ಸದ್ಯದಲ್ಲೇ ಬರಲಿದೆ ಬಜೆಟ್ ದರದ ಪೊಕೊ M2 ಸ್ಮಾರ್ಟ್‌ಫೋನ್!

|

ಪೊಕೊ ಮೊಬೈಲ್ ಬ್ರ್ಯಾಂಡ್‌ ಈಗಾಗಲೇ ಬಜೆಟ್‌ ದರದಲ್ಲಿ ಹಲವು ನೂತನ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿ ಗ್ರಾಹಕರನ್ನು ಆಕರ್ಷಿಸಿದೆ. ಇದೀಗ ಕಂಪನಿಯು ಹೊಸದಾಗಿ ಪೊಕೊ M2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಇದೀಗ ಲೀಕ್ ಆಗಿದ್ದು, ಗ್ರಾಹಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿವೆ.

 ಪೊಕೊ M2

ಹೌದು, ಪೊಕೊ ಸಂಸ್ಥೆಯು ನೂತನವಾಗಿ ಪೊಕೊ M2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ, ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿರುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ 5000mAh ಬ್ಯಾಟರಿ ನೀಡುವ ಸಾಧ್ಯತೆಗಳು ಹೆಚ್ಚಿವೆ. ಲೀಕ್ ಮಾಹಿತಿಯಂತೆ ಪೊಕೊ M2 ಫೋನಿನ ಇತರೆ ಫೀಚರ್ಸ್‌ಗಳು ಹೇಗಿರಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ

ಡಿಸ್‌ಪ್ಲೇ ಮತ್ತು ರಚನೆ

ಪೊಕೊ M2 ಸ್ಮಾರ್ಟ್‌ಫೋನ್ 6.5 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಡಿಸ್‌ಪ್ಲೇಯ ರೆಸಲ್ಯೂಶನ್ ಸಾಮರ್ಥ್ಯವು 1080p ಆಗಿರಲಿದೆ. ವಿಶಾಲವಾದ ಡಿಸ್‌ಪ್ಲೇಯು ಇರಲಿದ್ದು, ವಿಡಿಯೊ ವೀಕ್ಷಣೆಗೆ ಮತ್ತು ಗೇಮಿಂಗ್‌ಗೆ ಅತ್ಯುತ್ತಮ ವಾಗಿರಲಿದೆ.

ಪ್ರೊಸೆಸರ್ ಸಾಮರ್ಥ್ಯವೆನು

ಪ್ರೊಸೆಸರ್ ಸಾಮರ್ಥ್ಯವೆನು

ಪೊಕೊ M2 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್‌ 10 ಓಎಸ್‌ ಬೆಂಬಲ ಪಡೆದುಕೊಂಡಿರಲಿದೆ. ಇದರೊಂದಿಗೆ 6GB RAM + 64GB ವೇರಿಯಂಟ್ ಆಯ್ಕೆ ಇರುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

ಕ್ವಾಡ್ ಕ್ಯಾಮೆರಾ ವಿಶೇಷ

ಕ್ವಾಡ್ ಕ್ಯಾಮೆರಾ ವಿಶೇಷ

ಪೊಕೊ M2 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಕ್ಯಾಮೆರಾ ಆಗಿರಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದೆ. ಹಾಗೆಯೇ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯನಲ್ಲಿರಲಿವೆ. ಸೆಲ್ಫಿ ಕ್ಯಾಮೆರಾವು 16ಎಂಪಿ ಇರಲಿದೆ

ಬ್ಯಾಟರಿ ಬಲ

ಬ್ಯಾಟರಿ ಬಲ

ಪೊಕೊ M2 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರಲಿದೆ. ಇದರೊಂದಿಗೆ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿರಲಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಎನ್‌ಎಫ್‌ಸಿ, ಜಿಪಿಎಸ್‌, ಯುಎಸ್‌ಬಿ, ಬ್ಲೂಟೂತ್, ಆಯ್ಕೆಗಳು ಇರಲಿವೆ.

ಲಭ್ಯತೆ

ಲಭ್ಯತೆ

ಪೊಕೊ M2 ಸ್ಮಾರ್ಟ್‌ಫೋನ್ ಇದೇ ಸೆಪ್ಟಂಬರ್ 8 ರಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಲಾಂಚ್ ಆಗುವುದು ಖಚಿತ ಎಂದು ಹೇಳಲಾಗಿದೆ. ಇನ್ನು ಈ ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಹೊಂದಿರಲಿದೆ.

Best Mobiles in India

English summary
Poco is set to introduce its M2 in the Indian market on 8 September.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X