Home
ಸುದ್ದಿಜಾಲ

ಪೊಕೊ M2 ಪ್ರೊ ಫೋನಿಗೆ ಬಿಗ್ ಆಫರ್‌!..ಬೆಲೆ ತಿಳಿದ್ರೆ, ಅಚ್ಚರಿ ಪಡ್ತೀರಾ!

ಪೊಕೊ ಸಂಸ್ಥೆಯು ತನ್ನ M ಸರಣಿಯಲ್ಲಿ ಕೆಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಅವುಗಳಲ್ಲಿ ಒಂದಾದ ಪೊಕೊ M2 ಪ್ರೊ ಮೊಬೈಲ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಫೋನ್‌ ಪ್ರಿಯರ ಮನಗೆದ್ದಿದೆ. ಇದೀಗ ಫ್ಲಿಪ್‌ಕಾರ್ಟ್‌ ಈ ಕಾಮರ್ಸ್‌ ತಾಣದಲ್ಲಿ ಸಖತ್ ಡಿಸ್ಕೌಂಟ್‌ ಪಡೆದಿದ್ದು, ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ಪೊಕೊ M2 ಪ್ರೊ ಫೋನ್ ನೇರವಾಗಿ ಶೇ. 41% ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಹೀಗಾಗಿ ಈ ಮೊಬೈಲ್‌ 6 GB RAM + 64 GB ಸ್ಟೋರೇಜ್‌ ವೇರಿಯಂಟ್‌ 17,999 ರೂ. ಬೆಲೆ ಅನ್ನು ಪಡೆದುಕೊಂಡಿದ್ದು, ಆಫರ್‌ ದರದಲ್ಲಿ 10,490ರೂ. ಗಳಿಗೆ ಗ್ರಾಹಕರು ಖರೀದಿಸಲು ಮಾಡಬಹುದು. ಇದಲ್ಲದೇ ಗ್ರಾಹಕರಿಗೆ ಆಯ್ದ ಬ್ಯಾಂಕ್‌ ಆಫರ್‌ ಸೌಲಭ್ಯ ಸಹ ಲಭ್ಯ.

ಪೊಕೊ M2 ಪ್ರೊ ಫೋನಿಗೆ ಬಿಗ್ ಆಫರ್‌!..ಬೆಲೆ ತಿಳಿದ್ರೆ, ಅಚ್ಚರಿ ಪಡ್ತೀರಾ!

ಅಂದಹಾಗೆ ಈ ಮೊಬೈಲ್‌ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿದ್ದು, ಜೊತೆಗೆ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5,020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ 4GB+ 64GB ಹಾಗೂ 6GB + 128GB ವೇರಿಯಂಟ್ ಮಾದರಿಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್ ರಚನೆ

ಪೊಕೊ M2 ಪ್ರೊ ಮೊಬೈಲ್‌ 1,080 x 2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ.

ಪೊಕೊ M2 ಪ್ರೊ ಫೋನಿಗೆ ಬಿಗ್ ಆಫರ್‌!..ಬೆಲೆ ತಿಳಿದ್ರೆ, ಅಚ್ಚರಿ ಪಡ್ತೀರಾ!

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಈ ಮೊಬೈಲ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720 G SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 11 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಆಂತರೀಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ರಚನೆಯ ಮಾಹಿತಿ

ಪೊಕೊ M2 ಪ್ರೊ ಮೊಬೈಲ್‌ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್‌ ಕ್ಯಾಮೆರಾ ಸೆನ್ಸಾರ್‌, ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಪಡೆದಿದೆ.

ಪೊಕೊ M2 ಪ್ರೊ ಫೋನಿಗೆ ಬಿಗ್ ಆಫರ್‌!..ಬೆಲೆ ತಿಳಿದ್ರೆ, ಅಚ್ಚರಿ ಪಡ್ತೀರಾ!

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M2 ಪ್ರೊ ಮೊಬೈಲ್‌ 5,020mAh ಸಾಮರ್ಥ್ಯದ ಬ್ಯಾಟರಿ ರಚನೆ ಅನ್ನು ಹೊಂದಿದ್ದು, 33w ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಸೌಲಭ್ಯ ಇದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಪಡೆದಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಹಾಗೂ 6GB RAM + 128GB ಸ್ಟೋರೇಜ್ ಮಾದರಿ ಅನ್ನು ಹೊಂದಿದೆ. ಇನ್ನು ಈ ಫೋನ್ ಔಟ್ ಆಫ್ ದಿ ಬ್ಲೂ, ಗ್ರೀನ್ ಮತ್ತು ಗ್ರೀನರ್, ಟು ಶೇಡ್ಸ್ ಆಫ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
POCO M2 Pro price cut by 41% in flipkart website. check offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+