Just In
Don't Miss
- Lifestyle
ಬುಧವಾರದ ಭವಿಷ್ಯ: ಇಂದು ಯಾವ ರಾಶಿಯವರಿಗೆ ಅದೃಷ್ಟದ ದಿನ
- News
ಆಸ್ಪತ್ರೆಗೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಆರಂಭಿಸಿದ BPCL
- Sports
ಐಪಿಎಲ್ 2021: ಅಂಕಪಟ್ಟಿಯಲ್ಲಿ ಚೆನ್ನೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಡೆಲ್ಲಿ
- Automobiles
ಕೋವಿಡ್ ಅಬ್ಬರ: ಸ್ಟೀಲ್ಬರ್ಡ್ ಫೇಸ್-ಶೀಲ್ಡ್ಗಳಿಗೆ ಭರ್ಜರಿ ಬೇಡಿಕೆ
- Movies
ಚಿತ್ರಮಂದಿರಗಳು ಸಂಪೂರ್ಣ ಬಂದ್: ಸರ್ಕಾರ ಆದೇಶ
- Finance
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಏಪ್ರಿಲ್ 20ರ ಮಾರುಕಟ್ಟೆ ದರ ಇಲ್ಲಿದೆ
- Education
UGC NET 2021 May Exam: ಯುಜಿಸಿ ಎನ್ಇಟಿ ಮೇ ಪರೀಕ್ಷೆ ಮುಂದೂಡಿಕೆ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಗ್ಗದ ಬೆಲೆಯ ಪೊಕೊ M3 ಸ್ಮಾರ್ಟ್‌ಫೋನ್ ದಾಖಲೆಯ ಮಾರಾಟ!
ಪೊಕೊ ಮೊಬೈಲ್ ಕಂಪನಿಯು ಇದೇ ಫೆಬ್ರುವರಿ 2ರಂದು ಭಾರತದಲ್ಲಿ ಬಿಡುಗಡೆ ಮಾಡಿದ್ದ ಪೊಕೊ M3 ಸ್ಮಾರ್ಟ್‌ಫೋನ್ ಭರ್ಜರಿ ಮಾರಾಟ ಕಂಡು ಹೊಸ ದಾಖಲೆ ಬರೆದಿದೆ. ಪೊಕೊ M3 ಸ್ಮಾರ್ಟ್‌ಫೋನಿನ ಫಸ್ಟ್ ಸೇಲ್ ಮೊದಲ ಸೇಲ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಫೆ.9ರಂದು (ನೆನ್ನೆ) ನಡೆದಿದ್ದು, ಈ ವೇಳೆ 1,50,000ಕ್ಕೂ ಹೆಚ್ಚು ಯುನಿಟ್‌ಗಳನ್ನು ಮಾರಾಟ ಮಾಡಿದೆ ಎಂದು ಪೊಕೊ ಕಂಪನಿಯು ಹೇಳಿಕೊಂಡಿದೆ.

ಹೌದು, ಪೊಕೊ ಕಂಪನಿಯು ಬಜೆಟ್ ಬೆಲೆಯಲ್ಲಿ ಪೊಕೊ M3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ದಿನದಂದೇ ಪೊಕೊ M3 ಫೋನ್ 1,50,000ಕ್ಕೂ ಹೆಚ್ಚಿನ ಯುನಿಟ್‌ಗಳು ಮಾರಾಟ ಆಗಿವೆ. ಇದಲ್ಲದೇ ಸುಮಾರು ಇನ್ನೂ 30 ಲಕ್ಷ ಜನರು ಪೊಕೊ M3 ಫೋನ್ ಖರೀದಿಸಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಇದೇ ಫೆಬ್ರುವರಿ 16ರಂದು ಮತ್ತೆ ಸೇಲ್ ನಡೆಸುವುದಾಗಿ ಫ್ಲಿಪ್‌ಕಾರ್ಟ್ ಹೇಳಿದೆ. ಈ ಫೋನ್ ಬಜೆಟ್ ದರದಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಹಾಗಾದರೇ ಪೊಕೊ M3 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಪೊಕೊ M3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು
ಪೊಕೊ M3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್
ಪೊಕೊ M3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M3 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪೊಕೊ M3 ಬೆಲೆ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಹಾಗೂ 6GB RAM + 128GB ಶೇಖರಣಾ ಮಾದರಿಯ ಬೆಲೆ 11,999 ರೂ. ಆಗಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999