Home
ಸುದ್ದಿಜಾಲ

ಪೊಕೊ M3 ಮತ್ತು ರೆಡ್ಮಿ ನೋಟ್ 10 ಫೋನ್‌ ಖರೀದಿಸುವ ಗ್ರಾಹಕರೇ ಇಲ್ಲಿ ಗಮನಿಸಿ!

ಸದ್ಯ ಮೊಬೈಲ್‌ ವಲಯದಲ್ಲಿ ಪೈಪೋಟಿ ವಾತಾವರಣ ಇದ್ದು, ಪ್ರಮುಖ ಮೊಬೈಲ್ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಸರ್ಕಸ್ ಮಾಡುತ್ತಿವೆ. ಮುಖ್ಯವಾಗಿ ಬಜೆಟ್‌ ಪ್ರೈಸ್‌ನಲ್ಲಿ ಆಕರ್ಷಕ ಫೀಚರ್ಸ್‌ಗಳಿರುವ ಫೋನ್‌ ಲಾಂಚ್ ಮಾಡುತ್ತಿವೆ. ಅದಾಗ್ಯೂ ಕೆಲವು ಕಂಪನಿಗಳ ಸ್ಮಾರ್ಟ್‌ಫೋನ್‌ಗಳು ಮಾತ್ರ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿ ಆಗುತ್ತವೆ. ಹೀಗೆ ಗ್ರಾಹಕರನ್ನು ಆಕರ್ಷಿಸಿರುವ ಇತ್ತೀಚಿಗಿನ ಬಜೆಟ್‌ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಈಗ ಏರಿಕೆ ಕಂಡು ಬಂದಿದೆ.

ಇತ್ತೀಚಿಗಷ್ಟೆ

ಹೌದು, ಶಿಯೋಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಮತ್ತು ಪೊಕೊ ಕಂಪನಿಯ ನೂತನ ಪೊಕೊ M3 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಏರಿಕೆ ಆಗಿದೆ. ಈ ಎರಡು ಫೋನ್‌ಗಳ ಬೇಸ್‌ ವೇರಿಯಂಟ್‌ ಬೆಲೆಯಲ್ಲಿ 500ರೂ. ಹೆಚ್ಚಳ ಕಂಡಿವೆ. ಹಾಗಾದರೇ ಪೊಕೊ M3 ಮತ್ತು ರೆಡ್ಮಿ ನೋಟ್ 10 ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್‌ಮಿ ನೋಟ್ 10 ಡಿಸ್‌ಪ್ಲೇ

ರೆಡ್‌ಮಿ ನೋಟ್ 10 ಡಿಸ್‌ಪ್ಲೇ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ರೆಡ್‌ಮಿ ನೋಟ್ 10 ಪ್ರೊಸೆಸರ್‌

ರೆಡ್‌ಮಿ ನೋಟ್ 10 ಪ್ರೊಸೆಸರ್‌

ರೆಡ್‌ಮಿ ನೋಟ್ 10 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ರೆಡ್‌ಮಿ ನೋಟ್ 10 ಕ್ಯಾಮೆರಾ

ರೆಡ್‌ಮಿ ನೋಟ್ 10 ಕ್ಯಾಮೆರಾ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಪೊಕೊ M3 ಡಿಸ್‌ಪ್ಲೇ

ಪೊಕೊ M3 ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪೊಕೊ M3 ಪ್ರೊಸೆಸರ್‌

ಪೊಕೊ M3 ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಪೊಕೊ M3 ಕ್ಯಾಮೆರಾ

ಪೊಕೊ M3 ಕ್ಯಾಮೆರಾ

ಪೊಕೊ M3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಪೊಕೊ M3 ಬ್ಯಾಟರಿ

ಪೊಕೊ M3 ಬ್ಯಾಟರಿ

ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-ಸಿ ಆಯ್ಕೆ ಪಡೆದಿದೆ.

Best Mobiles in India

English summary
Poco M3 And Redmi Note 10 Price Hike In India Again By Rs 500.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+