Home
ಸುದ್ದಿಜಾಲ

ಪೊಕೊ M2 ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಜಸ್ಟ್‌ 10,999ರೂ!

ಕಡಿಮೆ ಅವಧಿಯಲ್ಲಿ ಮೊಬೈಲ್ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ಪೊಕೊ ಬ್ರ್ಯಾಂಡ್‌ ಈಗಾಗಲೇ ಕೆಲವು ಮಾಡೆಲ್‌ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇತ್ತೀಚಿಗಷ್ಟೆ ಪೊಕೊ M2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಗ್ರಾಹಕರನ್ನು ಸೆಳೆದಿತ್ತು. ಇದೀಗ ಮತ್ತೆ ಅದೇ ಸರಣಿಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಪೊಕೊ M2 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ.

ಪೊಕೊ M2

ಹೌದು, ಪೊಕೊ ಕಂಪೆನಿ ತನ್ನ ಬಹುನಿರೀಕ್ಷಿತ ಪೊಕೊ M2 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಪೊಕೊ M2 ಸ್ಮಾರ್ಟ್‌ಪೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, 60 Hz ರೀಫ್ರೇಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್‌ ಸೌಲಭ್ಯವನ್ನು ಪಡೆದಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಪೊಕೊ M2 ಸ್ಮಾರ್ಟ್‌ಪೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಬೆಂಬಲವನ್ನು ಪಡೆದಿದೆ. 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಪೊಕೊ M2 ಸ್ಮಾರ್ಟ್‌ಪೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್‌ ಕ್ಯಾಮೆರಾ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M2 ಸ್ಮಾರ್ಟ್‌ಪೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ M2 ಸ್ಮಾರ್ಟ್‌ಪೋನ್‌ 6GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 10,999ರೂ. ಆಗಿದೆ. ಹಾಗೂ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ಬೆಲೆಯು 12,499ರೂ. ಆಗಿದೆ. ಸೆಪ್ಟೆಂಬರ್ 15ರಂದು ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ.

Best Mobiles in India

English summary
Poco also noted that the first sale of the device is scheduled for September 15 at 12 noon on Flipkart.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+