ಇಂದು ಬಜೆಟ್ ಬೆಲೆಯ ಪೊಕೊ M2 ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!
ಪೊಕೊ ಮೊಬೈಲ್ ಕಂಪನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಪೊಕೊ M2 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ.15) ಮಧ್ಯಾಹ್ನ 12ರಿಂದ ಇ-ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 10,999ರೂ.ಗಳು ಆಗಿದೆ.

ಹೌದು, ಪೊಕೊ M2 ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ, ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ 6GB RAM ಮತ್ತು 64GB ಹಾಗೂ 6GB RAM ಮತ್ತು 128GB ವೇರಿಯಂಟ್ ಮಾದರಿಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್
ಪೊಕೊ M2 ಸ್ಮಾರ್ಟ್‌ಪೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದ್ದು, 60 Hz ರೀಫ್ರೇಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ.

ಯಾವ ಪ್ರೊಸೆಸರ್
ಪೊಕೊ M2 ಸ್ಮಾರ್ಟ್‌ಪೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದಿದೆ. 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್
ಪೊಕೊ M2 ಸ್ಮಾರ್ಟ್‌ಪೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಪೊಕೊ M2 ಸ್ಮಾರ್ಟ್‌ಪೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ M2 ಸ್ಮಾರ್ಟ್‌ಪೋನ್ 6GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಬೆಲೆಯು 10,999ರೂ. ಆಗಿದೆ. ಹಾಗೂ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 12,499ರೂ. ಆಗಿದೆ. ಇಂದು (ಸೆಪ್ಟೆಂಬರ್ 15ರಂದು) ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್ ತಾಣದಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ.


Click it and Unblock the Notifications








