ಭಾರತದಲ್ಲಿ ಪೊಕೊ M2 ಮತ್ತು ಪೊಕೊ C3 ಸ್ಮಾರ್ಟ್‌ಫೋನ್‌ಗಳ ಬೆಲೆ ಕಡಿತ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಪೊಕೊ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಪೊಕೊ ಕಂಪೆನಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಸದ್ಯ ಇದೀಗ ಪೊಕೊ ಕಂಪೆನಿ ತನ್ನ ಎರಡು ಸ್ಮಾರ್ಟ್‌ಫೋನ್‌ಗಳ ಮೇಲೆ ಬೆಲೆ ಕಡಿತವನ್ನು ಮಾಡಿದ್ದು, ಪೊಕೊ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ಇದು ಸದಾವಕಾಶವಾಗಿದೆ.

ಪೊಕೊ

ಹೌದು, ಪೊಕೊ ಕಂಪೆನಿ ತನ್ನ ಪೊಕೊ C3 ಮತ್ತು ಪೊಕೊ M2 ಸ್ಮಾರ್ಟ್‌ಫೋನ್‌ಗಳ ಮೇಲೆ ಬೆಲೆ ಕಡಿತವನ್ನು ಘೋಷಿಸಿದೆ. ಸದ್ಯ ಎರಡು ಸ್ಮಾರ್ಟ್‌ಫೋನ್‌ಳ ಮೇಲೂ 1,500 ರೂ ನಷ್ಟು ಬೆಲೆ ಕಡಿತವನ್ನು ಮಾಡಲಾಗಿದ್ದು, ಗ್ರಾಹಕರಿಗೆ ಇದು ಉತ್ತಮ ಅವಕಾಶವಾಗಿದೆ. ಇನ್ನು ಈ ಬೆಲೆ ಕಡಿತ ಶಾಶ್ವತ ಹಾಗೂ ಸೀಮಿತ ಅವಧಿಯ ಕೊಡುಗೆಗಳಲ್ಲಿ ಅನ್ನೊದನ್ನು ಸಹ ನಾವು ಗಮನಿಸಬೇಕಾಗಿದೆ. ಹಾಗಾದ್ರೆ ಈ ಬೆಲೆ ಕಡಿತದ ನಂತರ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವ ಬೆಲೆಗೆ ಲಭ್ಯವಾಗಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ

ಪೊಕೊ ಸಂಸ್ಥೆ ಬೆಲೆ ಕಡಿತವನ್ನು ಘೋಷಿಸಿದ ನಂತರ ಪೊಕೊ M2 ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಸ್ಟೋರೇಜ್‌ ಸಾಮರ್ಥ್ಯ ಹೊಂದಿರುವ ಮೂಲ ರೂಪಾಂತರಕ್ಕೆ ಕೇವಲ 9,999 ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 1,000 ರೂ. ಬೆಲೆ ಕಡಿತ ಮಾಡಲಾಗಿದೆ. ಇನ್ನು ಪೊಕೊ M2ನ 128GB ರೂಪಾಂತರಕ್ಕೆ 1,500 ರೂ.ಗಳ ಬೆಲೆ ಕಡಿತವನ್ನು ಮಾಡಿದ್ದು, ಇದರ ಬೆಲೆ ಇದೀಗ 10,499 ರೂ.ಗಳಿಗೆ ಇಳಿದಿದೆ. ಆದರೆ ಪೊಕೊ C3 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಹೇಳಿಕೊಳ್ಳುವ ಬದಲಾವಣೆ ಆಗಿಲ್ಲ. ಆದರೂ ಸಹ ಪೊಕೊ C3 ಸ್ಮಾರ್ಟ್‌ಫೋನ್‌ 4GB RAM ಮತ್ತು 64 GB ಸ್ಟೋರೇಜ್ ಹೊಂದಿರುವ ಟಾಪ್ ರೂಪಾಂತರವು 8,499 ರೂ. ಬೆಲೆಗೆ ಲಭ್ಯವಾಗಲಿದೆ.

ಪೊಕೊ M2

ಪೊಕೊ M2

ಇನ್ನು ಪೊಕೊ M2 ಸ್ಮಾರ್ಟ್‌ಫೋನ್‌ 6.53-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿವೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಪೊಕೊ C3

ಪೊಕೊ C3

ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ವಾಟರ್‌ಡ್ರಾಪ್ ನಾಚ್ ಮತ್ತು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 10W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Most Read Articles
Best Mobiles in India

English summary
The Poco M2 and Poco C3 have got new price tags in the new year. The M2 is one of the cheapest 6GB RAM phones you can buy.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X