶೇ. 26% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 8 GB RAM + 256 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 24,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

ಇನ್ನು ಪೊಕೊ F6 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಇದು 8GB + 256GB, 8GB + 256GB ಹಾಗೂ 12GB + 512GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಪೊಕೊ F6 5G ಮೊಬೈಲ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಪೊಕೊ F6 5G ಮೊಬೈಲ್ ಫೀಚರ್ಸ್ ಹೀಗಿವೆ
ಪೊಕೊ F6 5G ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 2400 nits ಬ್ರೈಟ್ನೆಸ್ ಸಪೋರ್ಟ್ ಹೊಂದಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಸಪೋರ್ಟ್ ಸಹ ಇದೆ. ಅಲ್ಲದೇ HRD+, ಡಾಲ್ಬಿ ವಿಷನ್ ಆಯ್ಕೆಗಳು ಇವೆ.
ಪೊಕೊ F6 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 OS ಸಪೋರ್ಟ್ ಸಹ ಇದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂರು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB + 256 GB, 8GB + 256 GB ಮತ್ತು 12GB + 512 GB ಸ್ಟೋರೇಜ್ ವೇರಿಯಂಟ್ ಸಾಮರ್ಥ್ಯದ ಆಯ್ಕೆಯಲ್ಲಿ ಇವೆ.
ಪೊಕೊ F6 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. ಇನ್ನು ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್ ಅನ್ನು ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ 20 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಪೊಕೊ F6 5G ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ವ್ಯವಸ್ಥೆ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 90W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಒದಗಿಸಲಿದೆ. ಹಾಗೆಯೇ 120W ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಸೌಲಭ್ಯ ಇದ್ದು, 35 ನಿಮಿಷಗಳಲ್ಲಿ ಬ್ಯಾಟರಿ ಪೂರ್ಣ 100% ಚಾರ್ಜ್ ಮಾಡಲಿದೆ ಎನ್ನಲಾಗಿದೆ.
ಪೊಕೊ F6 5G ಮೊಬೈಲ್ 8GB + 256GB ವೇರಿಯಂಟ್, 8GB + 256GB ವೇರಿಯಂಟ್ ಹಾಗೂ 12GB + 512GB ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ. ಅಂದಹಾಗೆ ಇದು ಟೈಟಾನಿಮ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








