Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಡಲು ಸಿದ್ಧವಾಗ್ತಿದೆ 'ಪೊಕೊ F5'!..ಅಚ್ಚರಿಯ ಫೀಚರ್ಸ್‌!

ಜನಪ್ರಿಯ ಮೊಬೈಲ್‌ ಸಂಸ್ಥೆಗಳಲ್ಲಿ ಒಂದಾದ ಪೊಕೊ ಈಗಾಗಲೇ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸದ್ದು ಮಾಡಿದೆ. ಆ ಪೈಕಿ ತನ್ನ F ಸರಣಿಯಲ್ಲಿ ಇದೀಗ ನೂತನವಾಗಿ ಪೊಕೊ F6 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಕಲ ತಯಾರಿ ನಡೆಸಿದ್ದು, ಈ ಫೋನಿನ ಲೀಕ್ ಫೀಚರ್ಸ್‌ ಮೊಬೈಲ್‌ ಪ್ರಿಯರಲ್ಲಿ ಸಖತ್ ಗಮನ ಸೆಳೆದಿವೆ.

ಹೌದು, ಪೊಕೊ ಸಂಸ್ಥೆಯು ಹೊಸದಾಗಿ ಪೊಕೊ F6 ಸ್ಮಾರ್ಟ್‌ಫೋನ್‌ ಲಾಂಚ್ ಮಾಡಲು ಸಜ್ಜಾಗುತ್ತಿದೆ. ಅಂದಹಾಗೆ ಈ ಫೋನ್‌ ಈಗಾಗಲೇ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಪ್ರಮಾಣೀಕರಣದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ನೂತನ ಮೊಬೈಲ್‌ 2024 ರ ಮೊದಲ ತ್ರೈಮಾಸಿಕದಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡುವ ಸೂಚನೆ ನೀಡಿದೆ.

ಮಾರುಕಟ್ಟೆಗೆ ಎಂಟ್ರಿ ಕೊಡಲು ಸಿದ್ಧವಾಗ್ತಿದೆ 'ಪೊಕೊ F5'!..ಅಚ್ಚರಿಯ ಫೀಚರ್ಸ್‌!

ಪೊಕೊ F6 ಸ್ಮಾರ್ಟ್‌ಫೋನ್‌ ಸಂಸ್ಥೆಯ ಈ ಹಿಂದಿನ ಪೊಕೊ F5 ಫೋನಿನ ಉತ್ತರಾಧಿಕಾರಿ ಆಗಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8 ಜೆನ್‌ 2 ಪ್ರೊಸೆಸರ್‌ ಅನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ. ಹಾಗೆಯೇ ನೂತನ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿರಲಿದೆ. ಇನ್ನುಳಿದಂತೆ ಬರಲಿರುವ ಈ ಹೊಸ ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಪಡೆದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಪೊಕೊ F6 ಫೋನಿನ ನಿರೀಕ್ಷಿತ ಫೀಚರ್ಸ್‌

ಪೊಕೊ F6 ಮೊಬೈಲ್‌ 6.67 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಜೊತೆಗೆ HDR10+ ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಸೆಲ್ಫಿ ಕ್ಯಾಮೆರಾಗಾಗಿ ಪಂಚ್‌ಹೋಲ್ ಮಾದರಿಯ ರಚನೆ ಇರಲಿದೆ.

ಮಾರುಕಟ್ಟೆಗೆ ಎಂಟ್ರಿ ಕೊಡಲು ಸಿದ್ಧವಾಗ್ತಿದೆ 'ಪೊಕೊ F5'!..ಅಚ್ಚರಿಯ ಫೀಚರ್ಸ್‌!

ಇನ್ನು ಈ ಫೋನ್‌ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8 ಜೆನ್‌ 2 ಪ್ರೊಸೆಸರ್‌ ಸೌಲಭ್ಯ ಪಡೆದಿರುವ ಸಾಧ್ಯತೆಗಳು ಇವೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಆಯ್ಕೆಗಳಲ್ಲಿ ಎಂಟ್ರಿ ಕೊಡುವ ನಿರೀಕ್ಷೆಗಳು ಹೆಚ್ಚಿವೆ.

ಹಾಗೆಯೇ ಪೊಕೊ F6 ಮೊಬೈಲ್‌ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಅದಕ್ಕೆ ಅನುಗುಣವಾಗಿ 90W ಸೌಲಭ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಹೊಂದಿರುವ ನಿರೀಕ್ಷೆಗಳಿವೆ. ಹಾಗೆಯೇ ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಅನ್ನು ಪಡೆದಿರುವ ಸಾಧ್ಯತೆಗಳು ಇವೆ. ಇನ್ನು ಕನೆಕ್ಟಿವಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, ಜಿಪಿಎಸ್‌ ಮತ್ತು ಯುಎಸ್‌ಬಿ ಟೈಪ್-C ಪೋರ್ಟ್ ಅನ್ನು ಕೂಡಾ ಒಳಗೊಂಡಿರಬಹುದು.

ಮಾರುಕಟ್ಟೆಗೆ ಎಂಟ್ರಿ ಕೊಡಲು ಸಿದ್ಧವಾಗ್ತಿದೆ 'ಪೊಕೊ F5'!..ಅಚ್ಚರಿಯ ಫೀಚರ್ಸ್‌!

ಪೊಕೊ F5 5G ಫೀಚರ್ಸ್ ಹೀಗಿವೆ

ಪೊಕೊ F5 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 120Hz ವರೆಗೆ ಅಡಾಪ್ಟಿವ್ ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ.

ಹಾಗೆಯೇ ಇದು ಸ್ನಾಪ್‌ಡ್ರಾಗನ್ 7+ ಜೆನ್‌ 2 SoC ಪ್ರೊಸೆಸರ್‌ ಪವರ್ ಪಡೆದಿದ್ದು, ಆಂಡ್ರಾಯ್ಡ್‌ 13 ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಕೂಡಾ ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

Best Mobiles in India

English summary
POCO F6 Phone Might Debut Indian Market as well as Globally Very Soon. Expected Features and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+