ಅಬ್ಬರಿಸೋಕೆ ರೆಡಿ ಆಗ್ತಿದೆ ಪೊಕೊ M6 ಪ್ರೊ 5G ; ಬಿಡುಗಡೆ ಯಾವಾಗ?
ಇತ್ತೀಚಿನ ದಿನಗಳಲ್ಲಿ ಪೊಕೊ ಕಂಪೆನಿ ಕೂಡ ಪ್ರಮುಖ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಆಗಿ ಗುರುತಿಸಿಕೊಳ್ಳುತ್ತಿದೆ. ತನ್ನ ಬಜೆಟ್ ಸ್ನೇಹಿ ಹಾಗೂ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದಲ್ಲಿ ತನ್ನದೇ ಆದ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಅದರ ಭಾಗವೆಂಬಂತೆ ಪೊಕೊ ಬ್ರ್ಯಾಂಡ್ ಹೊಸ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸಿದೆ.
ಹೌದು, ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧವಾಗಿದೆ ಎಂಬ ಸುದ್ದಿ ಟೆಕ್ ವಲಯದಲ್ಲಿ ಹರಿದಾಡಿದೆ. ಅದರಂತೆ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ M6 ಪ್ರೊ 5G ಡಿಸ್‌ಪ್ಲೇ ರಚನೆ ಹೇಗಿರಲಿದೆ?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೂ ಕೂಡ ಆನ್‌ಲೈನ್‌ನಲ್ಲಿ ಕೆಲವು ವೆಬ್‌ಸೈಟ್‌ಗಳು ವರದಿ ಮಾಡಿರುವಂತೆ ಈ ಸ್ಮಾರ್ಟ್‌ಫೋನ್ 6.79-ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದಲ್ಲದೆ ಸ್ಕ್ರೀನ್ ಟು ಬಾಡಿ ಅನುಪಾತ 85.24 % ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಪೊಕೊ M6 ಪ್ರೊ 5G ಪ್ರೊಸೆಸರ್ ಯಾವುದು?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 4 Gen 2 SoC ಪ್ರೊಸೆಸರ್ ವೇಗದಲ್ಲಿ ಬರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಪೊಕೊ M6 ಪ್ರೊ 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಇದರಲ್ಲಿ ನೀಡಲಾಗಿರುತ್ತದೆ ಎಂದು ವರದಿಯಾಗಿದೆ. ಇದರೊಂದಿಗೆ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಎಲ್ಇಡಿ ಫ್ಲ್ಯಾಷ್ ಕೂಡ ಇರಲಿದೆ ಎಂದು ಅಂದಾಜಿಸಲಾಗಿದೆ.
ಪೊಕೊ M6 ಪ್ರೊ 5G ಬ್ಯಾಟರಿ ಸಾಮರ್ಥ್ಯ ಎಷ್ಟಿದೆ?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು 18W ಚಾರ್ಜಿಂಗ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಟೈಪ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಬಹುದು.
ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎನ್ನಬಹುದು. ಇದಕ್ಕಾಗಿಯೇ 'Ready to disrupt the 5G game!' ಎಂದು ಟ್ವಿಟ್‌ನಲ್ಲಿ ಹೇಳಲಾಗಿದೆ. ಇದನ್ನು ಗಮನಿಸಿದರೆ ಈ ಸ್ಮಾರ್ಟ್‌ಫೋನ್ ಗೇಮರ್‌ಗಳಿಗೆ ಪೂರಕವಾದ ಹಾಗೂ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಬಂದು ಅಪ್ಪಳಿಸಲಿದೆ ಎನ್ನಬಹುದು. ಆದರೆ ಇದೆಲ್ಲದಕ್ಕೂ ಉತ್ತರ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗವಾದ ನಂತರ ತಿಳಿದುಬರಲಿದೆ.


Click it and Unblock the Notifications








